ಉಕ್ರೇನ್‍ನಲ್ಲಿ ಮೃತಪಟ್ಟ ನವೀನ್ ಮೃತದೇಹ ತರಿಸಲು ಮೋದಿ ಸೂಚನೆ

Public TV
1 Min Read
Ukraine Russia naveen

ನವದೆಹಲಿ: ಮಾರ್ಚ್ 1 ರಂದು ರಷ್ಯಾ ದಾಳಿಗೆ ಬಲಿಯಾದ ಹಾವರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ವೈದ್ಯ ವಿದ್ಯಾರ್ಥಿ ನವೀನ್ ಶೇಖರಪ್ಪ ಅವರ ಮೃತದೇಹವನ್ನು ಭಾರತಕ್ಕೆ ತರಿಸಲು ಅಗತ್ಯವಿರುವ ಎಲ್ಲಾ ಪ್ರಯತ್ನಗಳನ್ನು ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ.

ಭಾನುವಾರ ನಡೆದ ಸಂಪುಟ ಸಭೆಯಲ್ಲಿ ಪ್ರಧಾನಿ ಮೋದಿಯವರು ತಮ್ಮ ಅಧಿಕಾರಿಗಳಿಗೆ ಈ ಸಂಬಂಧ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ನವೀನ್ ಮೃತದೇಹ ತಾಯ್ನಾಡಿಗೆ ಬರುವ ನಿರೀಕ್ಷೆ ಇದೆ. ಇದನ್ನೂ ಓದಿ: ನವೀನ್ ದೇಹ ತರುವ ಬಗ್ಗೆ ಮಾತುಕತೆ ನಡೀತಿದೆ: ಬೊಮ್ಮಾಯಿ

NAVEEN

ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸುತ್ತಿದ್ದ ಪರಿಣಾಮ ವಿದ್ಯಾರ್ಥಿಗಳೆಲ್ಲರು ಬಂಕರ್ ಸೇರಿದ್ದರು. ಅಂತೆಯೇ ನವೀನ್ ಕೂಡ ಬಂಕರ್ ನಲ್ಲಿಯೇ ರಕ್ಷಣೆ ಪಡೆದಿದ್ದರು. ಆದರೆ ಆಹಾರ ಮತ್ತು ಹಣ ತರಲೆಂದು ಹೊರಬಂದಾಗ ರಷ್ಯಾ ದಾಳಿಗೆ ನವೀನ್ ಬಲಿಯಾಗಿದ್ದರು.

ಇತ್ತ ನವೀನ್ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆಯೇ ಹುಟ್ಟೂರಿನಲ್ಲಿ ನೀರವ ಮೌನ ಆವರಿಸಿತ್ತು. ಪೋಷಕರು ಹಾಗೂ ಕುಟುಂಬಸ್ಥರು ಮೃತದೇಹ ತಂದುಕೊಡುಂತೆ ಗೋಗರೆಯುತ್ತಿದ್ದರು. ನಿನ್ನೆಯಷ್ಟೇ ಸಿಎಂ ಬೊಮ್ಮಾಯಿ ಕೂಡ ಈ ಬಗ್ಗೆ ಮಾತನಾಡಿ ಮೃತದೇಹ ತರುವುದಾಗಿ ಭರವಸೆ ನೀಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *