-ಸದ್ಯದಲ್ಲೇ ನ್ಯಾನೋ ತಂತ್ರಜ್ಞಾನ ನೀತಿಗೆ ರೂಪ
-ಬೆಂಗಳೂರು-ಇಂಡಿಯಾ ನ್ಯಾನೋ ಸಮಾವೇಶಕ್ಕೆ ಚಾಲನೆ
ಬೆಂಗಳೂರು: ನ್ಯಾನೋ ತಂತ್ರಜ್ಞಾನದ ಮೂಲಕ ತಯಾರಿಸಿರುವ ನ್ಯಾನೋ ಯೂರಿಯಾ ರಸಗೊಬ್ಬರವು ಪರೀಕ್ಷಾ ಹಂತದಲ್ಲಿ ಯಶಸ್ವಿಯಾಗಿದ್ದು, ಇದು ಮುಂಬರುವ ದಿನಗಳಲ್ಲಿ ರೈತರ ಬದುಕನ್ನು ಹಸನಾಗಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Advertisement
ವರ್ಚುಯಲ್ ಮಾದರಿಯಲ್ಲಿ ಏರ್ಪಡಿಸಿರುವ ಮೂರು ದಿನಗಳ 12ನೇ ವರ್ಷದ `ಬೆಂಗಳೂರು-ಇಂಡಿಯಾ ನ್ಯಾನೋ ಸಮಾವೇಶವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಈ ಸಮಾವೇಶವು ಬುಧವಾರದವರೆಗೆ ನಡೆಯಲಿದೆ. ನ್ಯಾನೋ ಯೂರಿಯಾವನ್ನು ರಾಜ್ಯದ ಎಲ್ಲ ಕೃಷಿ ವಿ.ವಿ.ಗಳಲ್ಲಿ ಈಗಾಗಲೇ ಪರೀಕ್ಷೆಗೆ ಒಳಪಡಿಸಲಾಗಿದ್ದು, ಒಳ್ಳೆಯ ಫಲಿತಾಂಶ ಬಂದಿದೆ. ಇದು ಮುಂಬರುವ ದಿನಗಳಲ್ಲಿ ಕೃಷಿಕರ ಅವಿಭಾಜ್ಯ ಅಂಗವಾಗಲಿದ್ದು, ನ್ಯಾನೋ ತಂತ್ರಜ್ಞಾನವು ಬದುಕಿನಲ್ಲಿ ಮಹತ್ತರ ಬದಲಾವಣೆಗಳನ್ನು ತರಲಿದೆ.
Advertisement
Advertisement
ವಿಜ್ಞಾನ ಮತ್ತು ತಂತ್ರಜ್ಞಾನಗಳ ಮೂಲಕ ಜನಜೀವನವನ್ನು ಸುಧಾರಿಸಬೇಕು ಎನ್ನುವುದು ಪ್ರಧಾನಿ ಮೋದಿಯವರ ಕನಸಾಗಿದೆ. ಹೀಗಾಗಿ, ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಬೆಂಗಳೂರು ನಗರವು `ನ್ಯಾನೋ ತಂತ್ರಜ್ಞಾನದ ತೊಟ್ಟಿಲು’ ಕೂಡ ಆಗಬೇಕು. ಇದಕ್ಕೆ ಸರ್ಕಾರವು ಸಂಪೂರ್ಣ ಸಹಕಾರ ನೀಡಲಿದ್ದು, ಅಗತ್ಯ ನೀತಿಗಳನ್ನು ರೂಪಿಸಲಿದೆ ಎಂದು ಆಶ್ವಾಸನೆ ನೀಡಿದರು.
Advertisement
ಆಧ್ಯಾತ್ಮಿಕತೆ ಮತ್ತು ವಿಜ್ಞಾನ ಎರಡೂ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ಇವು ಒಂದನ್ನೊಂದು ಪ್ರೇರೇಪಿಸುತ್ತವೆ. ಇವುಗಳ ಜೊತೆಗೆ ಆವಿಷ್ಕಾರದ ಶಕ್ತಿಯು ಸೇರಿಕೊಂಡಾಗ ಅದು ಮನುಷ್ಯನ ಬದುಕನ್ನು ನಿರ್ಣಾಯಕವಾಗಿ ಬದಲಿಸುತ್ತದೆ. ಇದಕ್ಕೆ ನ್ಯಾನೋ ತಂತ್ರಜ್ಞಾನ ಅತ್ಯುತ್ತಮ ಉದಾಹರಣೆಯಾಗಿದೆ ಎಂದು ಬಣ್ಣಿಸಿದರು. ಇದನ್ನೂ ಓದಿ: ಮಧ್ಯೆ ಕೆಟ್ಟು ನಿಂತ ಬಸ್ – ರೊಮೆನಿಯಾ ತಲುಪದ 37 ಕನ್ನಡಿಗರು
ಬೆಂಗಳೂರಿನಲ್ಲಿ ಸರ್ಕಾರಿ ಮತ್ತು ಖಾಸಗಿ ವಲಯ ಎರಡೂ ಸೇರಿ ವಿಶ್ವದರ್ಜೆಯ 180 ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗಳಿವೆ. ಇವು ನ್ಯಾನೋ ತಂತ್ರಜ್ಞಾನವನ್ನು ಜನರ ಬಳಿಗೆ ಕೊಂಡೊಯ್ಯಲಿವೆ. ಒಂದು ಅಣುವಿನಲ್ಲಿರುವ ಅಗಾಧ ಶಕ್ತಿಯನ್ನು ಮನುಕುಲದ ಒಳಿತಿಗೆ ಹೇಗೆ ಉಪಯೋಗಿಸಿಕೊಳ್ಳಬಹುದು ಎನ್ನುವುದೇ ನ್ಯಾನೋ ತಂತ್ರಜ್ಞಾನದ ವೈಶಿಷ್ಟ್ಯವಾಗಿದೆ. ಹೀಗಾಗಿ ಇದು ಸೀಡ್ ತಂತ್ರಜ್ಞಾನವಾಗಿದ್ದು, ಸುಸ್ಥಿರತೆ ಮತ್ತು ಅವಕಾಶ ಎರಡನ್ನೂ ಹೊತ್ತು ತರಲಿದೆ ಎಂದು ಬೊಮ್ಮಾಯಿ ಪ್ರತಿಪಾದಿಸಿದರು.
ಸಮಾವೇಶದಲ್ಲಿ ಮಾತನಾಡಿದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು, ಸರ್ಕಾರವು ಸದ್ಯದಲ್ಲೇ ಸಮಗ್ರ ನ್ಯಾನೋ ತಂತ್ರಜ್ಞಾನ ನೀತಿಯನ್ನು ಹೊರತರಲಿದೆ. ಈ ಮೂಲಕ ಸಂಶೋಧನಾ ಮತ್ತು ಔದ್ಯಮಿಕ ವಲಯಗಳೆರಡನ್ನೂ ಪರಸ್ಪರ ಹತ್ತಿರಕ್ಕೆ ತರಲಾಗುವುದು. ಇದರಿಂದಾಗಿ, ನ್ಯಾನೋ ತಂತ್ರಜ್ಞಾನದ ಲಾಭವು ಸಮಾಜಕ್ಕೆ ಸಿಗಲಿದೆ ಎಂದರು. ಇದನ್ನೂ ಓದಿ: ನಾಯಿ ಬಿಡದಿದ್ದರೆ ನಾನು ಭಾರತಕ್ಕೆ ಬರುತ್ತಿರಲಿಲ್ಲ: ರಂಜಿತ್ ರೆಡ್ಡಿ
ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಪ್ರೀತಿಯನ್ನು ಬೆಳೆಸಬೇಕೆನ್ನುವ ಉದ್ದೇಶದಿಂದ ವಿಜ್ಞಾನ ಪ್ರತಿಭಾ ಶೋಧವನ್ನು ಹಮ್ಮಿಕೊಳ್ಳಲಾಗಿದ್ದು, ಶಿಷ್ಯವೇತನಗಳ ಮೂಲಕ ಪ್ರೋತ್ಸಾಹಿಸಲಾಗುತ್ತಿದೆ. ಅಲ್ಲದೆ ವಿಜ್ಞಾನಕ್ಕೆ ಸಂಬಂಧಪಟ್ಟಂತೆ ಪ್ರಾದೇಶಿಕ ಮತ್ತು ಉಪಪ್ರಾದೇಶಿಕ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಜಾರಿಗೊಳಿಸುತ್ತಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ವೈಜ್ಞಾನಿಕ ಚಿಂತನೆಯ ಬೆಳವಣಿಗೆಗೆ ಒತ್ತು ನೀಡುವಂತಿದ್ದು, ಇದುವರೆಗಿದ್ದ ಅಂತರವನ್ನು ನೀಗಲಿದೆ ಎಂದು ಹೇಳಿದರು.
ಸರ್ಕಾರದ ನ್ಯಾನೋ ತಂತ್ರಜ್ಞಾನ ವಿಷನ್ ಗ್ರೂಪ್ ಮುಖ್ಯಸ್ಥ ಪ್ರೊ.ನವಕಾಂತ ಭಟ್ ಮಾತನಾಡಿ, ಇದು ಕೇವಲ ದೇಶದ ಸ್ವಾತಂತ್ರ್ಯದ 75ನೇ ವರ್ಷವಷ್ಟೆ ಅಲ್ಲ, ನಮ್ಮಲ್ಲಿ ಸೆಮಿಕಂಡಕ್ಟರ್ ಟ್ರಾನ್ಸಿಸ್ಟರ್ ಬಂದ 75ನೇ ವರ್ಷವೂ ಆಗಿದೆ. ಹೀಗಾಗಿ ಇಂದು ನಮ್ಮಲ್ಲಿ ಮನುಷ್ಯನ ಮಿದುಳಿನಿಂದ ಸ್ಫೂರ್ತಿ ಪಡೆದ ಕಂಪ್ಯೂಟರ್ ವಿಜ್ಞಾನ ಬರುತ್ತಿದೆ ಎಂದರು. ಇದನ್ನೂ ಓದಿ :ಜೇಮ್ಸ್ ಅಪ್ಪು ನಟನೆಯ ಕೊನೆ ಸಿನಿಮಾವಲ್ಲ: ಜೇಮ್ಸ್ ನಂತರವೂ ಮತ್ತೊಂದು ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್
ಕಾರ್ಯಕ್ರಮದಲ್ಲಿ ತಂಜಾವೂರಿನ ಶಾಸ್ತ್ರ ವೈಜ್ಞಾನಿಕ ಅಧ್ಯಯನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಎಸ್. ಸ್ವಾಮಿನಾಥನ್ ಅವರಿಗೆ ಪ್ರತಿಷ್ಠಿತ ಸಿಎನ್‍ಆರ್ ರಾವ್ ವಿಜ್ಞಾನ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ಸಮ್ಮೇಳನದ ಕಾರ್ಯಕಾರಿ ಸಮಿತಿ ಮುಖ್ಯಸ್ಥ ಪ್ರೊ.ಅಜಯಕುಮಾರ್ ಸೂದ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ಕೆಸ್ಟೆಪ್ಸ್ ವ್ಯವಸ್ಥಾಪಕ ನಿರ್ದೇಶಕ ಎ.ಬಿ.ಬಸವರಾಜು ಇದ್ದರು. ಡಾ.ಸಿಎನ್‍ಆರ್ ರಾವ್ ವರ್ಚುಯಲ್ ರೂಪದಲ್ಲಿ ಭಾಗವಹಿಸಿದ್ದರು.