ಯಾದಗಿರಿ: ಉನ್ನತ ಪ್ರಾಧಿಕಾರದ ನಿರ್ದೇಶನದ ಹಿನ್ನೆಲೆಯಲ್ಲಿ ಇಂದು ಮುಂಜಾನೆ 8 ಗಂಟೆಯಿಂದ ನಾರಾಯಣಪುರ ಅಣೆಕಟ್ಟಿನಿಂದ ಕೃಷ್ಣಾ ನದಿಗೆ ಹರಿಸಲಾಗುತ್ತಿದೆ.
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನಲ್ಲಿ ಈ ನಾರಾಯಣಪುರ ಜಲಾಶಯ ಬರುತ್ತದೆ. ರಾಯಚೂರಿನ ಆರ್‌ಟಿಪಿಎಸ್ ಬಳಕೆಗಾಗಿ 5800 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಕೃಷ್ಣಾ ನದಿ ನೀರು ಹಂಚಿಕೆ ಪ್ರಾಧಿಕಾರ ನಿರ್ದೇಶನ ನೀಡಿದ್ದು, ಇಂದಿನಿಂದ ನದಿಗೆ ನೀರು ಹರಿಸಲಾಗುತ್ತಿದೆ.
ಭಾರೀ ಪ್ರಮಾಣದಲ್ಲಿ ನದಿಗೆ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೃಷ್ಣಾ ನದಿಗೆ ಹೊಂದಿಕೊಂಡಿರುವ ಹಳ್ಳಿಗಳಿಗೆ ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ಯಾದಗಿರಿ ಜಿಲ್ಲಾಡಳಿತ ಅಲರ್ಟ್ ಘೋಷಣೆ ಮಾಡಿದೆ.
ನಾರಾಯಣಪುರ ಜಲಾಶಯ ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯ ಜನರ ಜೀವನಾಡಿ ಆಗಿದೆ. ಒಟ್ಟು 30 ಟಿಎಂಸಿ ನೀರಿನ ಸಾಮರ್ಥ್ಯದ ಜಲಾಶಯ ಇದಾಗಿದ್ದು, ಸದ್ಯ 12 TMC ನೀರು ನಾರಾಯಣಪುರ ಜಲಾಶಯದಲ್ಲಿ ಸಂಗ್ರಹವಿದೆ. ಮಹಾರಾಷ್ಟ್ರದಲ್ಲಿ ಅಧಿಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ವಾರದಿಂದ ಜಲಾಶಯದ ಒಳ ಹರಿವು ಹೆಚ್ಚಾಗುತ್ತಿದೆ.