ನವದೆಹಲಿ: ಎನ್‌ಡಿಎ ಮೈತ್ರಿಕೂಟದ (NDA) ನಾಯಕನಾಗಿರುವ ನರೇಂದ್ರ ಮೋದಿ (Narendra Modi) ಅವರು ಇದೇ ಜೂ.9 ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಪ್ರಮಾಣ ವಚನ ಸಮಾರಂಭವನ್ನು ಜೂ.8 ಕ್ಕೆ ನಿಗದಿಪಡಿಸಲಾಗಿತ್ತು. ಆದರೆ ಜೂ.9 ರಂದು ಸಂಜೆ 6 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ. ದಿನಾಂಕ ಅಂತಿಮಗೊಳಿಸುವ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಇದನ್ನೂ ಓದಿ: ಅಬ್‌ಕೀ ಬಾರ್ ಸಮ್ಮಿಶ್ರ ಸರ್ಕಾರ್ – ಎನ್‌ಡಿಎ ಮೈತ್ರಿಕೂಟದ ಸಂಖ್ಯೆ 303ಕ್ಕೆ ಏರಿಕೆ!
Advertisement
Advertisement
ಶುಕ್ರವಾರ ಬೆಳಗ್ಗೆ 10:30ಕ್ಕೆ ಸಭೆ ನಡೆಸಲು ಬಿಜೆಪಿಯ ಎಲ್ಲಾ ಸಂಸದರು ಮತ್ತು ಎನ್‌ಡಿಎ ಮಿತ್ರ ಪಕ್ಷಗಳ ಸಿಎಂಗಳನ್ನು ಇಂದು ರಾತ್ರಿ ದೆಹಲಿಗೆ ಕರೆಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ.
Advertisement
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ರಾಜೀನಾಮೆ ಸಲ್ಲಿಸಿದ್ದಾರೆ. ಜೂ.9 ರಂದು ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮೋದಿಯೇ ಪ್ರಧಾನಿಯಾಗಲಿ: ಎನ್‌ಡಿಎ ಸಭೆಯಲ್ಲಿ ‘ನಮೋ’ ನಾಯಕತ್ವಕ್ಕೆ ಬಹುಪರಾಕ್
Advertisement
ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎ ಎರಡೂ ಪಕ್ಷಗಳಿಂದ ಬುಧವಾರ ತೀವ್ರ ಮಾತುಕತೆಗಳು ಮತ್ತು ಪ್ರಮುಖ ಸಭೆಗಳು ನಡೆದಿವೆ. ಯಾವುದೇ ಪಕ್ಷವು ಸ್ವತಂತ್ರವಾಗಿ ಸರ್ಕಾರ ರಚಿಸಲು ಜನಾದೇಶ ಪಡೆದುಕೊಂಡಿಲ್ಲ.
ಎನ್‌ಡಿಎ ಒಕ್ಕೂಟದ ಮಿತ್ರ ಪಕ್ಷಗಳ ನಾಯಕರು ತಮ್ಮ ಬೆಂಬಲ ಭರವಸೆ ನೀಡಿದ್ದು, ಮೋದಿ ಅವರು ಭಾನುವಾರದಂದು ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಲು ಸಿದ್ಧರಾಗಿದ್ದಾರೆ.