ನವದೆಹಲಿ: ಮಧ್ಯಪ್ರದೇಶ (Madhya Pradesh) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ (BJP) ಈಗ ಕೇಂದ್ರ ಸಚಿವರಿಗೆ ಟಿಕೆಟ್ ನೀಡಿದೆ. ಮೂವರು ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ಫಗ್ಗನ್ ಸಿಂಗ್ ಕುಲಸ್ತೆ ಮಧ್ಯಪ್ರದೇಶ ಚುನಾವಣೆಗೆ ಬಿಜೆಪಿಯ ಎರಡನೇ ಅಭ್ಯರ್ಥಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭೋಪಾಲ್‌ನಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕೆಲವೇ ಗಂಟೆಗಳ ನಂತರ ಹೊಸ ಪಟ್ಟಿಯನ್ನು ಪ್ರಕಟಿಸಲಾಗಿದೆ.
Advertisement
Advertisement
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ (Narendra Singh Tomar) ಅವರನ್ನು ದಿಮಾನಿ ಕ್ಷೇತ್ರದಿಂದ, ಕೇಂದ್ರ ಜಲಶಕ್ತಿ ರಾಜ್ಯ ಖಾತೆ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ (Prahlad Singh Patel) ಅವರನ್ನು ನರಸಿಂಗಪುರ ಮತ್ತು ಗ್ರಾಮೀಣಾ ಭಿವೃದ್ಧಿ ಸಚಿವ ಫಗ್ಗನ್ ಸಿಂಗ್ ಕುಲಸ್ತೆ (Faggan Singh Kulaste) ಅವರನ್ನು ನಿವಾಸ್ ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದಾರೆ. ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ (Kailash Vijayvargiya) ಅವರ ಹೆಸರನ್ನು ಇಂದೋರ್-1 ಕ್ಷೇತ್ರಕ್ಕೆ ಘೋಷಣೆ ಮಾಡಿದೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಬಿಜೆಪಿಗೆ ಬಿಗ್ ಶಾಕ್- NDA ಬಂಧ ಕಡಿದುಕೊಂಡ ಅಣ್ಣಾಡಿಎಂಕೆ
Advertisement
ತೋಮರ್ ಎರಡು ದಶಕಗಳ ನಂತರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ತೋಮರ್ ಕೊನೆಯ ಬಾರಿಗೆ 2003 ರಲ್ಲಿ ಗ್ವಾಲಿಯರ್‌ನಿಂದ ಸತತ ಎರಡನೇ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದರು.
Advertisement
ರಾಜ್ಯದಲ್ಲಿ ಬಿಜೆಪಿ ವಿರೋಧಿ ಅಲೆ ಇದೆ ಎಂಬ ಸಮೀಕ್ಷಾ ವರದಿಯ ಹಿನ್ನೆಲೆಯಲ್ಲಿ ಬಿಜೆಪಿ ಈಗ ಕೇಂದ್ರ ಸಚಿವರ ಮೊರೆ ಹೋಗಿದೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ.
Web Stories