ಬೀದರ್: ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 38 ಲಕ್ಷ ರೂ.ಗೂ ಅಧಿಕ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.ಇದನ್ನೂ ಓದಿ: Bengaluru | ವೇಗವಾಗಿ ಬಂದು ಬೈಕ್ಗೆ ಡಿಕ್ಕಿ ಹೊಡೆದ ಸ್ಕೂಲ್ ವ್ಯಾನ್ – ಸವಾರ ಬಚಾವ್
ಖಚಿತ ಮಾಹಿತಿ ಮೇರೆಗೆ ಗಾಂಧಿಗಂಜ್ (Gandhi Ganj Police) ಪೊಲೀಸರು ಸಂಗಮೇಶ್ವರ್ ಕಾಲೋನಿಯ ಮನೆಯೊಂದರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ತಹಶೀಲ್ದಾರ್ ಸಮ್ಮುಖದಲ್ಲಿಯೇ ಸಂಗ್ರಹಿಸಿಟ್ಟಿದ್ದ ಮಾದಕ ವಸ್ತುವನ್ನು ಜಪ್ತಿ ಮಾಡಿ, ಆರೋಪಿಯನ್ನು ಬಂಧಿಸಿದ್ದಾರೆ.
ಎಸ್ಪಿ ಪ್ರದೀಪ್ ಗುಂಟಿ ಮಾರ್ಗದರ್ಶನದಲ್ಲಿ ಗಾಂಧಿಗಂಜ್ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದು, ಈ ಕುರಿತು ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಬೈಕ್ ಟ್ಯಾಕ್ಸಿಗೆ ಬ್ರೇಕ್ – ಓಲಾ ಸೇರಿ ಅಗ್ರಿಗೇಟರ್ ಕಂಪನಿಗಳಿಂದ ಸುಲಿಗೆ