ಬೆಳಗಾವಿ: ಏ.28ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಬೆಳಗಾವಿಗೆ (Belagavi) ಆಗಮಿಸಲಿದ್ದು, ಬೃಹತ್ ಚುನಾವಣಾ ಸಮಾವೇಶ ನಡೆಸಲಿದ್ದಾರೆ. ಬೆಳಗಾವಿ ಲೋಕಸಭಾ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರ ಒಳಗೊಂಡಂತೆ ಬೃಹತ್ ಸಮಾವೇಶ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ (Anil Benake) ತಿಳಿಸಿದರು.
ನಗರದ ಬಿಜೆಪಿ ಮಾಧ್ಯಮ ಕಾರ್ಯಾಲಯದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.28ಕ್ಕೆ ಸಂಜೆ 5 ಗಂಟೆಗೆ ಸಮಾವೇಶ ನಡೆಯಲಿದೆ ಎಂದು ಮಾಹಿತಿ ಇತ್ತು. ಆದರೆ ಸದ್ಯದ ಮಾಹಿತಿ ಪ್ರಕಾರ, ಅಂದು ಬೆಳಗ್ಗೆ 11:30ಕ್ಕೆ ಬೆಳಗಾವಿಗೆ ಮೋದಿ ಆಗಮಿಸಿ, 12 ಗಂಟೆಗೆ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಎರಡೂ ಲೋಕಸಭೆಯ ಅಭ್ಯರ್ಥಿಗಳಾದ ಅಣ್ಣಾಸಾಬ ಜೊಲ್ಲೆ ಹಾಗೂ ಜಗದೀಶ್ ಶೆಟ್ಟರ್ ಅವರು ವೇದಿಕೆ ಮೇಲೆ ಉಪಸ್ಥಿತರಿರಲಿದ್ದಾರೆ ಎಂದರು. ಇದನ್ನೂ ಓದಿ: ಕರ್ನಾಟಕಕ್ಕೆ ಅನ್ಯಾಯ, ಮೋದಿ ಸರ್ಕಾರ ರೈತರನ್ನು ದ್ವೇಷಿಸುತ್ತಿದೆ: ಸಿಎಂ ಕಿಡಿ
Advertisement
Advertisement
ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯ ಚುನಾವಣಾ ಪ್ರಭಾರಿ ರಾಧಾ ಮೋಹನ್ ದಾಸ್, ಬೆಳಗಾವಿ ಜಿಲ್ಲೆಯ ಸಂಸದರು, ಶಾಸಕರು, ಮಾಜಿ ಶಾಸಕರು ಭಾಗವಹಿಸುತ್ತಾರೆ. ಚಿಕ್ಕೋಡಿ ಲೋಕಸಭಾ ಹಾಗೂ ಬೆಳಗಾವಿ ಲೋಕಸಭಾ ಒಳಗೊಂಡಂತೆ ಕಾರ್ಯಕ್ರಮ ಆಗಲಿದೆ. ಈಗಾಗಲೇ ಬೆಳಗಾವಿ ಹೊರವಲಯದ ಮಾಲಿನಿ ಸಿಟಿಯಲ್ಲಿ ಪೆಂಡಾಲ್ ಹಾಕಲು ಪೂಜೆ ಮಾಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ನೇಹಾ ಹಿರೇಮಠ ತಂದೆಯ ಬಳಿ ಕ್ಷಮೆಯಾಚಿಸಿದ ಸಿಎಂ!
Advertisement
Advertisement
ಬಿಜೆಪಿ ಮುಖಂಡ ಎಂ.ಬಿ.ಜಿರಲಿ ಮಾತನಾಡಿ, ಜನಪ್ರಿಯ ನಾಯಕ ಮೋದಿಯವರು ಚುನಾವಣಾ ಪ್ರಚಾರಕ್ಕೆ ರವಿವಾರ ಬರುತ್ತಿದ್ದಾರೆ. ಎರಡು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಸೇರುತ್ತಾರೆ ಎಂದು ತಿಳಿಸಿದರು. ಈ ವೇಳೆ ಎಂಎಲ್‌ಸಿ ಹನಮಂತ ನಿರಾಣಿ, ಮಾಜಿ ಶಾಸಕ ಸಂಜಯ್ ಪಾಟೀಲ್, ಬಿಜೆಪಿ ಮಹಾನಗರ ಅಧ್ಯಕ್ಷೆ ಗೀತಾ ಸುತಾರ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಶುಭಾಷ್ ಪಾಟೀಲ್, ಎಫ್‌ಎಸ್ ಸಿದ್ದನಗೌಡ, ಹನಮಂತ ಕೊಂಗಾಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಆಡಳಿತದಲ್ಲಿ ಹನುಮಾನ್ ಚಾಲೀಸಾ ಕೇಳೋದು ಅಪರಾಧ: ಬೆಂಗ್ಳೂರಿನ ಹಲ್ಲೆ ಪ್ರಸ್ತಾಪಿಸಿ ಮೋದಿ ಕಿಡಿ