ಹಾವೇರಿ: ರಷ್ಯಾ ಮತ್ತು ಉಕ್ರೇನ್ ಯುದ್ಧದಲ್ಲಿ ಮೃತಪಟ್ಟ ಎಂಬಿಬಿಎಸ್ ವಿದ್ಯಾರ್ಥಿ ಕನ್ನಡಿಗ ನವೀನ್ ಕುಟುಂಬವನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ ಸಾಂತ್ವನ ಹೇಳಿದರು.
ಕೊಮ್ಮಘಟ್ಟದಲ್ಲಿ ನಡೆದ ಸಾರ್ವಜನಿಕ ಸಮಾವೇಶದ ನಂತರ ಉಕ್ರೇನ್‍ನಲ್ಲಿ ಮೃತಪಟ್ಟಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನಿವಾಸಿಯಾಗಿದ್ದ ನವೀನ್ ಗ್ಯಾನ ಗೌಡರ್ ಅವರ ತಂದೆ ಶೇಖರಪ್ಪ ಗ್ಯಾನಗೌಡರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿದರು.
Advertisement
Advertisement
ಪ್ರಧಾನಿ ಮೋದಿಯವರು ನವೀನ್ ತಂದೆ, ತಾಯಿ ಮತ್ತು ಸಹೋದರ ಜೊತೆಗೆ ನಾಲ್ಕೈದು ನಿಮಿಷಗಳ ಕಾಲ ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ನಂತರ ಮೃತ ವಿದ್ಯಾರ್ಥಿ ನವೀನ್ ತಂದೆ ಶೇಖರಗೌಡ ಮಾಹಿತಿ ನೀಡಿದರು. ನಮ್ಮ ಕಣ್ಣೀರು ನೋಡಿ ಪಿಎಂ ನರೇಂದ್ರ ಮೋದಿ ಅವರು ಭಾವುಕರಾದರು. ಮಗನ ಸಾವಿನ ದುಃಖದಲ್ಲೂ ಮಗನ ದೇಹದಾನ ಮಾಡಿದ್ದಕ್ಕೆ ಪಿಎಂ ಮೆಚ್ಚುಗೆ ವ್ಯಕ್ತಪಡಿಸಿದರು ಎಂದರು ತಿಳಿಸಿದರು. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲ್ಲ: ಗಾಂಧೀಜಿ ಮೊಮ್ಮಗ ಗೋಪಾಲಕೃಷ್ಣ ಗಾಂಧಿ
Advertisement
ನವೀನ್ ಮೃತಪಟ್ಟ ನಂತರ ನಿಮ್ಮ ಭೇಟಿಗೆ ಬರಬೇಕಾಗಿತ್ತು. ಆದರೆ ಈಗ ಕಾಲ ಕೂಡಿ ಬಂತು. ನವೀನ್ ಸಹೋದರ ಹರ್ಷ ಕೂಡ ಪ್ರತಿಭಾವಂತ ಇದ್ದಾನೆ. ಉಕ್ರೇನ್‍ನಿಂದ ಬಂದ ಎಂಬಿಬಿಎಸ್ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಬಗ್ಗೆ ವ್ಯವಸ್ಥೆ ಮಾಡುವಂತೆ ಕೇಳಿದೆವು. ಪ್ರಯತ್ನ ಮಾಡುತ್ತೇವೆ ಅಂತಾ ಹೇಳಿದರು. ನಮಗೆ ಧೈರ್ಯವಾಗಿ ಇರುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಧೈರ್ಯ ತುಂಬಿದರು. ಇದನ್ನೂ ಓದಿ: ಬೆಂಗಳೂರಿನ ಜನರು ಕೈ ಜೋಡಿಸಿದ್ರೆ ಏನೂ ಬೇಕಾದ್ರೂ ಮಾಡಬಹುದು: ಮೋದಿ ಮೆಚ್ಚುಗೆ