ನವದೆಹಲಿ: ದೇಶಾದ್ಯಂತ 508 ರೈಲ್ವೆ ನಿಲ್ದಾಣಗಳ (Railway Station) ಪುನರಾಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.
Under Amrit Bharat Station Scheme, 508 railway stations are set to be redeveloped, leading to a significant transformation of rail infrastructure in India. https://t.co/RavZz4l9Lc
— Narendra Modi (@narendramodi) August 6, 2023
Advertisement
ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ 55, ಬಿಹಾರದಲ್ಲಿ 49, ಮಹಾರಾಷ್ಟ್ರದಲ್ಲಿ 44, ಮಶ್ಚಿಮ ಬಂಗಾಳದಲ್ಲಿ 37, ಮಧ್ಯ ಪ್ರದೇಶದಲ್ಲಿ 34, ಅಸ್ಸಾಂನಲ್ಲಿ 32, ಒಡಿಶಾದಲ್ಲಿ 25, ಪಂಜಾಬ್‌ನಲ್ಲಿ 22, ಗುಜರಾತ್ ಮತ್ತು ತೆಲಂಗಾಣದಲ್ಲಿ ತಲಾ 21, ಜಾರ್ಖಂಡ್‌ನಲ್ಲಿ 20, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ತಲಾ 18, ಹರಿಯಾಣದಲ್ಲಿ 15, ಕರ್ನಾಟಕದಲ್ಲಿ 13 ಸೇರಿದಂತೆ ದೇಶಾದ್ಯಂತ ಒಟ್ಟು 508 ರೈಲ್ವೆ ನಿಲ್ದಾಣಗಳು ಇದರಲ್ಲಿ ಸೇರಿವೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.
Advertisement
Advertisement
ದೇಶದ ರೈಲ್ವೆ ನಿಲ್ದಾಣಗಳನ್ನು ಹೈಟೆಕ್ ಮಾಡುವ ನಿಟ್ಟಿನಲ್ಲಿ ಅಮೃತ್ ಭಾರತ್ ನಿಲ್ದಾಣ ಯೋಜನೆಯ (Amrit Bharat Station Scheme) ಮೊದಲ ಹಂತ ಇದಾಗಿದ್ದು, ಇದಕ್ಕಾಗಿ ಕರ್ನಾಟಕದಿಂದ ಆಯ್ಕೆಯಾದ 55 ನಿಲ್ದಾಣಗಳ ಪೈಕಿ 13 ನಿಲ್ದಾಣಗಳಿಗೆ ಇಂದು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿದೆ. ಇದನ್ನೂ ಓದಿ: ಅಮೃತ್ ಭಾರತ್; ರಾಜ್ಯದ 13 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ – ಮೋದಿಯಿಂದ ಇಂದು ಚಾಲನೆ
Advertisement
ಶಿಲಾನ್ಯಾಸಗೊಂಡ ಕರ್ನಾಟಕದ 13 ನಿಲ್ದಾಣಗಳೆಂದರೆ, ಬಳ್ಳಾರಿ, ಘಟಪ್ರಭಾ, ಗೋಕಾಕ್ ರಸ್ತೆ, ಬೀದರ್, ಮಂಗಳೂರು, ಹರಿಹರ, ಅಳ್ನಾವರ, ಗದಗ, ಅರಸೀಕೆರೆ, ಕಲಬುರಗಿ, ಶಹಾಬಾದ್, ಕೊಪ್ಪಳ. 24,470 ಕೋಟಿ ರೂ. ವೆಚ್ಚದಲ್ಲಿ ದೇಶಾದ್ಯಂತ ರೈಲ್ವೆ ನಿಲ್ದಾಣಗಳ ಮರುಅಭಿವೃದ್ಧಿ ಕಾರ್ಯ ನಡೆಯಲಿದೆ. ಇದರಲ್ಲಿ 347 ಕೋಟಿ ರೂ. ಕರ್ನಾಟಕದ ರೈಲ್ವೆ ನಿಲ್ದಾಣಗಳಿಗೆ ಮೀಸಲಿಡಲಾಗಿದೆ. ಇದನ್ನೂ ಓದಿ: 7 ಎಕರೆಯಲ್ಲಿ ಟೊಮೆಟೋ ಬೆಳೆದು ಕೋಟಿ ರೂ. ಸಂಪಾದಿಸಿದ ರೈತ
Web Stories