ನವದೆಹಲಿ: ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದು ಕರೆ ನೀಡಿದ್ದ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣಮೂರ್ತಿ (Narayana Murthy) ನಾನು 40 ವರ್ಷಗಳ ಕಾಲ ವಾರದಲ್ಲಿ ಆರು ದಿನ 85 ರಿಂದ 90 ಗಂಟೆ ಕೆಲಸ ಮಾಡುತ್ತಿದ್ದೆ. ನನ್ನ ಶ್ರಮ ವ್ಯರ್ಥ ಆಗಲಿಲ್ಲ ಎಂದು ಹೇಳಿಕೊಂಡಿದ್ದಾರೆ.
ಮಾಧ್ಯಮದ ಜೊತೆ ಇನ್ಫೋಸಿಸ್ (Infosys) ಕಂಪನಿ ಸ್ಥಾಪನೆ ಮಾಡುವ ಸಂದರ್ಭದಲ್ಲಿನ ಅನುಭವ ಹಂಚಿಕೊಂಡ ಅವರು, ಬೆಳಗ್ಗೆ 6:20ಕ್ಕೆ ಕಚೇರಿಯಲ್ಲಿದ್ದರೆ ರಾತ್ರಿ 8:30ಕ್ಕೆ ಮನೆಗೆ ಹೊರಡುತ್ತಿದ್ದೆ ಎಂದು ಹೇಳುವ ಮೂಲಕ 70 ಗಂಟೆಗಳ ಕೆಲಸದ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಯಾವುದನ್ನೂ ಉಚಿತವಾಗಿ ನೀಡಬಾರದು: ಇನ್ಫಿ ನಾರಾಯಣ ಮೂರ್ತಿ
Advertisement
Advertisement
ಅಭಿವೃದ್ಧಿ ಹೊಂದಿದ ಪ್ರತಿಯೊಂದು ರಾಷ್ಟ್ರವೂ ಕಠಿಣ ಪರಿಶ್ರಮದ ಮೂಲಕ ಮಾಡಿದೆ ಎಂದು ನನಗೆ ತಿಳಿದಿದೆ. ಬಡತನದಿಂದ ಪಾರಾಗುವ ಏಕೈಕ ಮಾರ್ಗವೆಂದರೆ ತುಂಬಾ ಕಷ್ಟಪಟ್ಟು ಕೆಲಸ ಮಾಡಬೇಕು ಎಂದು ನನ್ನ ಪೋಷಕರು ನನಗೆ ಕಲಿಸಿಕೊಟ್ಟಿದ್ದರು ಎಂದು ತಿಳಿಸಿದರು.
Advertisement
ಅಕ್ಟೋಬರ್‌ನಲ್ಲಿ ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಮೋಹನ್‌ದಾಸ್ ಪೈ ಅವರ ಜೊತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ನಾರಾಯಣ ಮೂರ್ತಿ, ಪಾಶ್ಚಿಮಾತ್ಯರಿಂದ ಅನಪೇಕ್ಷಿತ ಹವ್ಯಾಸಗಳನ್ನು ನಾವು ಕಲಿಯಬಾರದು. ಭಾರತ ನನ್ನ ದೇಶ, ಇದಕ್ಕಾಗಿ ನಾನು ವಾರಕ್ಕೆ 70 ಗಂಟೆಗಳ ಕಾಲ ದುಡಿಯುತ್ತೇನೆ ಎಂಬ ಮನಃಸ್ಥಿತಿಯನ್ನು ಬೆಳೆಸಿಕೊಳ್ಳಬೇಕು ಎ೦ದು ಯುವಜನತೆಯಲ್ಲಿ ಮನವಿ ಮಾಡಿದ್ದರು. ಇದನ್ನೂ ಓದಿ: ರತನ್ ಟಾಟಾ ಕಾಲಿಗೆ ಬಿದ್ದು ನಮಸ್ಕರಿಸಿದ ನಾರಾಯಣ ಮೂರ್ತಿ
Advertisement
ಭಾರತದ (India) ಕೆಲಸದ ಸಂಸ್ಕೃತಿ ಬದಲಾಗಬೇಕು ಮತ್ತು ಜಾಗತಿಕ ಮಟ್ಟದಲ್ಲಿ ದೇಶವು ಪರಿಣಾಮಕಾರಿಯಾಗಿ ಸ್ಪರ್ಧಿಸಬೇಕಾದರೆ ಯುವಜನತೆ (Youngsters) ವಾರಕ್ಕೆ 70 ಗಂಟೆಗಳ ಕಾಲ ಕೆಲಸ (70-Hour Work Week) ಮಾಡಲು ಸಿದ್ಧರಾಗಿರಬೇಕು ಎಂದು ನಾರಾಯಣ ಮೂರ್ತಿ ಸಲಹೆ ನೀಡಿದ್ದರು. ಇದನ್ನೂ ಓದಿ: ಯುಪಿಎ ಅವಧಿಯಲ್ಲಿ ಆರ್ಥಿಕ ಚಟುವಟಿಕೆ ಸ್ಥಗಿತ – ಇನ್ಫಿ ನಾರಾಯಣ ಮೂರ್ತಿ
ಎರಡನೇ ಮಹಾಯುದ್ಧದ ಬಳಿಕ ಜರ್ಮನಿ (Germany) ಹಾಗೂ ಜಪಾನ್ (Japan) ದೇಶ ಅಭಿವೃದ್ಧಿಯಾಗಿದ್ದನ್ನು ಉಲ್ಲೇಖಿಸಿದ ಅವರು, ಎರಡನೇ ಮಹಾಯುದ್ಧದ ಬಳಿಕ ಪ್ರತಿಯೊಬ್ಬ ಜರ್ಮನ್ ಪ್ರಜೆ ಕೆಲ ವರ್ಷಗಳವರೆಗೆ ಹೆಚ್ಚುವರಿ ಅವಧಿ ದುಡಿಯುತ್ತಿದ್ದರು. ಭಾರತದ ಜನಸಂಖ್ಯೆಯಲ್ಲಿ ಬಹುಪಾಲು ಯುವಜನರೇ ಇರುವುದರಿಂದ ನಮ್ಮ ದೇಶವನ್ನು ಕಟ್ಟಲು ಅವರು ರೂಪಾಂತರವಾಗುವುದು ಬಹಳ ಮುಖ್ಯ ಎಂದು ಹೇಳಿದರು.
ನಾರಾಯಣ ಮೂರ್ತಿ ಅವರು ಯುವ ಜನತೆ ವಾರಕ್ಕೆ 70 ಗಂಟೆ ದುಡಿಯಬೇಕು ಎಂಬ ಹೇಳಿಕೆಯ ಬಗ್ಗೆ ಈಗ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿದೆ.