ಶಿವಮೊಗ್ಗ/ಸಾಗರ: ಸಿಗಂದೂರಿನಿಂದ (Sigandoor) ಸಾಗರಕ್ಕೆ (Sagar) ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ (Bus) ಭಾರೀ ಪ್ರಮಾಣದ ಬೆಂಕಿ (Fire Accident) ಕಾಣಿಸಿಕೊಂಡಿದ್ದು, ಸ್ಥಳೀಯರ ಸಮಯ ಪ್ರಜ್ಞೆಯಿಂದ ಅನಾಹುತವೊಂದು ತಪ್ಪಿದೆ.
ಸಿಗಂದೂರು ಕ್ಷೇತ್ರದಿಂದ ಬಸ್ ವಾಪಸ್ ಆಗುತ್ತಿತ್ತು. ಬಸ್ ಹುಲಿದೇವರಬನದ ಬಳಿ ಬಂದಾಗ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನೂ ಗಮನಿಸಿದ ಸ್ಥಳೀಯರು ಬಸ್‌ನ್ನು ತಡೆದಿದ್ದಾರೆ. ಕೂಡಲೇ ಪ್ರಯಾಣಿಕರನ್ನು ಇಳಿಸಿ, ಬೆಂಕಿ ನಂದಿಸಿದ್ದಾರೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: 75 ಮಂದಿ ಪ್ರಯಾಣಿಕರಿದ್ದ BMTC ಬಸ್‌ನಲ್ಲಿ ಭಾರೀ ಬೆಂಕಿ – ಬಸ್ ಸುಟ್ಟು ಕರಕಲು
ಸಮಯಪ್ರಜ್ಞೆ ಮೆರೆದ ಗ್ರಾಮಸ್ಥರು ಹಾಗೂ ಬಸ್ ಸಿಬ್ಬಂದಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Kurnool Bus Fire | ಬೆಂಕಿ ವ್ಯಾಪಿಸಲು ಬೆಂಗಳೂರಿಗೆ ಸಾಗಿಸುತ್ತಿದ್ದ ಮೊಬೈಲ್ ಫೋನ್‌ಗಳು ಒಟ್ಟಾಗಿ ಸ್ಫೋಟಿಸಿದ್ದೂ ಕಾರಣ!

