ಮಂಡ್ಯ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ (BR Ambedkar) ಅವರ ಸಂವಿಧಾನದ ಆಶಯದಂತೆ ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.
ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ ತಾಲೂಕಿನ ಕಲ್ಕುಣಿ ಗ್ರಾಮದಲ್ಲಿ ನಿರ್ಮಿಸಲಾಗಿರುವ ‘ಬೌದ್ಧ ಅಂಬೇಡ್ಕರ್ ಮಹಾದ್ವಾರ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅತ್ಯಂತ ಅರ್ಥಪೂರ್ಣವಾಗಿ ನಿರ್ಮಿಸಲಾಗಿರುವ ಈ ಮಹಾದ್ವಾರ ಸಮ ಸಮಾಜದ ಸಂಕೇತವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಹಸುವಿನ ಕೆಚ್ಚಲು ಕೊಯ್ದ ನೀಚರನ್ನು ಬಂಧಿಸದಿದ್ದರೇ ಜಮೀರ್ ವಿರುದ್ಧ ಹೋರಾಟ: ಮುತಾಲಿಕ್ ಎಚ್ಚರಿಕೆ
Advertisement
Advertisement
ಐತಿಹಾಸಿಕವಾಗಿ ಅಂಬೇಡ್ಕರ್ ಅವರಿಗೆ ಬಹಳ ಅಪಚಾರವಾಗಿತ್ತು. ಅದನ್ನು ಸರಿಪಡಿಸಿ ಮನುಕುಲ ಇರುವವರೆಗೂ ಬಾಬಾ ಸಾಹೇಬ್ ಅವರನ್ನು ಸ್ಮರಿಸಿಕೊಳ್ಳುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ದೇವೇಗೌಡರು ದಲಿತರ ಉದ್ಧಾರಕ್ಕಾಗಿ ಅನೇಕ ಉತ್ತಮ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರು. ಗಂಗಾ ಕಲ್ಯಾಣ ಯೋಜನೆಯನ್ನು ಅವರು ಜಾರಿಗೆ ತಂದು ಅನೇಕರಿಗೆ ಸಹಾಯ ಮಾಡಿದ್ದರು. ಸಚಿವರಾಗಿ, ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ದಲಿತರ ಉದ್ಧಾರಕ್ಕೆ ಬಹುದೊಡ್ಡ ಕಾಣಿಕೆ ನೀಡಿದ್ದಾರೆ ಎಂದರು. ಇದನ್ನೂ ಓದಿ: ಜಾಮೀನಿಗೆ ಮೇಲ್ಮನವಿ ಬಳಿಕ ದರ್ಶನ್‌ಗೆ ಬೆಂಗಳೂರು ಪೊಲೀಸರಿಂದ ಮತ್ತೊಂದು ಶಾಕ್!
Advertisement
ಮೊದಲು ಮೀಸಲು ಸೌಲಭ್ಯ ಕೇವಲ ವಿಧಾನಸಭೆ, ಲೋಕಸಭೆ ಕ್ಷೇತ್ರಗಳಿಗೆ ಮೀಸಲಾಗಿತ್ತು. ದೇವೇಗೌಡರು ಆ ಮೀಸಲು ಸೌಲಭ್ಯವನ್ನು ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಸೇರಿ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿಯೂ ಜಾರಿಗೆ ತಂದರು. ಹಾಸನ ಜಿಲ್ಲಾ ಪಂಚಾಯತಿ ಅಧ್ಯಕ್ಷರನ್ನಾಗಿ ಎಂಎ ಪದವೀಧರನಾಗಿದ್ದ ಒಬ್ಬ ದಲಿತ ಯುವಕನನ್ನು ಮಾಡಿದ್ದರು. ತಳಮಟ್ಟದ ಸಮುದಾಯಗಳ ವಿದ್ಯಾವಂತರನ್ನು ಗುರುತಿಸಿ ಅಧಿಕಾರ ನೀಡುವ ಕೆಲಸವನ್ನು ಅವರು ಮಾಡಿದ್ದರು ಎಂದು ಹೇಳಿದರು. ಇದನ್ನೂ ಓದಿ: ಗಂಡುಮಕ್ಕಳು ಮಾತ್ರ ಕೆಟ್ಟವರು, ಹುಡುಗಿಯರು ಏನೇ ಮಾಡಿದ್ರೂ ಲೆಕ್ಕಕ್ಕೆ ಬರಲ್ಲ – ಸಾಯುವ ಮುನ್ನ ಯುವಕ ಮಾಡಿದ್ದ ವೀಡಿಯೋ ವೈರಲ್
Advertisement
ಇದೇ ವೇಳೆ ಕಲ್ಕುಣಿ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣ ಬೇಕೆಂದು ಗ್ರಾಮಸ್ಥರು ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಹೆಚ್‌ಡಿಕೆ ತಕ್ಷಣವೇ ಸಮುದಾಯ ಭವನ ಮಂಜೂರು ಮಾಡಿ, ನಿರ್ಮಾಣ ಮಾಡಿಕೊಡಲಾಗುವುದು. ಅದಕ್ಕೆ ಅಗತ್ಯವಾದ ಸೂಕ್ತ ಜಾಗವನ್ನು ತಕ್ಷಣವೇ ಗ್ರಾಮಸ್ಥರ ಜೊತೆ ಸೇರಿ ಗುರುತಿಸುವಂತೆ ಮಾಜಿ ಶಾಸಕ ಅನ್ನದಾನಿ ಅವರಿಗೆ ಸೂಚಿಸಿದರು. ಇದನ್ನೂ ಓದಿ: ಹುಟ್ಟುಹಬ್ಬದ ದಿನವೇ ಬಾಲಕ ಬಲಿ – ಟ್ರಕ್ ಚಕ್ರ ಹರಿದು ತಲೆ ಛಿದ್ರ