ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ (Heeraben Modi) ಅಂತ್ಯಕ್ರಿಯೆಗೂ ಮುನ್ನ ಪಾರ್ಥೀವ ಶರೀರ ಮೆರವಣಿಗೆಯಲ್ಲಿ ಪ್ರಧಾನಿ ಮೋದಿ (Narendra Modi) ಹೆಗಲುಕೊಟ್ಟಿದ್ದಾರೆ.
ಪಂಕಜ್ ಮೋದಿ ಅವರ ನಿವಾಸದಿಂದ ಪಾರ್ಥೀವ ಶರೀರ ಹೊತ್ತು ಅಂತಿಮ ಯಾತ್ರೆ ಹೊರಟಿದ್ದು, ಇಂದು ಬೆಳಗ್ಗೆ 10 ಗಂಟೆಗೆ ಸೆಕ್ಟರ್ 30ರ ರುದ್ರಭೂಮಿಯಲ್ಲಿ ಹೀರಾಬೆನ್ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿಗೆ ಮಾತೃ ವಿಯೋಗ
Advertisement
#WATCH | Gandhinagar: Prime Minister Narendra Modi carries the mortal remains of his late mother Heeraben Modi who passed away at the age of 100, today. pic.twitter.com/CWcHm2C6xQ
— ANI (@ANI) December 30, 2022
Advertisement
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹೀರಾಬೆನ್ ಅವರನ್ನು ಬುಧವಾರವಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3.39ರ ಸುಮಾರಿಗೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
Advertisement
ಶತಾಯುಷಿ ಹೀರಾಬೆನ್ ಅವರು ಐವರು ಪುತ್ರರು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸದ್ಯ ಹೀರಾಬೆನ್ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. ಗಣ್ಯರು ಸಂತಾಪಗಳನ್ನು ಸೂಚಿಸುತ್ತಿದ್ದಾರೆ. ಅಲ್ಲದೇ ಪ್ರಧಾನಿಯವರಿಗೆ ಧೈರ್ಯ ತುಂಬುತ್ತಿದ್ದಾರೆ. ಇದನ್ನೂ ಓದಿ: ಇಂದೇ ಮೋದಿ ತಾಯಿ ಹೀರಾಬೆನ್ ಅಂತ್ಯಕ್ರಿಯೆ
Advertisement
ನಾನ್‌ಸ್ಟಾಪ್ ಕೆಲಸದ ಹಿಂದಿತ್ತು ಅಮ್ಮನ ಟಿಪ್ಸ್: ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಮೋದಿ ನಾನ್ ಸ್ಟಾಪ್ ಕೆಲ್ಸದ ಹಿಂದೆ ಅಮ್ಮನ ಟಿಪ್ಸ್ ಇತ್ತು. ಪರಿಶ್ರಮವೇ- ಜೀವನದ ಮಂತ್ರ ಅಂತಾ ಅಮ್ಮ ಸದಾ ಮಗನಿಗೆ ಕಿವಿಮಾತು ಹೇಳುತ್ತಿದ್ದರು. ಪ್ರಾಮಾಣಿಕತೆ ಮತ್ತು ಸ್ವಾಭಿಮಾನದ ಪಾಠದ ಜೊತೆಗೆ ಸದಾ ಪರಿಶ್ರಮ ಪಡಬೇಕು ಸದಾ ಸಲಹೆ ಪಡೆಯುತ್ತಿದ್ದರು. ಯಾವುದೇ ಸವಾಲನ್ನು ಜಯಿಸಲು ನಿರಂತರ ಪರಿಶ್ರಮಪಡಬೇಕು ಎಂಬುದು ಅವರ ಪ್ರಮುಖ ಮಂತ್ರವಾಗಿತ್ತು. ಅದಕ್ಕಾಗಿಯೇ ನನ್ನ ಯಶಸ್ಸಿನ ಹಿಂದೆ ತಾಯಿಯಿದ್ದಾರೆ ಅಂತಾ ಮೋದಿ ಸದಾ ಹೇಳುತ್ತಿದ್ದರು ಅನ್ನೋದು ಭಾವುಕ.