ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹಿತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
Advertisement
ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ದುಃಖದಲ್ಲಿರುವ ಬಿಎಸ್ ಯಡಿರೂರಪ್ಪರಿಗೆ ಪ್ರಧಾನಿ ಕರೆ ಮಾಡಿ ಧೈರ್ಯ ತುಂಬಿ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಬಿಎಸ್‌ವೈಗೆ ಸಾಂತ್ವನ ಹೇಳಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪ ಮೊಮ್ಮಗಳು ನೇಣು ಬಿಗಿದು ಆತ್ಮಹತ್ಯೆ
Advertisement
Advertisement
Advertisement
ಬಿಎಸ್‍ವೈ ಮೊಮ್ಮಗಳು ಸೌಂದರ್ಯ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಅಪಾರ್ಟ್‍ಮೆಂಟ್‍ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ಸೌಂದರ್ಯ ಅವರ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಲಾಗುತ್ತಿದೆ. ಅಬ್ಬಿಗೆರೆಯ ನೀರಜ್ ಫಾರ್ಮ್‍ಹೌಸ್‍ನಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಮಗುವಾದ ಬಳಿಕ ಡಿಪ್ರೆಷನ್‌ಗೆ ಒಳಗಾಗಿದ್ರಾ ಬಿಎಸ್‌ವೈ ಮೊಮ್ಮಗಳು?
ಬಿಎಸ್‌ವೈ ಮೊಮ್ಮಗಳು ಸೌಂದರ್ಯ ಅವರು ರಾಮಯ್ಯ ಆಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್ ಆಗಿದ್ದರು. ಅವರ ಪತಿ ಡಾ. ನಿರಂಜನ್ ಕೂಡ ಅದೇ ಆಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್ ಆಗಿದ್ದರು. ದಂಪತಿಗೆ 9 ತಿಂಗಳ ಗಂಡು ಮಗು ಇದೆ. ರಾಮಯ್ಯದಲ್ಲಿ ವೈದ್ಯಕೀಯ ಶಿಕ್ಷಣ ಮುಗಿಸಿ ಬೌರಿಂಗ್‌ನಲ್ಲೇ ಸರ್ಜನ್ ಆಗಿದ್ದ ಸೌಂದರ್ಯ ಅವರು ಮಗುವಾದ ನಂತರ ಕೆಲಸ ಬಿಟ್ಟಿದ್ದರು. ನಂತರ ಡಿಪ್ರೆಷನ್‌ಗೆ ಒಳಗಾಗಿದ್ದರು. ಕಳೆದ ಮೂರು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ದಂಪತಿ ನಡುವೆ ಯಾವತ್ತೂ ಜಗಳವಾಗಿಲ್ಲ- ಬಿಲ್ಡಿಂಗ್ ಕನ್‌ಸ್ಟ್ರಕ್ಟರ್ ಖ್ವಾಜಾ ಹುಸೇನ್
ಸೌಂದರ್ಯ ಹಾಗೂ ಪತಿ ಡಾ. ನಿರಂಜನ್ ಅವರು ಧವಳಗಿರಿ ಅಪಾರ್ಟ್ಮೆಂಟ್‌ನಲ್ಲಿ ವಾಸವಾಗಿದ್ದರು. ಆದರೆ ಇಂದು ಡಾಲರ್ಸ್ ಕಾಲೋನಿಯ ಲೆಗೆಸ್ಸಿ ಅಪಾರ್ಟ್ಮೆಂಟ್ ಫ್ಲಾಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಗುವನ್ನು ಪಕ್ಕದ ರೂಮ್‌ನಲ್ಲಿ ಮಲಗಿಸಿ ತಾನು ಬೇರೊಂದು ರೂಮ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗ್ಗೆ 11 ಗಂಟೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.