ಬೆಂಗಳೂರು: ಕೆಆರ್ ಪುರಂ ಬಿಬಿಎಂಪಿ ಕಚೇರಿಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದ್ದ ಘಟನೆಗೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಬಂಟ ಬೆಂಗಳೂರು ಜಲಮಂಡಳಿ ಸದಸ್ಯನಾಗಿರುವ ನಾರಾಯಣಸ್ವಾಮಿಯನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಈ ಕುರಿತು ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್, ನಾರಾಯಣ ಸ್ವಾಮಿಯನ್ನು ಪಕ್ಷದಿಂದ ಅಮಾನತುಗೊಳಿಸಿದ್ದೇವೆ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.
Advertisement
ಘಟನೆ ಕುರಿತು ಮಾಧ್ಯಮಕ್ಕೆ ಸ್ಪಷ್ಟನೆ ನೀಡಿರುವ ನಾರಾಯಣಸ್ವಾಮಿ, ತಮ್ಮ ಕೃತ್ಯವನ್ನು ಸಮರ್ಥನೆ ಮಾಡಿಕೊಂಡಿದ್ದ. ಅಲ್ಲದೇ ಘಟನೆ ಕುರಿತ ವಿಡಿಯೋವನ್ನು ಮಾಧ್ಯಮಗಳು ಪ್ರಸಾರ ಮಾಡಿದರೆ ತನಗೆ ಯಾವುದೇ ನಷ್ಟವಿಲ್ಲ ಎಂದು ತಿಳಿಸಿದ್ದ.
Advertisement
Advertisement
ರಾಜ್ಯ ವಿಧಾನಸಭಾ ಚುನಾವಣೆ ಕೇವಲ ಕೆಲ ತಿಂಗಳು ಇರುವ ಕಾರಣ ವೇಳೆ ನಾರಾಯಣಸ್ವಾಮಿ ಅವರ ಘಟನೆ ಪಕ್ಷ ಘನತೆಗೆ ದಕ್ಕೆ ತರುವ ಸಾಧ್ಯತೆ ಇರುವುದರಿಂದ ಪಕ್ಷದ ನಾಯಕರು ಈ ಕ್ರಮ ಕೈಗೊಂಡಿದ್ದಾರೆ.
Advertisement
ಏನಿದು ಘಟನೆ?: ನಾರಾಯಣಸ್ವಾಮಿ ಎನ್‍ಆರ್‍ಐ ಬಡಾವಣೆಯ ಜಮೀನು ವಿಚಾರದಲ್ಲಿ ಅಕ್ರಮವಾಗಿ ಖಾತೆ ಮಾಡಿಕೊಡುವಂತೆ ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿ ಚೆಂಗಲ್ ರಾಯಪ್ಪಗೆ ಒತ್ತಡ ಹಾಕಿದ್ದ. ಜಮೀನು ವ್ಯಾಜ್ಯ ಕೋರ್ಟ್‍ನಲ್ಲಿದೆ, ಅಕ್ರಮವಾಗಿ ಖಾತೆ ಮಾಡಿಕೊಡಲ್ಲ ಎಂದು ಚೆಂಗಲ್ ರಾಯಪ್ಪ ಹೇಳಿದ್ದರು. ಹೀಗಾಗಿ ಕಳೆದ ಫೆಬ್ರವರಿ 16ರಂದು ಬೆಳಗ್ಗೆ 11 ಗಂಟೆ ವೇಳೆಯಲ್ಲಿ ಹೊರಮಾವು ನಲ್ಲಿರುವ ಬಿಬಿಎಂಪಿ ಕಚೇರಿಗೆ ನುಗ್ಗಿದ ನಾರಾಯಣಸ್ವಾಮಿ, ಎಆರ್‍ಒ ಚೆಂಗಲ್ ರಾಯಪ್ಪ ಮುಂದೆಯೇ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾಗಿದ್ದಾನೆ. ಖಾತೆ ಮಾಡಿಕೊಡದಿದ್ದರೆ ಕಚೇರಿಯಲ್ಲಿರುವ ದಾಖಲೆಗಳನ್ನು ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ್ದ. ಇದನ್ನೂ ಓದಿ: ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳಲ್ಲ – ಸುದ್ದಿ ಪ್ರಸಾರ ಮಾಡಿ: ತನ್ನ ಕೃತ್ಯವನ್ನು ಸಮರ್ಥಿಸಿಕೊಂಡ ನಾರಾಯಣ ಸ್ವಾಮಿ
ಚೆಂಗಲ್ ರಾಯಪ್ಪ ಖಡಕ್ ಅಧಿಕಾರಿ ಅಂತ ಗುರುತಿಸಿಕೊಂಡಿದ್ದ ವ್ಯಕ್ತಿಯಾಗಿದ್ದು, ಪೆಟ್ರೋಲ್ ಹಾಕೋದಾಗಿ ಬೆದರಿಸಿದ್ರೂ ಅವರು ಹೆದರಲಿಲ್ಲ. ಎರಡು ದಿನಗಳ ಹಿಂದೆ ಚೆಂಗಲ್ ರಾಯಪ್ಪ ಅವರನ್ನ ವರ್ಗಾವಣೆ ಮಾಡಲಾಗಿದೆ. ಸಿಎಂ ಮತ್ತು ಭೈರತಿ ಬಸವರಾಜ್ ಪ್ರಭಾವ ಬಳಸಿ ಚೆಂಗಲ್ ರಾಯಪ್ಪರನ್ನ ನಾರಾಯಣಸ್ವಾಮಿ ವರ್ಗಾವಣೆ ಮಾಡಿಸಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ಶಾಸಕ ಭೈರತಿ ಬಸವರಾಜ್ ಬಂಟನ ಗೂಂಡಾಗಿರಿ- ಸರ್ಕಾರಿ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ತೀನೆಂದು ಬೆದರಿಕೆ
I have instructed our Bengaluru District North District Congress Committee (DCC) to immediately suspend Narayanswamy.
— Dr. G Parameshwara (@DrParameshwara) February 20, 2018