ಲಕ್ನೋ: ಮಹಿಳೆಯರ ಮದುವೆ ವಯಸ್ಸನ್ನು ಏರಿಸಿರುವುದು ಮುಂದೆ ಅವರು ಹೆಚ್ಚಿನ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಯಾಗ್‌ರಾಜ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಈ ನಿರ್ಧಾರವನ್ನು ವಿರೋಧಿಸುತ್ತಿರುವವರು ಮತ್ತು ಹೆಣ್ಣು ಮಕ್ಕಳ ಹೆಚ್ಚಿನ ವಿದ್ಯಾಭ್ಯಾಸವನ್ನು ತಡೆಯುವ ಜನರು ಯಾರೆಂದು ಎಲ್ಲರಿಗೂ ತಿಳಿದಿದೆ. ಆದರೆ ಮಹಿಳೆಯರ ಕಲ್ಯಾಣಕ್ಕಾಗಿ ಅವರ ಮದುವೆ ವಯಸ್ಸನ್ನು 18ರಿಂದ 21ಕ್ಕೆ ಏರಿಸಲಾಗಿದೆ. ಸರ್ಕಾರದ ಈ ನಿಲುವಿಗೆ ಮಹಿಳೆಯರು ಸಂತೋಷಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೆಣ್ಣುಮಕ್ಕಳ ವಿವಾಹದ ವಯಸ್ಸು 18ರಿಂದ 21ಕ್ಕೆ ಏರಿಕೆ – ಕೇಂದ್ರ ಸಂಪುಟ ಅನುಮೋದನೆ
Advertisement
Advertisement
ಉತ್ತರ ಪ್ರದೇಶದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸುಮಾರು 25 ರಿಂದ 30 ಲಕ್ಷ ಮನೆಗಳನ್ನು ಮಹಿಳೆಯರ ಹೆಸರಿನಲ್ಲಿ ವಿತರಣೆ ಮಾಡಲಾಗಿದೆ. ಈಗ ಮಹಿಳೆಯರ ಮದುವೆ ವಯಸ್ಸನ್ನು ಹೆಚ್ಚಿಸಿರುವುದು ಅವರು ಹೆಚ್ಚು ಶಿಕ್ಷಣ ಪಡೆಯಲು ಸಾಧ್ಯವಾಗಲಾಗುತ್ತದೆ. ಮನೆಯ ಮಗಳಿಗಾಗಿ ದೇಶ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.
Advertisement
ಕೆಲ ವರ್ಷಗಳ ಹಿಂದೆ ಉತ್ತರ ಪ್ರದೇಶದ ರಸ್ತೆಗಳಲ್ಲಿ ಮಾಫಿಯಾಗಳು ನಡೆಯುತ್ತಿದ್ದವು. ಇದರಿಂದಾಗಿ ಹೆಣ್ಣುಮಕ್ಕಳು, ಸಹೋದರಿಯರು ನಾನಾ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಅವರು ಇಂತಹ ರಸ್ತೆಗಳಲ್ಲಿ ನಡೆದು ಶಾಲಾ-ಕಾಲೇಜುಗಳಿಗೆ ಹೋಗುವುದು ಕಷ್ಟಕರವಾಗಿತ್ತು. ಮಾಫಿಯಾ ನಡೆಸುತ್ತಿದ್ದ ಗೂಂಡಾಗಳನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈಗ ಸರಿಯಾದ ಜಾಗದಲ್ಲಿ ಇರಿಸಿದ್ದಾರೆ ಎಂದು ಹೊಗಳಿದ್ದಾರೆ. ಇದನ್ನೂ ಓದಿ: 18ನೇ ವಯಸ್ಸಿಗೆ ಪ್ರಧಾನಿಯನ್ನೇ ಆಯ್ಕೆ ಮಾಡುವ ಹೆಣ್ಣಿಗೆ ಬಾಳ ಸಂಗಾತಿ ಹೊಂದುವ ಹಕ್ಕು ಯಾಕಿಲ್ಲ: ಓವೈಸಿ ಪ್ರಶ್ನೆ
Advertisement
ಈಗ ಮಹಿಳೆಯರಿಗೆ ರಕ್ಷಣೆ, ಹಕ್ಕುಗಳು, ಅವಕಾಶಗಳಿವೆ. ನಮ್ಮ ತಾಯಂದಿರು, ಸಹೋದರಿಯರ ಆಶೀರ್ವಾದ ಇದ್ದು, ರಾಜ್ಯ ಮತ್ತೆ ಕತ್ತಲೆಯೆಡೆಗೆ ನೂಕಿಸಿಕೊಳ್ಳುವುದಿಲ್ಲ ಎಂಬ ಭರವಸೆ ನನಗಿದೆ ಎಂದು ಆಶಯ ವ್ಯಕ್ತಪಡಿಸಿದ್ದಾರೆ.
ಮಹಿಳೆಯರ ಮದುವೆ ವಯಸ್ಸನ್ನು ಹೆಚ್ಚಿಸಿರುವುದನ್ನು ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದರು ವಿರೋಧಿಸಿದ್ದರು.