ಹುಬ್ಬಳ್ಳಿ: ಪ್ರದಾನಿ ನರೇಂದ್ರ ಮೋದಿಯವರು (Narendra Modi) ನಾನು ಹೇಳಿರುವ ಹೇಳಿಕೆ ಬಗ್ಗೆ ಮಾತನಾಡಿಲ್ಲ. ಬದಲಾಗಿ ಅವರು ಸನಾತನ ಧರ್ಮದ (Sanatana Dharma) ವಿಚಾರವಾಗಿ ಮಾತನಾಡಿದ್ದಾರೆ ಎಂದು ಸಚಿವ ಜಿ. ಪರಮೇಶ್ವರ್ (G.Parameshwar) ಹೇಳಿದ್ದಾರೆ.
ಹುಬ್ಬಳ್ಳಿ (Hubballi) ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸನಾತನ ಧರ್ಮದ ಬಗ್ಗೆ ಮಾತನಾಡಿಲ್ಲ. ಬೇರೆಯವರು ಏನು ವಿಶ್ಲೇಷಣೆ ಮಾಡುತ್ತಾರೆ ಅದಕ್ಕೆಲ್ಲ ಉತ್ತರ ಕೊಡಲ್ಲ. ನಾನು ಸಮಯ ಸಂದರ್ಭದಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ ಎಂದರು. ಇದನ್ನೂ ಓದಿ: ಹಿಂದೂ ಧರ್ಮಕ್ಕೆ ಅಪಮಾನ ಮಾಡಿಲ್ಲ, ಧರ್ಮದ ಬಗ್ಗೆ ಗೌರವವಿದೆ: ಪರಮೇಶ್ವರ್
ಧರ್ಮದ ಬಗ್ಗೆ ನನ್ನ ಅಭಿಪ್ರಾಯ ಹೇಳಿದ್ದೇನೆ ಅಷ್ಟೆ. ಯಾರು ಏನು ಬೇಕಾದರೂ ವಿಶ್ಲೇಷಣೆ ಮಾಡಲಿ. ಅವರು ಹಾಗೆ ಮಾತನಾಡುತ್ತಾರೆ, ಹೀಗೆ ಮಾತನಾಡುತ್ತಾರೆ ಅಂದರೆ ನಾನು ಉತ್ತರ ಕೊಡಲ್ಲ. ಮೋದಿ ಅವರು ನಾನು ಹೇಳಿರುವ ಹೇಳಿಕೆ ಬಗ್ಗೆ ಮಾತನಾಡಿಲ್ಲ. ಸನಾತನ ಧರ್ಮದ ವಿಚಾರವಾಗಿ ಮಾತನಾಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ತಾತನ ಹೆಸರು ಗೊತ್ತಿಲ್ಲವೆಂದರೆ ತಾತ ಇಲ್ಲವೆಂದಲ್ಲ- ಜಿ.ಪರಮೇಶ್ವರ್ ಹೇಳಿಕೆಗೆ ಬಿಜೆಪಿ ಕಿಡಿ
ಬಿಜೆಪಿಯವರು (BJP) ಹೋರಾಟ ಮಾಡಲಿ. ನಾವು ಉತ್ತರ ಕೊಡುತ್ತೇವೆ. ಈಗಾಗಲೇ ಜನ ಉತ್ತರ ಕೊಟ್ಟಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಜನ ಉತ್ತರ ಕೊಡುತ್ತಾರೆ. ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಬಿಜೆಪಿಯವರಿಗೆ ಏನು ಬೇರೆ ಕಾನೂನು ಇದೆಯಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಹಿಂದೂ ಧರ್ಮವನ್ನು ಹುಟ್ಟಿಸಿದವರು ಯಾರು? – ಉದಯ್‌ನಿಧಿ ಬಳಿಕ ಜಿ. ಪರಮೇಶ್ವರ್ ಪ್ರಶ್ನೆ
ಇನ್ನೂ ಬರಗಾಲದ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗಿದೆ. ಶೀಘ್ರವೇ ಬರಗಾಲ ಘೋಷಣೆ ಮಾಡಲಾಗುವುದು. ಜೊತೆಗೆ ಕೇಂದ್ರಕ್ಕೂ ವರದಿ ಕಳುಹಿಸುತ್ತೇವೆ ಎಂದರು. ಇದನ್ನೂ ಓದಿ: ಇಂಡಿಯಾ ಹೆಸರು ಬದಲಾವಣೆ ರಾಜಕೀಯಕ್ಕಾಗಿ ಮಾತ್ರ: ಪರಮೇಶ್ವರ್
Web Stories