ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕಾಶಿ ವಿಶ್ವನಾಥ ಕಾರಿಡಾರ್‌ನನ್ನು ಇಂದು ಮಧ್ಯಾಹ್ನ 1 ಗಂಟೆಗೆ ಉದ್ಘಾಟಿಸಲಿದ್ದಾರೆ. ಈ ನಿಮಿತ್ತ ಆಗಮಿಸಿರುವ ಪ್ರಧಾನಿಯವರು, ಕಾಲಭೈರವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ. ಆಗ ದೇವಸ್ಥಾನದ ಅರ್ಚಕರು ಮೋದಿಗೆ ದೃಷ್ಟಿ ನಿವಾರಣೆ ಮಾಡಿದ್ದಾರೆ.
#WATCH | People greet Prime Minister Narendra Modi in his parliamentary constituency Varanasi, Uttar Pradesh
(Source: DD) pic.twitter.com/mQkmpdSZ5Z
— ANI UP (@ANINewsUP) December 13, 2021
Advertisement
ಕಾಲಭೈರವೇಶ್ವರ ದೇವರಿಗೆ ವಿಶೇಷ ಪೂಜೆಯನ್ನು ಮೋದಿ ಸಲ್ಲಿಸಿದ್ದಾರೆ. ಹೂವಿನ ಮಾಲೆ ಹಾಕಿ ಆರತಿ ಬೆಳಗಿ ಮೋದಿ ತಲೆ ಬಾಗಿ ನಮಸ್ಕರಿಸಿದ್ದಾರೆ. ಈ ವೇಳೆ ದೇವಸ್ಥಾನದ ಅರ್ಚಕರು ಮೋದಿ ಅವರ ಹಣೆಗೆ ತಿಲಕ ಇಟ್ಟು ಆಶಿರ್ವದಿಸಿದ್ದಾರೆ. ಮೋದಿ ಅವರ ಈ ವಿಶೇಷ ಪೂಜೆಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಜೊತೆಯಾಗಿದ್ದರು. ಇದನ್ನೂ ಓದಿ: ಸೂಪರ್ ಸ್ಟಾರ್ ರಜನಿಕಾಂತ್‍ಗೆ 71ನೇ ಹುಟ್ಟುಹಬ್ಬದ ಸಂಭ್ರಮ
Advertisement
#WATCH Prime Minister Narendra Modi offers prayers at Kaal Bhairav temple in Varanasi
Later, he will offer prayers at Kashi Vishwanath temple inaugurate phase 1 of Kashi Vishwanath Corridor
(Source: DD) pic.twitter.com/ZmO1AG08uC
— ANI UP (@ANINewsUP) December 13, 2021
Advertisement
ಸುಮಾರು 900 ಕೋಟಿ.ರೂ ವೆಚ್ಚದಲ್ಲಿ ನಿರ್ಮಿಸಲಾದ ಶ್ರೀ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯ ಮೊದಲ ಹಂತಕ್ಕೆ ಚಾಲನೆ ನೀಡಲಿದ್ದಾರೆ. ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ ಮೋದಿಯವರ ಕನಸಿನ ಯೋಜನೆಯಾಗಿದ್ದು, ಸುಮಾರು 5 ಸಾವಿರ ಚದರಿ ಅಡಿ ಪ್ರದೇಶಕ್ಕೆ ದೇಗುಲ ವ್ಯಾಪ್ತಿ ವಿಸ್ತಾರವಾಗಿದೆ. ಕಾರಿಡಾರ್ 320 ಮೀಟರ್ ಉದ್ದ ಮತ್ತು 20 ಮೀಓಟರ್ ಅಗಲ ಇದೆ. ಮೊದಲಿನಂತೆ ಕಿಕ್ಕಿರಿದ ರಸ್ತೆಗಳ ಬದಲಾಗಿ ಇದೀಗ ಸರಾಗವಾಗಿ ಕೇವಲ ಒಂದು ನಿಮಿಷದಲ್ಲಿ ದೇಗುಲದಿಂದ ಲಲಿತಾಘಾಟ್‍ಗೆ ತಲುಪಬಹುದಾಗಿದೆ. ಇದನ್ನೂ ಓದಿ: ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿ ಜೈಲಿನಲ್ಲಿಯೇ ಆತ್ಮಹತ್ಯೆ