ಕೊಪ್ಪಳ: ನರೇಂದ್ರ ಮೋದಿ ಶ್ರೀ ಕೃಷ್ಣನ ಅವತಾರದಲ್ಲಿದ್ದಾರೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದ್ದಾರೆ.
ಕೊಪ್ಪಳ ತಾಲೂಕಿನ ಮುನಿರಾಬಾದ್‍ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಶ್ರೀ ಕೃಷ್ಣನ ಅವತಾರದಲ್ಲಿರುವವರು. ಮಹಾಭಾರತದಲ್ಲಿ ಶ್ರೀ ಕೃಷ್ಣ ಹೇಗೆ ಪಾತ್ರ ವಹಿಸಿದ್ದರೋ, ಹಾಗೇ ಭಾರತದ ಪ್ರಗತಿಯಲ್ಲಿ ಮೋದಿ ಶ್ರೀಕೃಷ್ಣನ ಅವತಾರದಲ್ಲಿದ್ದಾರೆ. ನವ ಭಾರತ ನಿರ್ಮಾಣಕ್ಕೆ ಮೋದಿ ಬಹಳ ಶ್ರಮಿಸುತ್ತಾರೆ. ಮೋದಿ ಜನ ಪ್ರಿಯತೆ ಸಹಿಸದೇ ಸಿದ್ದರಾಮಯ್ಯ ಮೂರ್ಖರ ರೀತಿ ಮಾತನಾಡುತ್ತಿದ್ದಾರೆ ಎಂದು ಇರುಗೇಟು ನೀಡಿದ್ದಾರೆ. ಇದನ್ನೂ ಓದಿ: MVA ಸರ್ಕಾರವನ್ನು ಅಲುಗಾಡಿಸುತ್ತಿರುವ ಏಕನಾಥ್ ಶಿಂಧೆ ಯಾರು?
Advertisement
Advertisement
ಮೋದಿಯವರ ಬಗ್ಗೆ ಟೀಕೆ ಮಾಡುವುದಕ್ಕೆ ಮೋದಿ ಎಲ್ಲದಕ್ಕೂ ಉತ್ತರ ಕೊಟ್ಟಿದ್ದಾರೆ. ಅಧಿಕಾರಕ್ಕೆ ಬರಲ್ಲ ಎನ್ನುವ ಹತಾಶೆ ಕಾಂಗ್ರೆಸ್ ನಾಯಕರಿಗಿದೆ. ಅಲ್ಲದೇ ನಿಮ್ಮ ಪ್ರಧಾನಿ ಮನ್ ಕೀ ಬಾತ್ ಮಾಡಿದ ಉದಾಹರಣೆ ಇದೆಯಾ? ಕಾಂಗ್ರೆಸ್ ಪ್ರಧಾನಿ ದೆಹಲಿಗೆ ಸೀಮಿತ. ನಮ್ಮ ಪ್ರಧಾನಿ ಹಳ್ಳಿ, ಹಳ್ಳಿಗೂ ತಲುಪಿದ್ದಾರೆ. ಅಗ್ನಿಪಥ್ ಯೋಜನೆ ವಿರುದ್ಧ ಕಾಂಗ್ರೆಸ್ ಷಡ್ಯಂತ್ರ ಮಾಡುತ್ತಿದೆ. ದೇಶದ ಸೈನಿಕನಾದರೆ, ಅವನಿಗೆ ಅವನದೇ ಆದ ಕ್ರೆಡಿಬಿಲಿಟಿ ಬರುತ್ತದೆ ಎಂದು ಹೇಳಿದ್ದಾರೆ.
Advertisement
Advertisement
ಇದೇ ವೇಳೆ ಬಾಗಲಕೋಟೆ ಡಿಸಿ ಸಿದ್ದರಾಮಯ್ಯ ಅವರು ತರಟೆ ತೆಗೆದುಕೊಂಡ ವಿಚಾರವಾಗಿ ಮಾತನಾಡಿದ ಶ್ರೀರಾಮುಲು ಅವರು, ಸಿದ್ದರಾಮಯ್ಯ ಸಂಸ್ಕಾರ ಇಲ್ಲದ ವ್ಯಕ್ತಿ. ನಾನು ಅವರ ಬಗ್ಗೆ ಮಾತನಾಡಲ್ಲ. ಪ್ರೋಟೋಕಾಲ್ ಪ್ರಕಾರ ಹೆಸರು ಬರಬೇಕಾಗತ್ತದೆ. ಇದೀಗ ಹೆಸರು ಹಾಕಬೇಡಿ ಎಂದಿದ್ದಾರೆ. ಬದಾಮಿ ಜನ ಸಿದ್ದರಾಮಯ್ಯರನ್ನು ತಿರಸ್ಕಾರ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರ ಹುಡಕತಾ ಹೋಗುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.
ಮೋದಿಜಿಯವರು 2006-2007 ರಿಂದ ನನಗೂ ಪರಿಚಯ. ಬಹಳ ಪ್ರೀತಿ ಇಂದ ನನ್ನ ನೋಡಿಕೊಳ್ಳುತ್ತಾರೆ. ನನ್ನ ಮೇಲೆ ವಿಶೇಷ ಪ್ರೀತಿ ಇದೆ. ದೆಹಲಿಗೆ ಯಾಕೆ ಬಂದಿಲ್ಲ ಅಂತಾ ಕೇಳಿದರು. ಬರುತ್ತೇನೆ ಅಂತ ಹೇಳಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಒಬ್ಬ ಹೆಂಡ್ತಿಗೆ ಒಬ್ಬನೇ ತಾಳಿ ಕಟ್ಟಬಹುದು, ಇಲ್ಲಿ ಒಬ್ಬ ಹೆಂಡ್ತಿಗೆ ಇಬ್ಬಿಬ್ರು ತಾಳಿ ಕಟ್ಟಿದ್ದಾರೆ: ಸಿ.ಎಂ.ಇಬ್ರಾಹಿಂ
ತುಂಗಭದ್ರಾ ಜಲಾಶಯದಲ್ಲಿ ಸದ್ಯ 41 ಟಿ.ಎಂಸಿ ನೀರಿದೆ. ಜುಲೈ 10 ರಿಂದ ನೀರು ಬಿಡಲು ತೀರ್ಮಾನ ಮಾಡಲಾಗಿದ್ದು, ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ. ಒಳಹರಿವು ಕಡಿಮೆ ಇದೆ, ಹೀಗಾಗಿ ನಾವು 15 ದಿನ ಸಮಯ ತಗೆದುಕೊಂಡಿದ್ದೇವೆ ಎಂದಿದ್ದಾರೆ.