ಬೆಂಗಳೂರು: ನರೇಂದ್ರ ಮೋದಿ (Narendra Modi) ಸರ್ಕಾರ ಜನರಿಗೆ ಸ್ವರ್ಗ ತೋರಿಸುತ್ತೇವೆ ಎಂದು ಹೇಳಿ ಬೆಲೆ ಏರಿಕೆ ಮಾಡಿ ನರಕ ತೋರಿಸಿದ್ದಾರೆ ಎಂದು ಕೆಪಿಸಿಸಿ (KPCC) ಕಾರ್ಯಾಧ್ಯಕ್ಷ ಸಲೀಂ ಅಹಮದ್ (Saleem Ahmed) ಬಿಜೆಪಿ (BJP) ವಿರುದ್ಧ ಕಿಡಿಕಾರಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ (Lok Sabha Election) ಕನಿಷ್ಠ 20 ಸ್ಥಾನ ಗೆಲ್ಲಬೇಕು ಎಂದು ಗುರಿ ಇದೆ. ಈಗಾಗಲೇ ದೆಹಲಿಯಲ್ಲಿ (Delhi) ನಡೆದ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಯಾವ ರೀತಿ ಪಕ್ಷ ಸಂಘಟನೆ ಮಾಡಬೇಕು ಎಂದು ನಿರ್ಧಾರ ಆಗಿದೆ. 20 ಸ್ಥಾನ ಗೆಲ್ಲುವ ಗುರಿ ನೀಡಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಿಸಿದ ರೀತಿ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಬೇಕು. ಇದಕ್ಕೆ ಕೆಲಸ ಮಾಡುತ್ತೇವೆ ಎಂದರು. ಇದನ್ನೂ ಓದಿ: ದೇಶಾದ್ಯಂತ 508 ರೈಲ್ವೆ ನಿಲ್ದಾಣ ಪುನರಾಭಿವೃದ್ಧಿಗೆ ಮೋದಿ ಚಾಲನೆ
ಬಿಜೆಪಿ ಮತ್ತೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದೆ. ಯಾವ ಮಹಾ ಘನಕಾರ್ಯ ಮಾಡಿದ್ದೀರಾ ಎಂದು ಜನ ನಿಮಗೆ ಮತ ಹಾಕುತ್ತಾರೆ? ನಾವು ಬಂದ ಎರಡು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ತಂದಿದ್ದೇವೆ. ನುಡಿದಂತೆ ನಾವು ನಡೆದಿದ್ದೇವೆ. ಮುಂದಿನ ಆರು ತಿಂಗಳು ಇದನ್ನು ಮನೆ ಮನೆಗೆ ತಲುಪಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: 7 ಎಕರೆಯಲ್ಲಿ ಟೊಮೆಟೋ ಬೆಳೆದು ಕೋಟಿ ರೂ. ಸಂಪಾದಿಸಿದ ರೈತ
ಬಿಜೆಪಿ ಬರೀ ಸುಳ್ಳು ಹೇಳುತ್ತಿದೆ. ಸುಳ್ಳು ಹೇಳುವುದರಲ್ಲಿ ಬಿಜೆಪಿಗೆ ಆಸ್ಕರ್ ಪ್ರಶಸ್ತಿ ಕೊಡಬಹುದು. 15 ಲಕ್ಷ ಹಣ ಪ್ರತಿಯೊಬ್ಬರ ಖಾತೆಗೆ ಕೊಡುತ್ತೇವೆ ಎಂದು ಕೊಡಲಿಲ್ಲ. ನಮ್ಮ ಸರ್ಕಾರ ಬಂದರೆ ರೈತರಿಗೆ ಡಬಲ್ ಹಣ ಮಾಡುತ್ತೇವೆ ಎಂದು ಏನೂ ಮಾಡಲಿಲ್ಲ. ಯುವಕರಿಗೆ ಉದ್ಯೋಗ ಕೊಡುತ್ತೇವೆ ಎಂದು ಮೋಸ ಮಾಡಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಚಿತ್ರದುರ್ಗ ಶಾಸಕನಿಂದ ಮತ್ತೊಂದು ಯಡವಟ್ಟು – ಬೆಂಕಿಯಿಡಲು ಪ್ರಚೋದಿಸಿದ ವಿಡಿಯೋ ವೈರಲ್
ದೇಶದ ಜನ ಬದಲಾವಣೆ ಬಯಸಿದ್ದಾರೆ. ಈ ಬಾರಿ ದೇಶದಲ್ಲಿ ಇಂಡಿಯಾ ಅಧಿಕಾರಕ್ಕೆ ಬರುತ್ತೆ. ರಾಹುಲ್ ಗಾಂಧಿ ಪ್ರಧಾನಮಂತ್ರಿ ಆಗುತ್ತಾರೆ. ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕನಿಷ್ಠ 20 ಸ್ಥಾನ ಕಾಂಗ್ರೆಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಮೃತ್ ಭಾರತ್; ರಾಜ್ಯದ 13 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ – ಮೋದಿಯಿಂದ ಇಂದು ಚಾಲನೆ
Web Stories