ವಾಷಿಂಗ್ಟನ್: ಕ್ರಿಸ್ಮಸ್ ಹಬ್ಬಕ್ಕಾಗಿ ಬಾಹ್ಯಾಕಾಶದಲ್ಲಿ ಸುನಿತಾ ವಿಲಿಯಮ್ಸ್ (Sunita Williams) ಸಾಂತಾಕ್ಲಾಸ್ ಆಗಿ ಕಾಣಿಸಿಕೊಂಡಿದ್ದು, ಫೋಟೋವೊಂದಕ್ಕೆ ಪೋಸ್ ನೀಡಿದ್ದಾರೆ.
ಕಳೆದ ಆರು ತಿಂಗಳಿಂದ ಬಾಹ್ಯಾಕಾಶದಲ್ಲಿರುವ ಸುನಿತಾ ವಿಲಿಯಮ್ಸ್ ಇದೀಗ ಕ್ರಿಸ್ಮಸ್ ಸಂಭ್ರಮದಲ್ಲಿದ್ದಾರೆ. ಸದ್ಯ ಸುನಿತಾ ಅವರು ಸಾಂತಾ ಕ್ಲಾಸ್ ಆಗಿ ಕಾಣಿಸಿಕೊಂಡಿರುವ ಫೋಟೋವನ್ನು ನಾಸಾದ ಜಾನ್ಸನ್ ಬಾಹ್ಯಾಕಾಶ ಕೇಂದ್ರ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ವೈರಲ್ ಆಗುತ್ತಿದೆ.ಇದನ್ನೂ ಓದಿ: ಮುಂಗಡ ಟಿಕೆಟ್ ಬುಕಿಂಗ್‌ನಲ್ಲೂ ‘ಯುಐ’ ದಾಖಲೆ- ಇನ್ನೇನಿದ್ರೂ ಉಪ್ಪಿ ಮೇನಿಯಾ ಶುರು
Advertisement
Advertisement
ಹ್ಯಾಮ್ ರೇಡಿಯೋದಲ್ಲಿ ಮಾತನಾಡುವ ಸಮಯದಲ್ಲಿ ಸುನಿತಾ ವಿಲಿಯಮ್ಸ್ ಹಾಗೂ ಡಾನ್ ಪೆಟ್ಟಿಟ್ ಜೊತೆಗೂಡಿ ಫೋಟೋಗೆ ಪೋಸ್ ನೀಡಿದ್ದಾರೆ. ಫೋಟೋದಲ್ಲಿ ಇಬ್ಬರು ಸಾಂತಾಕ್ಲಾಸ್ ಟೋಪಿ ಧರಿಸಿದ್ದು, ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಲು ತಯಾರಿ ನಡೆಸುತ್ತಿದ್ದಾರೆ.
Advertisement
Another day, another sleigh ⛄️❄️@NASA_Astronauts Don Pettit and Suni Williams pose for a fun holiday season portrait while speaking on a ham radio inside the @Space_Station‘s Columbus laboratory module. pic.twitter.com/C1PtjkUk7P
— NASA’s Johnson Space Center (@NASA_Johnson) December 16, 2024
Advertisement
ಸ್ಪೇಸ್‌ಎಕ್ಸ್ ಡ್ರ‍್ಯಾಗನ್ ಕ್ಯಾಪ್ಸುಲ್, ಭೂಮಿಯಿಂದ ಸರಕು ಹಾಗೂ ಇನ್ನಿತರ ಉಡುಗೊರೆಗಳನ್ನು ಸರಬರಾಜು ಮಾಡಿದೆ ಹಾಗೂ ಕ್ರಿಸ್ಮಸ್ ಸಮೀಪಿಸುತ್ತಿರುವ ಕಾರಣ ಗಗನಯಾತ್ರಿಗಳು ತಮ್ಮ ಕುಟುಂಬ, ಸ್ನೇಹಿತರಿಗೆ ವಿಡಿಯೋ ಕರೆ ಮೂಲಕ ಸಂಪರ್ಕ ಕಲ್ಪಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ ಸುನಿತಾ ವಿಲಿಯಮ್ಸ್ 2024ರ ಜೂನ್‌ನಿಂದ ಬಾಹ್ಯಾಕಾಶದಲ್ಲಿದ್ದಾರೆ. ಎಂಟು ದಿನಗಳ ಕಾರ್ಯಾಚರಣೆಗಾಗಿ ಬಾಹ್ಯಾಕಾಶಕ್ಕೆ ತೆರಳಿದ್ದ ಅವರು ಬಾಹ್ಯಾಕಾಶ ನೌಕೆಯ ಸಮಸ್ಯೆ ಹಾಗೂ ತಾಂತ್ರಿಕ ದೋಷಗಳಿಂದಾಗಿ ಹಿಂದಿರುಗಲು ಸಾಧ್ಯವಾಗಿಲ್ಲ. 2025ರ ಫೆಬ್ರವರಿ ತಿಂಗಳಲ್ಲಿ ಭೂಮಿಗೆ ಮರಳಲಿದ್ದಾರೆ ಎಂದು ವರದಿಗಳು ತಿಳಿಸಿವೆ.ಇದನ್ನೂ ಓದಿ: NDA ಸರ್ಕಾರದ ಅವಧಿಯಲ್ಲಿ ಕರ್ನಾಟಕಕ್ಕೆ ಅತಿಹೆಚ್ಚು 2.08 ಲಕ್ಷ ಕೋಟಿ ಅನುದಾನ: ಸಂಸದ ಕೆ.ಸುಧಾಕರ್