LatestLeading NewsMain PostNational

ಫ್ರಾನ್ಸ್ ಅಧ್ಯಕ್ಷರನ್ನು ಅಭಿನಂದಿಸಿದ ಮೋದಿ

ನವದೆಹಲಿ: ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಮರುಚುನಾಯಿತರಾಗಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಅಭಿನಂದಿಸಿದರು.

ಮ್ಯಾಕ್ರನ್ ಎರಡನೇ ಅವಧಿಗೆ ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮೋದಿ, ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಗಾಢಗೊಳಿಸಲು ಮ್ಯಾಕ್ರನ್‍ನೊಂದಿಗೆ ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದರು.

ಟ್ವೀಟ್‍ನಲ್ಲಿ ಏನಿದೆ?: ಫ್ರಾನ್ಸ್ ಅಧ್ಯಕ್ಷರಾಗಿ ಮರು ಆಯ್ಕೆಯಾದ ನನ್ನ ಸ್ನೇಹಿತ ಇಮ್ಯಾನುಯೆಲ್ ಮ್ಯಾಕ್ರನ್ ಅವರಿಗೆ ಅಭಿನಂದನೆಗಳು. ಭಾರತ-ಫ್ರಾನ್ಸ್ ಕಾರ್ಯತಂತ್ರದ ಸಹಭಾಗಿತ್ವವನ್ನು ಗಾಢಗೊಳಿಸಲು ಒಟ್ಟಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಕೋವಿಡ್ 4ನೇ ಅಲೆ: ಸಿಎಂ ನೇತೃತ್ವದಲ್ಲಿ ಇಂದು ಮಹತ್ವದ ಸಭೆ

ಫ್ರಾನ್ಸ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಬಲಪಂಥೀಯ ಪ್ರತಿಸ್ಪರ್ಧಿ ಮರೀನ್ ಲೆ ಪೆನ್ ಅವರನ್ನು ಸೋಲಿಸಿ ತಮ್ಮ ಸ್ಥಾನವನ್ನು ಉಳಿಸಿಕೊಂಡರು. 97 ರಷ್ಟು ಮತಗಳನ್ನು ಎಣಿಕೆ ಮಾಡಲಾಗಿದ್ದು, ಮ್ಯಾಕ್ರನ್ ಅವರು 57.4 ಶೇಕಡಾ ಮತಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಆಂತರಿಕ ಸಚಿವಾಲಯದ ಅಂಕಿಅಂಶಗಳು ತಿಳಿಸಿದೆ. ಇದನ್ನೂ ಓದಿ: ಗೋಡ್ಸೆ ಸಿದ್ಧಾಂತವನ್ನು ಮೋದಿ ಬೆಂಬಲಿಸುತ್ತಿದ್ದಾರೆ: ಕೆಟಿಆರ್

ವಿಜಯ ಸಾಧಿಸಿದ ನಂತರ ಮಾತನಾಡಿದ ಎಮ್ಯಾನುಯೆಲ್ ಮ್ಯಾಕ್ರನ್, ಈ ದೇಶದ ಅನೇಕರು ನನಗೆ ಮತ ಹಾಕಿದ್ದಾರೆ. ಆದರೆ ಅವರು ನನ್ನ ಆಲೋಚನೆಗಳನ್ನು ಬೆಂಬಲಿಸುವ ಕಾರಣದಿಂದಲ್ಲ, ಆದರೆ ಬಲಪಂಥೀಯರನ್ನು ದೂರವಿಡಲು. ನಾನು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಮತ್ತು ಮುಂಬರುವ ವರ್ಷಗಳಲ್ಲಿ ನಾನು ಅವರಿಗೆ ಋಣಿಯಾಗಿದ್ದೇನೆ. ಫ್ರಾನ್ಸ್‌ನಲ್ಲಿ ಯಾರೂ ದಾರಿತಪ್ಪಲು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

Leave a Reply

Your email address will not be published.

Back to top button