ನಂದಿನಿ ಹಾಲಿನ ದರ 4 ರೂ. ಹೆಚ್ಚಳ – ರೈತರಿಗೆ ಪೂರ್ಣ ಹಣ ವರ್ಗಾವಣೆಗೆ ಕ್ಯಾಬಿನೆಟ್ ತೀರ್ಮಾನ

Public TV
2 Min Read
NANDINI MILK

ಬೆಂಗಳೂರು: ಬಸ್, ಮೆಟ್ರೋ ದರ ಏರಿಕೆ ಬಳಿಕ ಇದೀಗ ರಾಜ್ಯದಲ್ಲಿ ಹಾಲಿನ ದರ ಏರಿಕೆ (Milk Price Hike) ಮಾಡುವ ಮೂಲಕ ರಾಜ್ಯದ ಜನತೆಗೆ ದೊಡ್ಡ ಶಾಕ್‌ ಕೊಟ್ಟಿದೆ. ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ರಾಜ್ಯದ ಜನತೆಗೆ ದರ ಏರಿಕೆಯ ಬಿಸಿ ಮುಟ್ಟಿಸಿದೆ.

ಪ್ರತಿ ಲೀಟರ್‌ ನಂದಿನಿ ಹಾಲಿನ (Nandini Milk) ದರ 4 ರೂ. ಹೆಚ್ಚಳ ಮಾಡಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ಏಪ್ರಿಲ್ 1ರಿಂದ ನೂತನ ದರ ಜಾರಿ ಆಗಲಿದೆ.

ಅಲ್ಲದೆ ಈ ಹಿಂದೆ ಅರ್ಧ ಲೀಟರ್ ಪ್ಯಾಕೆಟ್ ಹಾಲಿಗೆ 50ml ಹೆಚ್ಚುವರಿ ಹಾಲು, 2 ರೂಪಾಯಿ ಹೆಚ್ಚುವರಿ ಹಣವನ್ನ ವಾಪಸ್ ಪಡೆಯಲು ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ.‌ ಇನ್ನು ಕ್ಯಾಬಿನೆಟ್ ತೀರ್ಮಾನದಿಂದಾಗಿ ರೈತರಿಗೆ ಪ್ರತಿ ಲೀಟರ್ ಹಾಲಿಗೆ ಕೊಡ್ತಿದ್ದ 31 ರೂಪಾಯಿ 68 ಪೈಸೆ ಹಣ ಇನ್ನು ಮುಂದೆ 35 ರೂಪಾಯಿ 68 ಪೈಸೆ ಹಣ ಕೊಡಬೇಕಾಗುತ್ತೆ.

nandini milk kmf

ಯಾವ ಹಾಲಿನ ದರ ಎಷ್ಟಾಗಬಹುದು?

– ನೀಲಿ‌ ಪ್ಯಾಕೆಟ್ ಹಾಲು – 44 ರೂ ನಿಂದ 48 ರೂ
– ಆರೆಂಜ್ ಪ್ಯಾಕೆಟ್ ಹಾಲು – 54 ರೂ‌. ನಿಂದ 58  ರೂ.
– ಸಮೃದ್ಧಿ ಹಾಲಿನ‌ ಪ್ಯಾಕೆಟ್ 56 ರೂ. ನಿಂದ 60 ರೂ.
– ಗ್ರೀನ್ ಸ್ಪೇಷಲ್ 54 ರೂ. ನಿಂದ 58 ರೂ.
– ನಾರ್ಮಲ್ ಗ್ರೀನ್ 52 ರೂ. ನಿಂದ 56 ರೂ.

NANDINI MILK 4

6-8 ರೂ. ಹಾಲಿನ ದರ ಹೆಚ್ಚಳಕ್ಕೆ ಒಕ್ಕೂಟಗಳು ಪ್ರಸ್ತಾಪಿಸಿದ್ದವು. ಆದರೆ ಸೋಮವಾರ ನಡೆದ ಸಭೆಯಲ್ಲಿ ಸಿಎಂ ಈ ದರಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ. ಹಾಲಿನ ದರ ಹೆಚ್ಚಳ ಹಣ ಕೇವಲ ರೈತರಿಗಷ್ಟೇ ಇರಲಿ ಎಂದಿದ್ದರು. ಆದರೆ ಸಭೆಯ ಬಳಿಕ 5 ರೂ.ಯಾದರೂ ಹೆಚ್ಚಳ ಮಾಡಿ, ಅದರಲ್ಲಿ 3 ರೂ. ರೈತರಿಗೆ, 2 ರೂ. ಒಕ್ಕೂಟಗಳಿಗೆ ಇರಲಿ ಎಂದು ಪ್ರಸ್ತಾಪಿಸಿದ್ದರು. ಆದ್ರೆ ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ 4 ರೂ. ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ ಸೂಚಿಸಿದೆ.

Share This Article