ಬೆಂಗಳೂರು: ಚುನಾವಣೆ ಸಮೀಪ ಬಿಜೆಪಿಯಿಂದ ಕರ್ನಾಟಕ (Karnataka) ಅಭಿವೃದ್ಧಿ ಮಂತ್ರ ಪಠಿಸಲಾಗುತ್ತಿದೆ. ಮೈಸೂರು- ಬೆಂಗಳೂರು ದಶಪಥ ರಸ್ತೆ ಕಾಮಗಾರಿಗೆ ಮೋದಿ (Narendra Modi) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಿಎಂ ಬೊಮ್ಮಾಯಿ (Basavaraj Bommai) ಪೋಸ್ಟ್ ಮಾಡಿದ್ದ ಟ್ವೀಟ್ ರೀ ಟ್ವೀಟ್ ಮಾಡಿ ಪ್ರಧಾನಿ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಶನಿವಾರ) ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ಹಾಗೂ ಮೈಸೂರು – ಬೆಂಗಳೂರು ದಶಪಥ ರಸ್ತೆಯ ವೀಡಿಯೋಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಮೆಚ್ಚಿ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಟರ್ಕಿ ಭೂಕಂಪ- ಎಂಟು ವರ್ಷದ ಬಾಲಕಿಯನ್ನು ರಕ್ಷಿಸಿದ NDRF
Advertisement
Our people deserve the best possible infrastructure, which our Government will always work hard to provide. Our strides in infra creation have been widely lauded. https://t.co/3MStIKTnSF
— Narendra Modi (@narendramodi) February 11, 2023
Advertisement
ಕರ್ನಾಟಕದಲ್ಲಿ ವಿಶ್ವದರ್ಜೆಯ ಮೂಲಸೌಕರ್ಯ ಹಾಗೂ ಬೆಳವಣಿಗೆಯ ಅದ್ಭುತ ದೃಶ್ಯ. ಡಬಲ್ ಇಂಜಿನ್ ಸರ್ಕಾರ ರಾಜ್ಯದಲ್ಲಿ ಚಮತ್ಕಾರ ಮಾಡಿದೆ ಎಂದಿರುವ ಸಿಎಂ ಅವರ ಟ್ವೀಟ್‌ಗೆ ಪ್ರಧಾನಿ ಮೋದಿಯವರು ಪ್ರತಿಕ್ರಿಯೆ ನೀಡುತ್ತಾ, ನಮ್ಮ ಜನ ಅತ್ಯುತ್ತಮ ಮೂಲಸೌಕರ್ಯಕ್ಕೆ ಅರ್ಹರಿದ್ದಾರೆ. ಮೂಲಸೌಕರ್ಯ ಅಭಿವೃದ್ಧಿಯಲ್ಲಿ ನಮ್ಮ ಕೆಲಸ ವ್ಯಾಪಕವಾಗಿ ಮೆಚ್ಚುಗೆಗೆ ಪಾತ್ರವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ದೆಹಲಿ ಅಬಕಾರಿ ನೀತಿ ಹಗರಣ- ಸಂಸದನ ಪುತ್ರ ಅರೆಸ್ಟ್
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k