ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನವನ್ನು ನಾನು ಸ್ವೀಕರಿಸುವುದಿಲ್ಲ: ನರೇಂದ್ರ ರೈ ದೇರ್ಲ

Public TV
2 Min Read
Narendra Rai Derla Poornachandra Tejaswi

ಬೆಂಗಳೂರು: ವೈಯಕ್ತಿಕ ಕಾರಣಗಳಿಂದಾಗಿ ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನವನ್ನು ನಾನು ಸ್ವೀಕರಿಸುವುದಿಲ್ಲ ಎಂದು ಅಂಕಣಗಾರ, ಸೂಕ್ಷ್ಮ ಸಂವೇದನೆಯ ಲೇಖಕ, ಚಲನಶೀಲ ಸಂಶೋಧಕ ನರೇಂದ್ರ ರೈ ದೇರ್ಲ ಹೇಳಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಸರ್ಕಾರದಿಂದ ಎಡವಟ್ಟು – ಜೀವಂತ ಇಲ್ಲದವರಿಗೂ ಪ್ರತಿಷ್ಠಾನದ ಸದಸ್ಯ ಸ್ಥಾನ

ಪೋಸ್ಟ್‌ನಲ್ಲಿ ಏನಿದೆ?
ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ‘ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ’ದ ಅಧ್ಯಕ್ಷನನ್ನಾಗಿ ನನ್ನನ್ನು ನೇಮಕ ಮಾಡಿದ ಸುದ್ದಿ ಮಾಧ್ಯಮಗಳ ಮೂಲಕ ನನಗೆ ತಿಳಿಯಿತು. ತೇಜಸ್ವಿ ಅವರ ಒಡನಾಟ ಮತ್ತು ಅವರ ಕುರಿತು ಒಂದಷ್ಟು ಬರವಣಿಗೆ ಅವರ ಪತ್ರಗಳ ಸಂಪಾದನೆಯನ್ನು ನಾನು ಮಾಡಿರುವುದು ನಿಜ.

ಈ ಕಾರಣಕ್ಕಾಗಿಯೇ ಸರಕಾರ ನನ್ನನ್ನು ಆಯ್ಕೆ ಮಾಡಿದೆ ಎಂದು ಅನೇಕ ಸ್ನೇಹಿತರು, ಬಂಧುಗಳು, ತೇಜಸ್ವಿ ಓದುಗರು ಅಭಿನಂದಿಸಿ ನನಗೆ ಸಂದೇಶ ಕಳಿಸಿದ್ದಾರೆ. ಈ ಕುರಿತು ಘನ ಸರಕಾರಕ್ಕೂ ನನ್ನ ಧನ್ಯವಾದಗಳು. ಆದರೆ ವೈಯಕ್ತಿಕ ಕಾರಣಗಳಿಂದಾಗಿ ಸಂಬಂಧಿಸಿದ ಜವಾಬ್ದಾರಿಯನ್ನು ನಾನು ಸ್ವೀಕರಿಸುವುದಿಲ್ಲ. ಈ ಕುರಿತು ಸಂಬಂಧಿಸಿದ ಯಾವುದೇ ಇಲಾಖೆಯ ವ್ಯಕ್ತಿಗಳು, ಅಧಿಕಾರಿಗಳು ನನ್ನನ್ನು ಈವರೆಗೆ ಸಂಪರ್ಕಿಸಿಯೂ ಇಲ್ಲ. ಅಂತಹ ಪತ್ರ- ಆದೇಶ ನನಗೆ ಬಂದಿಲ್ಲ. ಇದನ್ನೂ ಓದಿ: ಅಧ್ಯಕ್ಷನಾಗಿ ಕಾರ್ಯನಿರ್ವಹಿಸಲು ಸಮಯವಿಲ್ಲ- ಸರ್ಕಾರದ ಹುದ್ದೆ ನಿರಾಕರಿಸಿದ ಸೂಲಿಬೆಲೆ

rajeshwari tejaswi

ಒಂದು ವೇಳೆ ಅದು ಬಂದಾಗಲೂ ನನ್ನ ಈ ಅಭಿಪ್ರಾಯ ಬದಲಾಗುವುದಿಲ್ಲ. ದಯವಿಟ್ಟ ಯಾರೂ ಕೂಡಾ ಇದನ್ನು ನನ್ನ ಅಹಂ, ಉದ್ದಟತನವೆಂದು ಭಾವಿಸಬಾರದು. ಇಂಥ ಸರಳ ಸೌಜನ್ಯ- ನಿರಾಕರಣೆಗೆ ನನಗೆ ತೇಜಸ್ವಿ ಅವರೇ ಸ್ಪೂರ್ತಿ. ಸರಕಾರ ಮುಂದೆ ಯಾರನ್ನೇ ಬೇಕಾದರೂ ಆಯ್ಕೆ ಮಾಡಲಿ, ತೇಜಸ್ವಿಯ ವಿಚಾರದಲ್ಲಿ ಅವರಿಗೆ ನನ್ನ ಸಹಾಯ ಇದ್ದೇ ಇದೆ. ಆದರೆ ಇಂಥ ಪ್ರತಿಷ್ಠಾನ ಪ್ರಾಧಿಕಾರ ಅಕಾಡೆಮಿಗಳಿಗೆ ನೇಮಕ ಮಾಡುವಾಗ ಸೌಜನ್ಯಕ್ಕಾದರೂ ಅವರನ್ನು ಸಂಪರ್ಕಿಸಿ ಪೂರ್ವಾನುಮತಿಯನ್ನು ಪಡೆಯುವುದು ಹೆಚ್ಚು ಸೂಕ್ತ. ಆಗ ಇಂತಹ ಅನಪೇಕ್ಷಿತ ಮುಜುಗರವೂ ತಪ್ಪುತ್ತದೆ. ದಯವಿಟ್ಟು ಸಂಸ್ಕೃತಿ ಇಲಾಖೆ ಇದನ್ನು ಗಮನಿಸಬೇಕೆಂದು ವಿನಮ್ರ ಕೋರಿಕೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *