ಉಜ್ವಲಾ ಯೋಜನೆಯ 10ನೇ ಕೋಟಿ ಫಲಾನುಭವಿ ಮನೆಯಲ್ಲಿ ಚಹಾ ಸವಿದ ಮೋದಿ

Public TV
2 Min Read
Narendra Modi Tea

ಅಯೋಧ್ಯೆ: ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ಅಯೋಧ್ಯೆಗೆ (Ayodhya) ಭೇಟಿ ನೀಡಿದ ಸಂದರ್ಭ ಉಜ್ವಲಾ ಯೋಜನೆಯ (Ujwala Yojana) 10ನೇ ಕೋಟಿ ಫಲಾನುಭವಿ ಮಹಿಳೆಯೊಬ್ಬರ ಮನೆಗೆ ಭೇಟಿ ನೀಡಿ ಚಹಾ (Tea) ಸವಿದಿದ್ದಾರೆ.

ಮೀರಾ ಮಾಂಝಿ, ಪ್ರಧಾನಿ ಮೋದಿಗೆ ಚಹಾ ನೀಡಿ ಸತ್ಕರಿಸಿದ ಮಹಿಳೆ. ಇವರು ತನ್ನ ಪತಿ ಮತ್ತು ಅತ್ತೆಯೊಂದಿಗೆ ಅಯೋಧ್ಯೆಯಲ್ಲಿ ವಾಸಿಸುತ್ತಿದ್ದು, ಉಜ್ವಲಾ ಯೋಜನೆಯ ಫಲಾನುಭವಿಯಾಗಿದ್ದಾರೆ. ಮೋದಿ ತನ್ನ ಮನೆಗೆ ಭೇಟಿ ನೀಡಿದ ಸಂದರ್ಭ ಮೀರಾ ಭಾವುಕಳಾಗಿ, ಪ್ರಧಾನಿ ಆಗಮನದಿಂದ ತನಗೆ ತುಂಬಾ ಸಂತೋಷವಾಗಿದೆ. ದೇವರು ನನ್ನ ಮನೆಗೆ ಈ ರೀತಿಯಾಗಿ ಭೇಟಿ ನೀಡುತ್ತಾನೆ ಎಂದು ನಾನು ಊಹಿಸಿರಲಿಲ್ಲ. ನನ್ನ ಸಂತೋಷಕ್ಕೆ ಪಾರವೇ ಇಲ್ಲ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನೆಲದ ಕಾನೂನು ಎಲ್ಲರಿಗೂ ಒಂದೆ: ಪ್ರತಾಪ್ ಸಿಂಹ ಸಹೋದರನ ಬಂಧನಕ್ಕೆ ಈಶ್ವರ್ ಖಂಡ್ರೆ ಪ್ರತಿಕ್ರಿಯೆ

Narendra Modi Tea

ಈ ವೇಳೆ ಮೋದಿ ಉಜ್ವಲಾ ಯೋಜನೆಯಡಿ ದೊರೆಯುತ್ತಿರುವ ಸೌಲಭ್ಯಗಳ ಕುರಿತು ಮಹಿಳೆ ಬಳಿ ವಿಚಾರಿಸಿದರು. ಅಲ್ಲದೇ ಜನವರಿ 22ರಂದು ನಡೆಯಲಿರುವ ರಾಮಮಂದಿರ (Ram Mandir) ಉದ್ಘಾಟನಾ ಕಾರ್ಯಕ್ರಮಕ್ಕೆ ಮಹಿಳೆ ಮತ್ತು ಆಕೆಯ ಕುಟುಂಬವನ್ನು ಆಹ್ವಾನಿಸಿದರು. ಇದನ್ನೂ ಓದಿ: ಸಲಹೆಗಾರರನ್ನು ನೇಮಕ ಮಾಡಿಕೊಂಡ ಮುಖ್ಯಮಂತ್ರಿಗೆ ಹ್ಯಾಟ್ಸಾಫ್‌: ಹೆಚ್‌ಡಿಕೆ ವ್ಯಂಗ್ಯ‌

Narendra Modi Tea 1

ಜನವರಿ 22ಕ್ಕೆ ಉತ್ತರ ಪ್ರದೇಶದಲ್ಲಿರುವ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಆದರೆ ಅದಕ್ಕೂ ಮುನ್ನ ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ಹೊಸ ವಿಮಾನ ನಿಲ್ದಾಣ, ಅಭಿವೃದ್ಧಿಗೊಂಡಿರುವ ರೈಲು ನಿಲ್ದಾಣವನ್ನೂ ಮೋದಿ ಉದ್ಘಾಟಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರಿಗೆ ಕಾಣಿಕೆ ಮೇಲೆ ಕಾಣಿಕೆ ಕೊಡ್ತಿದೆ: ಅಶೋಕ್ ವಾಗ್ದಾಳಿ

ಮಾತ್ರವಲ್ಲದೇ 11 ಸಾವಿರ ಕೋಟಿ ರೂ. ಮೌಲ್ಯದ ಅಯೋಧ್ಯೆ ಅಭಿವೃದ್ಧಿ ಕಾಮಗಾರಿ ಹಾಗೂ ಉತ್ತರ ಪ್ರದೇಶದ 4,600 ಕೋಟಿ ರೂ.ಗಳಷ್ಟು ಅಭಿವೃದ್ಧಿ ಯೋಜನೆಗಳಿಗೂ ಚಾಲನೆ ನೀಡಿದ್ದಾರೆ. ಇದರಲ್ಲಿ ರಸ್ತೆ, ಹೆದ್ದಾರಿ, ವಿಮಾನ, ರೈಲ್ವೇ ಸೇರಿದಂತೆ ಮೂಲಭೂತ ಸೌಕರ್ಯಗಳ ಯೋಜನೆಗಳು ಒಳಗೊಂಡಿವೆ. ವಿಶೇಷವೆಂದರೆ ಇದೇ ದಿನ 6 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಹಾಗೂ 2 ಅಮೃತ್ ಭಾರತ್ ರೈಲುಗಳಿಗೂ ಪ್ರಧಾನಿ ಹಸಿರು ನಿಶಾನೆ ತೋರಿದ್ದಾರೆ. ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗೋದಾದ್ರೆ ನೂರಕ್ಕೆ ನೂರರಷ್ಟು ಬೆಂಬಲಿಸುತ್ತೇವೆ: ಬಿ.ನಾಗೇಂದ್ರ

Share This Article