ಬಳ್ಳಾರಿ: ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಬರೀ ಮೋದಿ ಹೆಸರೊಂದೇ ಸಾಕಾಗಲ್ಲ. ಮೋದಿ ಹೆಸರೇಳಿಕೊಂಡು ಗೆದ್ದು ಬರುತ್ತೇವೆ ಎಂಬ ಭ್ರಮೆಯಿಂದ ಹೊರಬನ್ನಿ ಎಂದು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಖಡಕ್ ಸಂದೇಶ ನೀಡಿದ್ದಾರೆ.
Advertisement
ಬಿಜೆಪಿ ಕಾರ್ಯಕಾರಿಣಿಯಲ್ಲಿ ಬಿಎಲ್ ಸಂತೋಷ್ ಮಾಡಿದ ಭಾಷಣ ಬಿಜೆಪಿಯಲ್ಲಿ ಚರ್ಚೆಗೆ ಗ್ರಾಸವಾಗಿದೆ. ಆಡಳಿತ ವಿರೋಧಿ ಅಲೆ ಎದುರಿಸಿ ಚುನಾವಣೆ ಗೆಲ್ಲಬೇಕು. ಇದಕ್ಕಾಗಿ ಪಕ್ಷ ಸಂಘಟಿಸಿ ಎಂದು ಕರೆ ನೀಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇದೆ ಎಂಬುದನ್ನು ಪರೋಕ್ಷವಾಗಿ ಹೇಳಿದ್ದಾರೆ. ಅಲ್ಲದೇ, ಮುಂದಿನ ಚುನಾವಣೆಯಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶವಿಲ್ಲ. ಇಲ್ಲಿಯೂ ಯುಪಿ ಮಾದರಿ ಅನುಸರಿಸಲಾಗುವುದು ಎನ್ನುವ ಮೂಲಕ ಹಲವರಿಗೆ ಬಿಗ್ ಶಾಕ್ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಸ್ವರ್ಣಯುಗ ಆರಂಭವಾಗಿದೆ: ಜೆ.ಪಿ ನಡ್ಡಾ
Advertisement
Advertisement
ಬಿಜೆಪಿ ಕೋರ್ ಕಮಿಟಿ ಸಭೆ ಅಂತಿಮ ಕ್ಷಣದಲ್ಲಿ ರದ್ದುಗೊಂಡಿತು. ಬಿಜೆಪಿ ಪ್ರಮುಖರ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ರಾಜ್ಯ ಬಿಜೆಪಿ ನಾಯಕರಿಗೆ ಮೂರು ಟಾಸ್ಕ್ ನೀಡಿದ್ದಾರೆ. ಮಿಷನ್ 150 ಗುರಿ ತಲುಪಲು ಭರದ ಸಿದ್ಧತೆ ಮಾಡಿಕೊಳ್ಳಿ. ಕಷ್ಟದ ವಿಧಾನಸಭೆ ಕ್ಷೇತ್ರಗಳನ್ನು ರಿಸ್ಕ್ ಆಧಾರದಲ್ಲಿ ವಿಂಗಡಿಸಿಕೊಂಡು ಫೋಕಸ್ ಮಾಡಿ. ಕಾಂಗ್ರೆಸ್, ಜೆಡಿಎಸ್ ಕೋಟೆಗಳಲ್ಲಿ ಸ್ಪೆಷಲ್ ಫೋಕಸ್‍ಗೆ ತಾಕೀತು ಮಾಡಿದ್ದಾರೆ. ಕೇಂದ್ರ ಮತ್ತು ಸರ್ಕಾರದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡಿ. ಸಿಎಂ ಸಹಿತ ಪದಾಧಿಕಾರಿಗಳವರೆಗೆ ಎಲ್ಲರೂ ಪಕ್ಷ ಸಂಘಟನೆ ಮಾಡಿ. ಸಚಿವರು ತಮ್ಮ ಕ್ಷೇತ್ರದಲ್ಲಿ ಮಾತ್ರವಲ್ಲದೇ ಜಿಲ್ಲಾ ಸಂಘಟನೆಯ ಮೇಲೆ ಗಮನ ಹರಿಸಿ ಎಂದು ಖಡಕ್ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಪ್ರತಿಭಟನೆಗಿಳಿದ ಉಕ್ರೇನ್‌ನಿಂದ ವಾಪಸ್ ಆದ ವೈದ್ಯಕೀಯ ವಿದ್ಯಾರ್ಥಿಗಳು
Advertisement