ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜೂನ್ 20ರಿಂದ ಅಮೆರಿಕ (America) ಪ್ರವಾಸ ಕೈಗೊಳ್ಳಲಿದ್ದು ಜೂನ್ 22 ರಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ (Joe Biden) ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.
ಮೋದಿ ಅದೇ ದಿನ ಯುಎಸ್ ಕಾಂಗ್ರೆಸ್‌ನ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ವಾಷಿಂಗ್ಟನ್‌ನಲ್ಲಿ ಮೋದಿ ಪ್ರಮುಖ ಸಿಇಒಗಳು, ವೃತ್ತಿಪರರು, ಇತರೆ ಉದ್ಯಮಿಗಳ ಜೊತೆ ಸಂವಾದಗಳನ್ನು ನಡೆಸಲು ನಿರ್ಧರಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
Advertisement
Advertisement
ಅಧ್ಯಕ್ಷ ಜೋ ಬೈಡನ್ ಮತ್ತು ಪ್ರಥಮ ಮಹಿಳೆ ಡಾ. ಜಿಲ್ ಬೈಡನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸಕ್ಕೆ ತೆರಳಲಿದ್ದಾರೆ. ಜೂನ್ 21 ರಂದು ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನದ (International Yoga Day) ಆಚರಣೆಯನ್ನು ಪ್ರಧಾನ ಮಂತ್ರಿ ಮೋದಿ ಮುನ್ನಡೆಸಲಿದ್ದಾರೆ.
Advertisement
ಜೂನ್ 21 ರಂದು ಆಚರಿಸಲಾಗುವ 9ನೇ ಅಂತಾರಾಷ್ಟ್ರೀಯ ಯೋಗ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಮೊದಲ ಬಾರಿಗೆ ಯೋಗ ಅಧಿವೇಶನವನ್ನು ಮುನ್ನಡೆಸಲಿದ್ದಾರೆ. ಯೋಗಾಭ್ಯಾಸದ ಅನೇಕ ಪ್ರಯೋಜನಗಳ ಬಗ್ಗೆ ವಿಶ್ವಾದ್ಯಂತ ಜಾಗೃತಿ ಮೂಡಿಸುವ ಗುರಿಯನ್ನು ಅಂತಾರಾಷ್ಟ್ರೀಯ ಯೋಗ ದಿನ ಹೊಂದಿದೆ. ಇದನ್ನೂ ಓದಿ: ಮಣಿಪುರ ಹಿಂಸಾಚಾರ – ಕೇಂದ್ರ ಸಚಿವರ ಮನೆಗೆ ಬೆಂಕಿಯಿಟ್ಟ ಕಿಡಿಗೇಡಿಗಳು
Advertisement
ಜೂನ್ 23 ರಂದು ವಾಷಿಂಗ್ಟನ್‌ನ ರೊನಾಲ್ಡ್ ರೇಗನ್ ಬಿಲ್ಡಿಂಗ್ ಮತ್ತು ಇಂಟರ್ನ್ಯಾಷನಲ್ ಟ್ರೇಡ್ ಸೆಂಟರ್‌ನಲ್ಲಿ ವಿಶೇಷ ಆಹ್ವಾನಿತ ಅನಿವಾಸಿ ಭಾರತೀಯರ ಸಭೆಯನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ. 15 ಭಾರತೀಯ ರಾಜ್ಯಗಳನ್ನು ಪ್ರತಿನಿಧಿಸುವ 25 ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಲು 160 ಕ್ಕೂ ಹೆಚ್ಚು ಕಲಾವಿದರು ಕಳೆದ ವಾರದಿಂದ ಅಮೆರಿಕದಲ್ಲಿ ತಾಲೀಮು ನಡೆಸುತ್ತಿದ್ದಾರೆ. ಬಹುತೇಕ ಕಲಾವಿದರು ಭಾರತದ ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆಯನ್ನು ಸಾರಲಿದ್ದಾರೆ.
ಜೂನ್ 24-25 ರಂದು ಪ್ರಧಾನಿ ನರೇಂದ್ರ ಮೋದಿ ಈಜಿಪ್ಟ್‌ನ (Egypt) ಕೈರೋಗೆ ತೆರಳಲಿದ್ದಾರೆ. ಅಧ್ಯಕ್ಷ ಅಬ್ದೆಲ್ ಫತ್ತಾಹ್ ಆಹ್ವಾನದ ಮೇರೆಗೆ ಮೋದಿ ತೆರಳುತ್ತಿದ್ದು ಇದು ಅವರ ಮೊದಲ ಈಜಿಪ್ಟ್ ಭೇಟಿಯಾಗಲಿದೆ. ಮಾತ್ರವಲ್ಲದೇ ಇದೊಂದು ಐತಿಹಾಸಿಕ ಕಾರ್ಯಕ್ರವಾಗಲಿದೆ. ಇದನ್ನೂ ಓದಿ: ಬ್ರಿಟನ್‌ನಲ್ಲಿ ತ್ರಿವರ್ಣ ಧ್ವಜ ತೆಗೆದಿದ್ದ ಖಲಿಸ್ತಾನಿ ಉಗ್ರ ಅವತಾರ್ ಸಿಂಗ್ ನಿಗೂಢ ಸಾವು