ನಾಸಿಕ್: ರಬ್ಬರ್ ಬಲೂನ್ ನುಂಗಿ 8 ತಿಂಗಳ ಮಗು ಮೃತಪಟ್ಟ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಈ ಘಟನೆ ಸಿಡ್ಕೋ ವ್ಯಾಪ್ತಿಯ ಹನುಮಾನ್ ನಗರದಲ್ಲಿ ಗುರುವಾರ ನಡೆದಿದೆ.
ನಗರದ ಮನೆಯಲ್ಲಿ ರಬ್ಬರ್ ಬಲೂನ್‍ನೊಂದಿಗೆ ಆಟವಾಡುತ್ತಾ ಮಗು ಬಲೂನನ್ನು ನುಂಗಿದೆ. ಇದರಿಂದ ಮಗು ಉಸಿರುಗಟ್ಟಿ ಒದ್ದಾಡುತ್ತಿತ್ತು. ಇದನ್ನು ನೋಡಿದ ಪೋಷಕರು ಆತಂಕಕ್ಕೊಳಗಾಗಿ ಕೂಡಲೇ ಮಗುವನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಅಲ್ಲಿನ ವೈದ್ಯರು ಮಗುವಿಗೆ ಹೆಚ್ಚಿನ ಚಿಕಿತ್ಸೆಯ ಅವಶ್ಯತೆ ಇದೆ ಅಂತ ನಗರದ ಸಿವಿಲ್ ಆಸ್ಪತ್ರೆಗೆ ಮಗುವನ್ನು ಕರೆದುಕೊಮಡು ಹೋಗುವಂತೆ ಸೂಚಿಸಿದ್ದಾರೆ. ಅಂತೆಯೇ ತಂದೆ ಮಗುವನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಿದರಾದ್ರೂ, ಅದಾಗಲೇ ಮಗು ಮೃತಪಟ್ಟಿದೆ ಅಂತ ವೈದ್ಯರು ಖಚಿತಪಡಿಸಿದ್ದರು ಅಂತ ಅಂಬದ್ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement
ಮಗು ಬಲೂನನ್ನು ನುಂಗುತ್ತಿದ್ದಂತೆಯೇ ಆತನ ಉಸಿರಾಟಕ್ಕೆ ತೊಂದರೆಯಾಗಿದೆ. ಹೀಗಾಗಿ ಆತ ಉಸಿರುಗಟ್ಟಿ ಮೃತಪಟ್ಟಿದ್ದಾನೆ ಅಂತ ಆಸ್ಪತ್ರೆಯ ಮೆಡಿಕಲ್ ಆಫಿಸರ್ ಡಾ. ಆನಂದ್ ಪವಾರ್ ತಿಳಿಸಿದ್ದಾರೆ.
Advertisement
ಸದ್ಯ ಆಕಸ್ಮಿಕವಾಗಿ ಮಗು ಸಾವನಪ್ಪಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಗುವಿನ ತಂದೆ ಮೂಲತಃ ಉತ್ತರಪ್ರದೇಶದವರಾಗಿದ್ದು, ನಾಸಿಕ್ ನಲ್ಲಿ ಕಾರ್ಮಿಕರಾಗಿದ್ದಾರೆ. ಹೀಗಾಗಿ ಅವರು ನಾಸಿಕ್ ನಲ್ಲಿ ಕುಟುಂಬ ಸಮೇತ ನೆಲೆಸಿದ್ದಾರೆ.