ನವದೆಹಲಿ: ಕೃಷಿ ತ್ಯಾಜ್ಯಗಳನ್ನು ಸುಡುವುದನ್ನು ಅಪರಾಧವಲ್ಲ ಎಂದು ಪರಿಗಣಿಸಬೇಕು ಎಂಬ ರೈತ ಸಂಘಟನೆಗಳ ಬೇಡಿಕೆಯನ್ನು ಸರ್ಕಾರವು ಒಪ್ಪಿಗೊಂಡಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಕೃಷಿ ತ್ಯಾಜ್ಯ ಸುಡುವುದು ದೆಹಲಿ-ಎನ್‍ಸಿಆರ್ ಪ್ರದೇಶದ ವಾಯುಮಾಲಿನ್ಯಕ್ಕೆ ಕಾರಣ ಎನ್ನಲಾಗುತ್ತಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ರೈತ ಸಂಘಟನೆಗಳು, ಕಾರ್ಖಾನೆಗಳು, ವಾಹನಗಳು, ಹೊಗೆ ಉಗುಳುತ್ತಿವೆ. ದೀಪಾವಳಿಯ ವೇಳೆ ಪಟಾಕಿ ಸುಡುವುದರಿಂದ ವಿಷಾನಿಲ ಹೊರಹೊಮ್ಮುತ್ತಿದೆ. ಆದರೂ ಮುಗ್ಧ ರೈತರನ್ನೇ ದೂಷಿಸುವ ಕೆಲಸ ಆಗುತ್ತಿದೆ ಎಂದು ಕಿಡಿಕಾರಿದ್ದವು. ಇದನ್ನೂ ಓದಿ: ಹೊಸ ರೂಪಾಂತರಿ ವೈರಸ್ ಪೀಡಿತ ದೇಶಗಳಿಂದ ವಿಮಾನ ಹಾರಾಟ ನಿಲ್ಲಿಸಿ – ಮೋದಿಗೆ ಕೇಜ್ರಿವಾಲ್ ಮನವಿ
Advertisement
Farmer organizations had demanded to decriminalize stubble burning by farmers. Govt of India has accepted this demand as well: Union Agriculture Minister Narendra Singh Tomar pic.twitter.com/7719RkEzbt
— ANI (@ANI) November 27, 2021
Advertisement
ಮೂರು ಕೃಷಿ ಕಾಯ್ದೆ ರದ್ದತಿ ಮಸೂದೆಯನ್ನು ಸಂಸತ್ತಿನಲ್ಲಿ ಚಳಿಗಾಲದ ಅಧಿವೇಶನದ ಮೊದಲ ದಿನ ಮಂಡಿಸಲಾಗುತ್ತದೆ ಎಂದು ಮಾಹಿತಿ ನೀಡಿರುವ ತೋಮರ್, ಬೆಳೆ ವೈವಿಧ್ಯೀಕರಣ, ಶೂನ್ಯ ಬಂಡವಾಳದಲ್ಲಿ ಕೃಷಿ ಮತ್ತು ಪಾರದರ್ಶಕ ಕನಿಷ್ಠ ಬೆಂಬಲ ಬೆಲೆ ನೀತಿಗೆ ಸಂಬಂಧಿಸಿದ ವಿಚಾರಗಳ ಚರ್ಚೆ ಸಲುವಾಗಿ ಸಾಂವಿಧಾನಿಕ ಸಮಿತಿಯನ್ನು ಪ್ರಧಾನಿ ನರೇಂದ್ರ ಮೊದಿ ಘೋಷಿಸಿದ್ದಾರೆ. ರೈತ ಸಂಘಟನೆಗಳ ಪ್ರತಿನಿಧಿಗಳೂ ಸಮಿತಿಯಲ್ಲಿರಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೊರೊನಾ ಹೊಸ ವೈರಸ್ B.1.1.529 ಪತ್ತೆ – ಭಾರತದಲ್ಲಿ ಆತಂಕ
Advertisement
Advertisement