ನವದೆಹಲಿ: ಸಂತೋಷ್ ಪಾಟೀಲ್ ಮಾತ್ರವಲ್ಲ ಬಹಳಷ್ಟು ಗುತ್ತಿಗೆದಾರರು ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದಾರೆ. ನಾನು ತಿನ್ನಲ್ಲ, ತಿನ್ನಲು ಬಿಡುವುದಿಲ್ಲ ಎಂದು ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಏನು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ರಾಜ್ಯಸಭೆ ಸಂಸದ ನಾಸೀರ್ ಹುಸೇನ್ ಪ್ರಶ್ನಿಸಿದ್ದಾರೆ.
Advertisement
ನವದೆಹಲಿಯಲ್ಲಿ ಮಾತನಾಡಿದ ಅವರು, ಸಂತೋಷ ಪಾಟೀಲ್ ಡೆತ್‌ನೋಟ್‌ನಲ್ಲಿ ಕೆ.ಎಸ್.ಈಶ್ವರಪ್ಪ ಹೆಸರು ಉಲ್ಲೇಖಿಸಿದ್ದಾರೆ. ಸಾವಿಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಬಹಳಷ್ಟು ನಾಯಕರಿಗೆ ಪತ್ರ ಬರೆದು ನ್ಯಾಯ ಕೊಡಿಸಲು ಮನವಿ ಮಾಡಿದ್ದರು ಎಂದು ಹೇಳಿದ್ದಾರೆ. ಇದನ್ನೂ ಓದಿ: ವರ್ಕ್ ಆರ್ಡರ್ ಇಲ್ಲದೇ 4 ಕೋಟಿ ಕಾಮಗಾರಿ ಮಾಡಿದ್ದ ಸಂತೋಷ್ – ಆತ್ಮಹತ್ಯೆಗೆ ಕಾರಣ ಏನು?
Advertisement
ಸರಣಿ ಪತ್ರಗಳನ್ನು ಬರೆದರೂ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಯಾವ ನಾಯಕರು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ತಮ್ಮ ಪಕ್ಷದ ಕಾರ್ಯಕರ್ತನಿಗೆ ತಮ್ಮದೇ ಪಕ್ಷದ ನಾಯಕರಿಂದ ಅನ್ಯಾಯ ಆದರೂ ಯಾರೂ ನ್ಯಾಯ ಕೊಡಿಸಲಿಲ್ಲ. ಇದರಿಂದ ಅವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
Advertisement
Advertisement
ಸಂತೋಷ ಪಾಟೀಲ್ ಆತ್ಮಹತ್ಯೆ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ಮಾಡಬೇಕು. ಕೆ.ಎಸ್.ಈಶ್ವರಪ್ಪ ಕೂಡಲೇ ರಾಜೀನಾಮೆ ನೀಡಬೇಕು. ಒಂದು ವೇಳೆ ರಾಜೀನಾಮೆ ನೀಡದಿದ್ದಲ್ಲಿ ಕಾಂಗ್ರೆಸ್ ಉಗ್ರ ಹೋರಾಟ ಮಾಡಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ನನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ – ಡೆತ್‍ನೋಟ್ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ