ನವದೆಹಲಿ: ಹವಾಮಾನ ವೈಪರೀತ್ಯದಿಂದಾಗಿ ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನ (Flight) ಭೋಪಾಲ್‌ನಲ್ಲಿ ತುರ್ತು ಭೂಸ್ಪರ್ಶ (Emergency Landing) ಮಾಡಿತ್ತು. ಇದಾದ 2 ದಿನಗಳ ಬಳಿ ಗುರುವಾರ ನರೇಂದ್ರ ಮೋದಿ (Narendra Modi) ಅವರು ಅದೇ ವಿಮಾನದಲ್ಲಿ ಪ್ರಯಾಣಿಸಿದ್ದ ಸೋನಿಯಾ ಗಾಂಧಿ (Sonia Gandhi) ಅವರ ಆರೋಗ್ಯ ವಿಚಾರಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandgi) ಹಾಗೂ ತಾಯಿ ಸೋನಿಯಾ ಗಾಂಧಿ ಮಂಗಳವಾರ ಬೆಂಗಳೂರಿನಲ್ಲಿ ನಡೆದ 2 ದಿನಗಳ ಚಿಂತನ ಮಂಥನ ಅಧಿವೇಶನದ ಬಳಿಕ ದೆಹಲಿಗೆ ವಾಪಸಾಗುತ್ತಿದ್ದ ವೇಳೆ ಹವಾಮಾನ ವೈಪರೀತ್ಯದ ಹಿನ್ನೆಲೆ ವಿಮಾನವನ್ನು ಭೋಪಾಲ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿತ್ತು.
Advertisement
Advertisement
ಈ ವೇಳೆ ರಾಹುಲ್ ಗಾಂಧಿ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ತಾಯಿಯ ಫೋಟೋವನ್ನು ಹಂಚಿಕೊಂಡಿದ್ದರು. 76 ವರ್ಷದ ಸೋನಿಯಾ ಗಾಂಧಿ ವಿಮಾನದಲ್ಲಿ ಆಮ್ಲಜನಕದ ಮಾಸ್ಕ್ ಅನ್ನು ಧರಿಸಿ ಕುಳಿತುಕೊಂಡಿರುವುದು ಆ ಫೋಟೋದಲ್ಲಿ ಕಂಡುಬಂದಿದೆ. ಇದನ್ನೂ ಓದಿ: ಮೂತ್ರ ವಿಸರ್ಜನೆಗೆಂದು ವಂದೇ ಭಾರತ್ ರೈಲು ಹತ್ತಿದ ವ್ಯಕ್ತಿ 6,000 ರೂ. ಕಳ್ಕೊಂಡ
Advertisement
Advertisement
ಇದೀಗ ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡಾ ಅಧಿವೇಶನದ ಮೊದಲ ದಿನವೇ ಸಂಸತ್ತಿಗೆ ಆಗಮಿಸಿದ್ದಾರೆ. ಈ ವೇಳೆ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ಸಂಸದರನ್ನು ಭೇಟಿ ಮಾಡಿದ ಅವರು ಸಂಸದೆ ಸೋನಿಯಾ ಗಾಂಧಿ ಅವರನ್ನೂ ಭೇಟಿಯಾಗಿ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಈ ವೇಳೆ ಸೋನಿಯಾ ಗಾಂಧಿ ತಾವು ಚೆನ್ನಾಗಿರುವುದಾಗಿ ಉತ್ತರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಉಪ ಸಭಾಧ್ಯಕ್ಷರ ಬಗ್ಗೆ ದಲಿತ ಕಾರ್ಡ್ ಬಿಟ್ಟ ಸರ್ಕಾರಕ್ಕೆ ಕುಮಾರಸ್ವಾಮಿ ತಿರುಗೇಟು
Web Stories