ಬೆಂಗಳೂರಿಗೆ ಮೋದಿ ಆಗಮನ

Public TV
1 Min Read
narendra modi

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಬೆಂಗಳೂರಿಗೆ (Bengaluru) ಆಗಮಿಸಿದ್ದು, ಹೆಚ್‌ಎಎಲ್ (HAL) ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ಹೆಚ್‌ಎಎಲ್ ಸಂಸ್ಥೆಯ ಕಾರ್ಯಕ್ರಮದ ನಿಮಿತ್ತ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ. ಮೋದಿ ಆಗಮನದ ವೇಳೆ ಎಚ್‌ಎಎಲ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಸುಮಾರು 500ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ವೈಟ್‌ಫೀಲ್ಡ್ ಡಿಸಿಪಿ ನೇತೃತ್ವದಲ್ಲಿ ಪೊಲೀಸರ ಬಂದೋಬಸ್ತ್ ಮಾಡಲಾಗಿದೆ. 4 ಎಸಿಪಿ, 8 ಇನ್ಸ್ಪೆಕ್ಟರ್ ಸೇರಿ 500 ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಇದನ್ನೂ ಓದಿ: Kambala: ಇಂದಿನಿಂದ 2 ದಿನ ಬೆಂಗ್ಳೂರಿನಲ್ಲಿ ಕಂಬಳದ ರಂಗು – ಸಾರ್ವಜನಿಕರಿಗೆ ಪ್ರವೇಶ ಉಚಿತ

ಮಧ್ಯಾಹ್ನ 12 ಗಂಟೆಯವರೆಗೆ ಹೆಚ್‌ಎಎಲ್ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗಿಯಾಗಲಿದ್ದು, ತೇಜಸ್ ಯುದ್ಧ ವಿಮಾನ ಉತ್ಪಾದನೆಯನ್ನು ಪರಿಶೀಲಿಸಲಿದ್ದಾರೆ. 12:15ಕ್ಕೆ ಭಾರತೀಯ ವಾಯುಸೇನೆ ವಿಮಾನದ ಮೂಲಕ ತೆಲಂಗಾಣಕ್ಕೆ ಪ್ರಯಾಣ ಬೆಳೆಸಲಿದ್ದು, ಅಲ್ಲಿನ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳಲಿದ್ದಾರೆ. ಇತ್ತೀಚೆಗೆ ಚಂದ್ರಯಾನ-3 ಯಶಸ್ವಿ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಬಂದಿದ್ದ ಮೋದಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದರು. ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಅರ್ಜಿದಾರರಿಗೆ ಗುಡ್‌ನ್ಯೂಸ್ – ಚುನಾವಣೆಗೂ ಮುನ್ನ ಸಲ್ಲಿಸಿದ ಅರ್ಜಿಗಳ ವಿಲೇವಾರಿ

Share This Article