ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ (Mysuru) ಭಾನುವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಅದ್ಧೂರಿಯಾಗಿ ನಡೆಯಿತು. ಈ ವೇಳೆ ಮೋದಿಯತ್ತ ಹೂವಿನ ದಳಗಳೊಂದಿಗೆ ಎಸೆದಿದ್ದ ಮೊಬೈಲ್ (Mobile) ಫೋನ್ ಅನ್ನು ಮಹಿಳೆಗೆ ವಾಪಸ್ ನೀಡಿದ್ದಾರೆ.
ವಿಧಾನಸಭಾ ಚುನಾವಣೆಯ ಪ್ರಚಾರದ ರಂಗು ತುಂಬಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸುಮಾರು 4 ಕಿ.ಮೀವರೆಗೆ ರೋಡ್ ಶೋ (Road Show) ನಡೆಸಿ ಗಮನ ಸೆಳೆದಿದ್ದರು. ರೋಡ್ ಶೋದ ರಸ್ತೆಯ ಇಕ್ಕೆಲಗಳಗಲ್ಲಿ ಬಿಜೆಪಿ (BJP) ಕಾರ್ಯಕರ್ತರು, ಅಭಿಮಾನಿಗಳು ಮೋದಿ ನೋಡಿ ಪುಳಕಿತರಾದರು. ಅಷ್ಟೇ ಅಲ್ಲದೇ ಮೋದಿ, ಮೋದಿ ಎಂದು ಕೂಗಿ ಸಂಭ್ರಮಿಸಿದ್ದರು. ದಾರಿಯುದ್ದಕ್ಕೂ ಮೋದಿಗೆ ಹೂ ಸುರಿಸಿದರು. ಆದರೆ ಚಿಕ್ಕಗಡಿಯಾರದ ಬಳಿ ಹೂಗಳ ಮಧ್ಯೆ ಅಚಾನಕ್ ಆಗಿ ಮೊಬೈಲ್‍ವೊಂದು ತೂರಿ ಬಂದಿತ್ತು.
Advertisement
Advertisement
ಮೊಬೈಲ್ ಬಿದ್ದ ಹಿನ್ನೆಲೆಯಲ್ಲಿ ಕೆಲ ಕಾಲ ಆತಂಕ ಸೃಷ್ಟಿ ಆಗಿತ್ತು. ಅದನ್ನು ಸ್ವತಃ ಮೋದಿ ಹಾಗೂ ಎಸ್‍ಪಿಜಿಯವರು ಗಮನಿಸಿದ್ದರು. ಅಷ್ಟೇ ಅಲ್ಲದೇ ಮೋದಿ ಅವರು ರೋಡ್ ಶೋ ವೇಳೆಯೇ ಮೊಬೈಲ್ ಅನ್ನು ಹಿಂದಿರುಗಿಸುವಂತೆ ಸನ್ನೆಯನ್ನು ಮಾಡಿದ್ದರು. ಆದರೆ ಮೊಬೈಲ್ ಪ್ರಚಾರದ ವಾಹನದ ಮೇಲ್ಗಡೆ ಬಿದ್ದಿದ್ದರಿಂದ ಯಾವುದೇ ಅನಾಹುತಗಳು ಆಗಿರಲಿಲ್ಲ. ಆದರೂ ರೋಡ್ ಶೋ ವೇಳೆ ಪ್ರಧಾನಿ ಮೋದಿಗೆ ಭದ್ರತಾ ಲೋಪ ಆಗಿದೆಯಾ ಎನ್ನುವ ಚರ್ಚೆಯೂ ಹುಟ್ಟುಹಾಕಿತ್ತು. ಇದನ್ನೂ ಓದಿ: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ – ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆ
Advertisement
Advertisement
ಇದೀಗ ಘಟನೆಗೆ ಸಂಬಂಧಿಸಿ ಎಡಿಜಿಪಿ ಅಲೋಕ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಮೊಬೈಲ್ ಫೋನ್ ಎಸೆದವರು ಮಹಿಳಾ ಬಿಜೆಪಿ ಕಾರ್ಯಕರ್ತೆಯಾಗಿದ್ದಾರೆ. ಅವರು ದುರುದ್ದೇಶದಿಂದ ಮೊಬೈಲ್ ಅನ್ನು ಎಸೆದಿಲ್ಲ, ಬದಲಿಗೆ ಹೂ ದಳಗಳನ್ನು ಎಸೆಯುವಾಗ ಆಕಸ್ಮಿಕವಾಗಿ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಎಸ್‍ಪಿಜಿಯವರು ಮೊಬೈಲ್ ಅನ್ನು ಮಹಿಳೆಗೆ ಹಿಂದಿರುಗಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ ಭಾರೀ ಇಳಿಕೆ