ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್ (MLC Naseer Ahmed) ಅಹ್ಮದ್ ಅವರು ರಾಜೀನಾಮೆ ನೀಡಿದ್ದಾರೆ.
ನಜೀರ್ ಅಹ್ಮದ್ ಅವರು ಸಿಎಂ ರಾಜಕೀಯ ಕಾರ್ಯದರ್ಶಿ (CM Political Secretary) ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿ ಪತ್ರವನ್ನು ಸಿಎಂ ಸಿದ್ದರಾಮಯ್ಯನವರಿಗೆ ರವಾನಿಸಿದ್ದಾರೆ. ಇದನ್ನೂ ಓದಿ: ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಲು MLC ನಜೀರ್ ಅಹ್ಮದ್‌ಗೆ ಡೆಡ್‌ಲೈನ್
ಸೋಮವಾರ (ಏ.13) ರಂದು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ (Randeep Singh Surjewala) ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ನಜೀರ್ ಅಹ್ಮದ್‌ಗೆ ಡೆಡ್‌ಲೈನ್ ನೀಡಿದ್ದರು. ಜೊತೆಗೆ ಸಂಜೆಯೊಳಗೆ ರಾಜೀನಾಮೆ ನೀಡಬೇಕೆಂದು ಸೂಚಿಸಿದ್ದರು.
ಒಂದು ವೇಳೆ ಸಂಜೆಯೊಳಗೆ ನಜೀರ್ ಅಹಮ್ಮದ್ ರಾಜೀನಾಮೆ ಕೊಡದಿದ್ದರೆ ಅವರನ್ನು ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಲು ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಸೂಚಿಸುವುದಾಗಿ ತಿಳಿಸಿದ್ದರು. ಕಡೆ ಗಳಿಗೆಯಲ್ಲಿ ನಜೀರ್ ಅಹಮ್ಮದ್ ರಾಜೀನಾಮೆ ಪತ್ರ ರವಾನಿಸಿದ್ದಾರೆ.ಇದನ್ನೂ ಓದಿ: ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

