ನವದೆಹಲಿ: ಇಂದೇ ಪ್ರಧಾನಿ ನರೇಂದ್ರ ಮೋದಿ (Narendra Modi) ತಾಯಿ ಹೀರಾಬೆನ್ ಮೋದಿ (Heeraben Modi) ಅವರ ಅಂತ್ಯಕ್ರಿಯೆ ನಡೆಯಲಿದೆ.
ಸದ್ಯ ಗಾಂಧಿನಗರದ ಪಂಕಜ್ ಮೋದಿ (Pankaj Modi) ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಇತ್ತ ಪ್ರಧಾನಿಯವರು ಕೂಡ ಅಹಮದಾಬಾದ್ಗೆ ಭೇಟಿ ನೀಡಿದ್ದು, ಯೂಎನ್ ಮೆಹ್ತಾ (UN Mehta Hospital) ಆಸ್ಪತ್ರೆಗೆ ತೆರಳಿ ತಾಯಿಯ ಅಂತಿಮ ದರ್ಶನ ಪಡೆದಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹೀರಾಬೆನ್ ಅವರನ್ನು ಬುಧವಾರವಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3.39ರ ಸುಮಾರಿಗೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಹೀರಾಬೆನ್ ವಿಧಿವಶ- ತಾಯಿ ಮಾತುಗಳನ್ನು ಸ್ಮರಿಸಿಕೊಂಡು ಮೋದಿ ಭಾವುಕ ಟ್ವೀಟ್
ಶತಾಯುಷಿ ಹೀರಾಬೆನ್ ಅವರು ಐವರು ಪುತ್ರರು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸದ್ಯ ಹೀರಾಬೆನ್ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. ಗಣ್ಯರು ಸಂತಾಪಗಳನ್ನು ಸೂಚಿಸುತ್ತಿದ್ದಾರೆ. ಅಲ್ಲದೇ ಪ್ರಧಾನಿಯವರಿಗೆ ಧೈರ್ಯ ತುಂಬುತ್ತಿದ್ದಾರೆ.