ಸಿಂಗಾಪುರ ಅಧ್ಯಕ್ಷರಾಗಿ ಆಯ್ಕೆಯಾದ ಭಾರತೀಯ ಮೂಲದ ಷಣ್ಮುಗರತ್ನಂಗೆ ಮೋದಿ ಅಭಿನಂದನೆ – ಯಾರಿವರು?

Public TV
2 Min Read
Tharman Shanmugaratnam 2

ಸಿಂಗಾಪುರ: ಸಿಂಗಾಪುರದ (Singapore) ನೂತನ ಅಧ್ಯಕ್ಷರಾಗಿ (President) ಆಯ್ಕೆಯಾಗಿರುವ ಭಾರತೀಯ ಮೂಲದ ಥರ್ಮನ್ ಷಣ್ಮುಗರತ್ನಂ (Tharman Shanmugaratnam) ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಮೋದಿ, ಅಧ್ಯಕ್ಷರಾಗಿ ಆಯ್ಕೆಯಾದ ನಿಮಗೆ ಅಭಿನಂದನೆಗಳು. ಭಾರತ ಹಾಗೂ ಸಿಂಗಾಪುರ ನಡುವಿನ ಕಾರ್ಯತಂತ್ರ ಪಾಲುದಾರಿಕೆಯನ್ನು ಮುಂದಿನ ದಿನಗಳಲ್ಲಿ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನಿಮ್ಮೊಂದಿಗೆ ಕಾರ್ಯನಿರ್ವಹಿಸಲು ಬಯಸುತ್ತೇವೆ ಎಂದಿದ್ದಾರೆ.

Tharman Shanmugaratnam 1

ಶುಕ್ರವಾರ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಥರ್ಮನ್ ಷಣ್ಮುಗರತ್ನಂ ಭರ್ಜರಿ ಗೆಲುವು ಸಾಧಿಸಿ ಸಿಂಗಾಪುರದ 9ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಷಣ್ಮುಗರತ್ನಂ ಯಾರು?
ತಮಿಳುನಾಡು ಮೂಲದ ತಂದೆ ಹಾಗೂ ಚೀನಾ ಮೂಲದ ತಾಯಿಗೆ ಥರ್ಮನ್ ಷಣ್ಮುಗರತ್ನಂ 1957ರ ಫೆಬ್ರವರಿ 25ರಂದು ಸಿಂಗಾಪುರದಲ್ಲಿ ಜನಿಸಿದರು. ಅವರ ತಂದೆ ಕನಕರತ್ನಂ ಷಣ್ಮುಗರತ್ನಂ ಅವರು ಹೆಸರಾಂತ ರೋಗಶಾಸ್ತ್ರಜ್ಞ ಹಾಗೂ ಕ್ಯಾನ್ಸರ್ ಸಂಶೋಧಕರು. ತಾಯಿ ಗೃಹಿಣಿಯಾಗಿದ್ದರು.

Tharman Shanmugaratnam

ಥರ್ಮನ್ ಅವರು ಆಂಗ್ಲೋ-ಚೈನೀಸ್ ಶಾಲೆಯಲ್ಲಿ ವ್ಯಾಸಂಗ ಮಾಡಿ, ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಅರ್ಥಶಾಸ್ತ್ರದಲ್ಲಿ ಬ್ಯಾಚುಲರ್ ಆಫ್ ಸೈನ್ಸ್ ಪದವಿಯನ್ನು ಪಡೆದಿದ್ದಾರೆ. ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ವುಲ್ಫ್‌ಸನ್ ಕಾಲೇಜಿನಲ್ಲಿ ಅರ್ಥಶಾಸ್ತ್ರದಲ್ಲಿ ಮಾಸ್ಟರ್ ಆಫ್ ಫಿಲಾಸಫಿ ಪದವಿಯನ್ನು ಪೂರ್ಣಗೊಳಿಸಿದರು. ಇದನ್ನೂ ಓದಿ: ಹೆಚ್‌ಡಿಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ – ಅಭಿಮಾನಿಯಿಂದ ಕುಂಕುಮ ಅಕ್ಷತೆ ಸ್ವೀಕರಿಸಿದ ಮಾಜಿ ಸಿಎಂ

ನಂತರ ಅವರು ಹಾರ್ವರ್ಡ್ ವಿಶ್ವವಿದ್ಯಾನಿಲಯದ ಹಾರ್ವರ್ಡ್ ಕೆನಡಿ ಶಾಲೆಯಲ್ಲಿ ಮಾಸ್ಟರ್ ಇನ್ ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಪದವಿಯನ್ನು ಪೂರ್ಣಗೊಳಿಸಿದರು. ಶಾಲಾ ಜೀವನದಲ್ಲಿ ಅವರು ಸಕ್ರಿಯ ಕ್ರೀಡಾಪಟುವಾಗಿದ್ದರು.

ವೃತ್ತಿಯಲ್ಲಿ ಅರ್ಥಶಾಸ್ತ್ರಜ್ಞರಾಗಿದ್ದು, ಮುಖ್ಯವಾಗಿ ಆರ್ಥಿಕ ಮತ್ತು ಸಾಮಾಜಿಕ ನೀತಿಗಳಿಗೆ ಸಂಬಂಧಿಸಿದ ಸಾರ್ವಜನಿಕ ಸೇವಾ ಪಾತ್ರಗಳಲ್ಲಿ ತಮ್ಮ ವೃತ್ತಿ ಜೀವನವನ್ನು ಕಳೆದಿದ್ದಾರೆ. ಅವರು ವಿವಿಧ ಉನ್ನತ ಮಟ್ಟದ ಅಂತಾರಾಷ್ಟ್ರೀಯ ಮಂಡಳಿಗಳು ಮತ್ತು ಪ್ಯಾನೆಲ್‌ಗಳನ್ನು ಸಹ ಮುನ್ನಡೆಸಿದ್ದಾರೆ. 2011-2023 ರಲ್ಲಿ ವಾಸ್ತವಿಕ ಕೇಂದ್ರ ಬ್ಯಾಂಕ್ ಸಿಂಗಾಪುರದ ಹಣಕಾಸು ಪ್ರಾಧಿಕಾರದ ಅಧ್ಯಕ್ಷರಾಗಿದ್ದರು. 2019-2023 ರ ನಡುವೆ ಸಿಂಗಾಪುರ ಹೂಡಿಕೆ ನಿಗಮದ ಉಪಾಧ್ಯಕ್ಷರಾಗಿದ್ದರು. ಇದನ್ನೂ ಓದಿ: ಬಹುಪತ್ನಿತ್ವ ನಿಷೇಧ – ಮಸೂದೆ ಮಂಡನೆಗೆ ಮುಂದಾದ ಅಸ್ಸಾಂ ಸರ್ಕಾರ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article