ಮೈಸೂರು: ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ತೆರಳಿದ್ದು, ಅಲ್ಲಿ ಶಾಸಕ ರಾಮದಾಸ್ ಅವರನ್ನು ಹತ್ತಿರ ಕರೆದು ಆಪ್ತತೆಯಿಂದ ಬೆನ್ನಿಗೆ ಗುದ್ದನ್ನು ನೀಡಿದ್ದಾರೆ.
ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ಅನೇಕ ಕಡೆಗಳಲ್ಲಿ ಕಾರ್ಯಕ್ರಮವನ್ನು ನೇವೆರಿಸಿ ನಾಳೆ ಯೋಗ ದಿನದ ನಿಮಿತ್ತ ಅರಮನೆ ನಗರಿ ಮೈಸೂರಿಗೆ ತೆರಳಿದರು. ಅಲ್ಲಿ ಇಂದು ಮೈಸೂರಿನ ಮಹಾರಾಜ ಕಾಲೇಜ್ ಮೈದಾನದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಆ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಸಕ ರಾಮದಾಸ್ ಅವರನ್ನು ಹತ್ತಿರ ಕರೆದು ಮಾತನಾಡಿಸಿದರು. ಈ ಸಂದರ್ಭದಲ್ಲಿ ರಾಮದಾಸ್ ಅವರ ಬೆನ್ನನ್ನು ಬಾಗಿಸಿ ಆಪ್ತತೆಯಿಂದ ಗುದ್ದು ನೀಡಿದರು. ಉಕ್ರೇನ್‍ನಲ್ಲಿ ಮೃತಪಟ್ಟ ನವೀನ್ ಕುಟುಂಬಕ್ಕೆ ಸಾಂತ್ವನ ಹೇಳಿ ಭಾವುಕರಾದ ಮೋದಿ
ಇಂದು ಮೈಸೂರಿನ ಮಹರಾಜ ಕಾಲೇಜ್ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಸುಮಾರು 50 ಸಾವಿರ ಜನರು ಭಾಗವಹಿಸಿದ್ದಾರೆ. ಈ ಸಮಾವೇಶದಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಭಾಗದಿಂದ ಕೇಂದ್ರ ಸರ್ಕಾರದ ಫಲಾನುಭವಿಗಳು ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಫಲಾನುಭವಿಗಳನ್ನು ಉದ್ದೇಶಿ ಸಂವಾದ ಹಾಗೂ ಭಾಷಣ ಮಾಡಿದರು. ಬೆಂಗಳೂರಿನ ಜನರು ಕೈ ಜೋಡಿಸಿದ್ರೆ ಏನೂ ಬೇಕಾದ್ರೂ ಮಾಡಬಹುದು: ಮೋದಿ ಮೆಚ್ಚುಗೆ
ಎರಡು ದಿನ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಬೆಂಗಳೂರಿನ ಕೊಮ್ಮಘಟ್ಟದಲ್ಲಿ ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸುಮಾರು 15 ನಿಮಿಷಗಳ ಕಾಲ ಮಾತನಾಡಿದರು. ಕನ್ನಡದಲ್ಲೇ ಮಾತು ಪ್ರಾರಂಭಿಸಿದ ಮೋದಿ, ಕನ್ನಡಿಗರಿಗೆ ಇದು ಮಹತ್ವದ ದಿನ. ಇಂದು ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಹಲವು ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ನನಗಿದು ಬಹಳ ಸಂತೋಷವಾಗಿದೆ ಎಂದು ಹೇಳಿದರು.