ಮೈಸೂರು: ಬ್ಯಾಂಕ್ ಮ್ಯಾನೇಜರ್ ಎಂದು ನಂಬಿಸಿ ಎಟಿಎಂ ಮಾಹಿತಿ ಪಡೆದ ಚಾಲಾಕಿಗಳು ಕ್ಷಣಾರ್ಧದಲ್ಲಿ 99,999 ರೂ. ಲಪಟಾಯಿಸಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.
Advertisement
ಗುಜರಿ ವ್ಯಾಪಾರಿಯಾಗಿರುವ ಬಷೀರ್ ಅಹಮದ್ ವಂಚನೆಗೊಳಗಾದವರು. ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ ನಲ್ಲಿ ಎಟಿಎಂ ಮಾಡಿಸಿಕೊಡುವುದಾಗಿ ನಂಬಿಸಿ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಖಾತೆಯಿಂದ 99,999 ರೂಪಾಯಿಗಳನ್ನು ಲಪಟಾಯಿಸಿ ಪರಾರಿಯಾಗಿದ್ದಾರೆ. ಇದನ್ನೂ ಓದಿ:ಅಪಘಾತ- ಜೀವ ಉಳಿಸಲು ಅಂಗಲಾಚಿದ ಯುವಕ, ಯುವತಿ
Advertisement
ಬಷೀರ್ ಅಹಮದ್ ನಂಜನಗೂಡಿನ ನೀಲಕಂಠನಗರದಲ್ಲಿ ಗುಜರಿ ವ್ಯಾಪಾರ ಮಾಡುತ್ತಿದ್ದರು. ಅಹಮದ್ ಪತ್ನಿ ಷಹಜಹಾನ್ ಎಂಬುವರನ್ನು ವಂಚಕರು ಮೊಬೈಲ್ ಮೂಲಕ ಸಂರ್ಪಕಸಿದ್ದಾರೆ. ನಂತರ ಬ್ಯಾಂಕ್ ಮ್ಯಾನೇಜರ್ ಎಂದು ಪರಿಚಯಿಸಿಕೊಂಡಿದ್ದಾರೆ. ಎಟಿಎಂ ಮಾಡಿಸಿಕೊಡುವುದಾಗಿ ನಂಬಿಸಿ ಖಾತೆಯ ಸಂಪೂರ್ಣ ಮಾಹಿತಿ ಪಡೆದು ಈ ಕೃತ್ಯವೆಸಗಿದ್ದಾರೆ ಎಂದು ತಿಳಿದು ಬಂದಿದೆ.
Advertisement
Advertisement
ಬಷೀರ್ ಅಹಮದ್ ನಂಜನಗೂಡಿನ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾತೆ ಹೊಂದಿದ್ದು, ಡೆಬಿಟ್ ಕಾರ್ಡ್ ಪಡೆದಿದ್ದರು. ಅಲ್ಲದೆ ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ ನಲ್ಲೂ ಖಾತೆ ಹೊಂದಿದ್ದಾರೆ. ಇದರಲ್ಲಿ ಎಟಿಎಂ ಕಾರ್ಡ್ ತೆಗೆದುಕೊಂಡಿರಲಿಲ್ಲ. ಇದನ್ನೂ ಓದಿ: ಜಯಮೃತ್ಯುಂಜಯ ಸ್ವಾಮೀಜಿ ಶಾಪದಿಂದಲೇ ಯಡಿಯೂರಪ್ಪ ಅಧಿಕಾರ ಹೋಗಿದೆ: ವಿಜಯಾನಂದ ಕಾಶಪ್ಪನವರ್
ಈ ಮಾಹಿತಿಯನ್ನ ಸಂಗ್ರಹಿಸಿದ ವಂಚಕರು ಎಟಿಎಂ ಮಾಡಿಸಿಕೊಡುವುದಾಗಿ ನಂಬಿಸಿ, ಮೊಬೈಲ್ ನಲ್ಲೇ ಖಾತೆಯ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಒಮ್ಮೆ 49,999 ರೂ. ಮತ್ತೊಮ್ಮೆ 50,000 ರೂ ಹಣ ಡ್ರಾ ಮಾಡಿಕೊಂಡು ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರೆ. ಹಣ ಕಳೆದುಕೊಂಡ ಬಷೀರ್ ಅಹಮದ್ ಮೈಸೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.