ಬೆಂಗಳೂರು: ನಾರಾಯಣ ನೇತ್ರಾಲಯ (Narayana Netralaya) ಮುಖ್ಯಸ್ಥ, ಖ್ಯಾತ ನೇತ್ರ ತಜ್ಞ ಡಾ. ಕೆ.ಭುಜಂಗ ಶೆಟ್ಟಿ (Bhujang Shetty) (69) ಹೃದಯಾಘಾತದಿಂದ ಇಂದು ನಿಧನರಾದರು.
ಸಂಜೆ 6:30 ರ ವೇಳೆಗೆ ಮನೆಯಲ್ಲಿದ್ದಾಗ ಹೃದಯಘಾತವಾಗಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಮುಂದೆ ಪ್ರಧಾನಿ ಆದ್ರೂ ಆಗ್ಬೋದು – ಯಾದಗಿರಿ ಕೆಂಚಪ್ಪ ಪೂಜಾರಿ ಭವಿಷ್ಯ
Advertisement
Advertisement
ಸದ್ಯ ತುರ್ತುಚಿಕಿತ್ಸಾ ವಿಭಾಗದಲ್ಲೇ ಮೃತದೇಹವನ್ನು ಇರಿಸಲಾಗಿದೆ. ನಾರಾಯಣ ನೇತ್ರಾಲಯದ ಸಿಬ್ಬಂದಿಗಳಿಂದ ಅಂತಿಮ ನಮನ ಸಲ್ಲಿಸಿದ್ದಾರೆ.
Advertisement
ಡಾ. ರಾಜಕುಮಾರ್ ಐ ಬ್ಯಾಂಕ್ ತೆರೆದು ನೇತ್ರದಾನದ ಬಗ್ಗೆ ಜನರಲ್ಲಿ ಅರಿವು ಮೂಡಿಸಿದ್ದ ಖ್ಯಾತ ವೈದ್ಯ ಇವರಾಗಿದ್ದರು. ಇದನ್ನೂ ಓದಿ: ಪ್ರಮಾಣವಚನ ಹಿನ್ನಲೆ ಟ್ರಾಫಿಕ್ ಜಾಮ್ ಸಾಧ್ಯತೆ; ಸಿಇಟಿ ಪರೀಕ್ಷೆ ಕೇಂದ್ರಗಳಿಗೆ ಬೇಗನೇ ಹೋಗಿ – ವಿದ್ಯಾರ್ಥಿಗಳಲ್ಲಿ ಡಿಕೆಶಿ ಮನವಿ
Advertisement
ಖ್ಯಾತ ನೇತ್ರತಜ್ಞ ಡಾ. ಕೆ. ಭುಜಂಗ ಶೆಟ್ಟಿ ಅವರ ನಿಧನಕ್ಕೆ ನಿಯೋಜಿತ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. “ಭುಜಂಗ ಶೆಟ್ಟಿ ಅವರು ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಅಪಾರ. ರಾಜ್ಯ ಕಂಡ ಶ್ರೇಷ್ಠ ವೈದ್ಯರಲ್ಲಿ ಒಬ್ಬರು. ಜನರಲ್ಲಿ ಆರೋಗ್ಯ ಕುರಿತು ಜಾಗೃತಿ ಮೂಡಿಸುತ್ತಾ ಬಹಳ ದೂರದೃಷ್ಟಿ ಹೊಂದಿದ್ದ ವೈದ್ಯರಾಗಿದ್ದರು.
ನಾರಾಯಣ ನೇತ್ರಾಲಯದ ಮುಖ್ಯಸ್ಥರಾಗಿ ಭುಜಂಗ ಶೆಟ್ಟಿ ಅವರು ಈ ಸಂಸ್ಥೆಯನ್ನು ಅತ್ಯುನ್ನತ ಮಟ್ಟಕ್ಕೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅತ್ಯಾಧುನಿಕ ತಂತ್ರಜ್ಞಾನ ಮೂಲಕ ಸಾರ್ವಜನಿಕರಿಗೆ ಸೇವೆ ಒದಗಿಸಿಕೊಂಡು ಬಂದಿದ್ದವರು.
ಆರೋಗ್ಯ ಕ್ಷೇತ್ರದಲ್ಲಿ ಅಪಾರ ಸೇವೆಗೆ 2010 ರಲ್ಲಿ ರಾಜ್ಯೋತ್ಸವ ಪುರಸ್ಕಾರ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಇವರು ಭಾಜನರಾಗಿದ್ದಾರೆ.
ಭುಜಂಗ ಶೆಟ್ಟಿ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬಹಳ ಬೇಸರವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ಸದಸ್ಯರು ಹಾಗೂ ಆತ್ಮೀಯರಿಗೆ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಶಿವಕುಮಾರ್ ಅವರು ತಮ್ಮ ಸಂತಾಪ ನುಡಿಯಲ್ಲಿ ತಿಳಿಸಿದ್ದಾರೆ.