Nandini Milk: ನಂದಿನಿ ಹಾಲಿನ ದರ 3 ರೂ. ಹೆಚ್ಚಳ

Public TV
1 Min Read
NANDINI MILK

ಬೆಂಗಳೂರು: ನಂದಿನಿ ಹಾಲಿನ (Nandini Milk) ದರವನ್ನು ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡುವ ಕೆಎಂಎಫ್‌ (KMF) ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ.

ಶುಕ್ರವಾರ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್‌ ಅಧ್ಯಕ್ಷರ ಸಭೆ ನಡೆಸಲಾಯಿತು. ಈ ವೇಳೆ ಹಾಲಿನ ದರ ಹೆಚ್ಚಳಕ್ಕೆ ಸರ್ಕಾರ ಒಪ್ಪಿಕೊಂಡಿದೆ. ಆಗಸ್ಟ್ 1 ರಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಶಾಸಕತ್ವ ಅಸಿಂಧು ಕೋರಿ ಅರ್ಜಿ – ಜು.28 ಕ್ಕೆ ಹೈಕೋರ್ಟ್‌ನಿಂದ ವಿಚಾರಣೆ

KMF meeting

KMF ಪ್ರತಿ ಲೀಟರ್‌ ಹಾಲಿನ ದರದಲ್ಲಿ 5 ರೂ. ಹೆಚ್ಚಳ ಮಾಡುವಂತೆ ಪ್ರಸ್ತಾವ ಸಲ್ಲಿಸಿತ್ತು. ಕೊನೆಗೆ ಸರ್ಕಾರ 3 ರೂ. ಹೆಚ್ಚಳಕ್ಕೆ ಒಪ್ಪಿಗೆ ನೀಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಹೆಚ್‌.ಡಿ.ರೇವಣ್ಣ, 5 ರೂ. ದರ ಏರಿಕೆಗೆ ಪ್ರಸ್ತಾಪವಿತ್ತು. 3 ರೂ. ದರ ಹೆಚ್ಚಳಕ್ಕೆ ಸಿಎಂ ಒಪ್ಪಿಗೆ ನೀಡಿದ್ದಾರೆ. ರೈತರಿಂದ ಖರೀದಿ ಮಾಡುವ ಹಾಲಿಗೆ ಪ್ರತಿ ಲೀಟರ್‌ಗೆ 3 ರೂ. ದರ ಹೆಚ್ಚಳವಾದಂತಾಗಿದೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್‌ ಪ್ರಸಾದ್‌, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಂ, ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಜಗದೀಶ್‌, ಕೆಎಂಎಫ್ ನಿರ್ದೇಶಕ ಹೆಚ್.ಡಿ.ರೇವಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮಾಲೂರು ಶಾಸಕ ನಂಜೇಗೌಡ ಸೇರಿದಂತೆ ಹಲವರು ಸಭೆಯಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಕುರುಡನ ಹೆಗಲ ಮೇಲೆ ಕುಂಟನ ಸವಾರಿಯಂತಿದೆ ಜೆಡಿಎಸ್‌-ಬಿಜೆಪಿ ಹೊಂದಾಣಿಕೆ: ಕಾಲೆಳೆದ ಕಾಂಗ್ರೆಸ್‌

Web Stories

Share This Article