ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿಯವರು (Narendra Modi) ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ (Oath Taking) ಸ್ವೀಕರಿಸಿದ್ದಾರೆ.
72 ಸಚಿವರೊಂದಿಗೆ ಇಂದು ಮೋದಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಮೂಲಕ ಜವಾಹರಲಾಲ್ ನೆಹರೂ ಬಳಿಕ ಮೂರನೇ ಬಾರಿಗೆ ಮೋದಿ ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ್ದಾರೆ. 72 ಸಚಿವರ ಪೈಕಿ 32 ಕ್ಯಾಬಿನೆಟ್ ಸಚಿವರು, 5 ಸ್ವತಂತ್ರ ಮತ್ತು 36 ರಾಜ್ಯ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದನ್ನೂ ಓದಿ: ಮೋದಿ ಸಂಪುಟಕ್ಕೆ ಜೆಪಿ ನಡ್ಡಾ?
Advertisement
Advertisement
73ರ ಹರೆಯದ ಮೋದಿ ಅವರು ಎನ್‌ಡಿಎ ಮೈತ್ರಿಕೂಟದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಧಾನಿ ಮೋದಿಗೆ ಪ್ರಮಾಣ ವಚನ ಬೋಧಿಸಿದರು. ಪ್ರಧಾನಿ ಮೋದಿ ನಂತರ ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಪ್ರಮಾಣ ವಚನ ಸ್ವೀಕರಿಸಿದರು. ಇದನ್ನೂ ಓದಿ: ನವೀನ್ ಪಟ್ನಾಯಕ್ ಆಪ್ತ ವಿ.ಕೆ.ಪಾಂಡಿಯನ್ ಸಕ್ರಿಯ ರಾಜಕಾರಣಕ್ಕೆ ವಿದಾಯ
Advertisement
Advertisement
ಇವರ ಬಳಿಕ ನಿತಿನ್ ಗಡ್ಕರಿ, ಜೆಪಿ ನಡ್ಡಾ, ಶಿವರಾಜ್ ಸಿಂಗ್ ಚೌಹಾಣ್ ಮತ್ತು ನಿರ್ಮಲಾ ಸೀತಾರಾಮನ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದನ್ನೂ ಓದಿ: ಮತ್ತೆ ಪ್ರಧಾನಿಯಾಗಿ ಮೋದಿ ಪದಗ್ರಹಣ – ಪುರಿ ಬೀಚ್‌ನಲ್ಲಿ ಮರಳು ಕಲಾಕೃತಿ ರಚಿಸಿ ಶುಭಕೋರಿದ ಕಲಾವಿದ