ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ (Department of Women and Child Welfare) 600 ಕೋಟಿ ರೂ.ಗಿಂತಲೂ ಹೆಚ್ಚು ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ವಕೀಲ ನಟರಾಜ್ ಶರ್ಮಾ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ (Lakshmi Hebbalkar) ಕರ್ನಾಟಕ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಕೋಟಿ ಕೋಟಿ ಭ್ರಷ್ಟಾಚಾರ ನಡೆದಿದೆ. ಮಕ್ಕಳಿಗೆ ನೀಡುವ ಪೌಷ್ಠಿಕ ಆಹಾರ (Nutritious Food) ಸರಬರಾಜಿನಲ್ಲಿ ಅವ್ಯವಹಾರ ನಡೆದಿದೆ. ಅನರ್ಹಗೊಂಡಿರೋ ಸಹಕಾರ ಸಂಸ್ಥೆಗಳಿಂದ ಅಂಗನವಾಡಿಗಳಿಗೆ ಪೌಷ್ಠಿಕ ಆಹಾರ ಪೂರೈಕೆ ಮಾಡುವ ಟೆಂಡರ್ ನೀಡಿದ್ದಾರೆ. ಬ್ಲಾಕ್ ಲೀಸ್ಟ್ ನಲ್ಲಿರುವ ಕ್ರಿಸ್ಟಿ ಫ್ರೈಡ್ ಗ್ರಾಮ್ ಕಂಪನಿ ಜೊತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಇಲಾಖೆ ಅಧಿಕಾರಿಗಳು ಶಾಮೀಲಾಗಿ ಈ ಟೆಂಡರ್ ನೀಡಿದ್ದಾರೆ ಎಂದು ವಕೀಲರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
Advertisement
Advertisement
ಗುತ್ತಿಗೆದಾರರಿಂದ ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರ ಗುಣಮಟ್ಟ ಇರುವುದಿಲ್ಲ. ಹೀಗಾಗಿ ಸ್ಥಳೀಯ ಸೇವಾ ಸಂಘಸಂಸ್ಥೆಗಳಿಂದಲೇ ಆಹಾರ ಪೂರೈಕೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿತ್ತು. ಆದ್ರೆ ಸಚಿವರು ಕೋರ್ಟ್ ಆದೇಶ ಉಲ್ಲಂಘನೆ ಮಾಡಿದ್ದಾರೆ. ಬ್ಲಾಕ್ ಲಿಸ್ಟ್‌ನಲ್ಲಿರುವ ಕಂಪನಿಗೆ ಆಹಾರ ಪೂರೈಕೆ ಮಾಡಲು ಟೆಂಡರ್ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ದು ಜಿನ್ನಾ ಮಾನಸಿಕತೆ, ಜಮೀರ್ ಅಹ್ಮದ್ ಹೇಳಿದ್ದು ಸುಳ್ಳಲ್ಲ: ಸಿ.ಟಿ ರವಿ ತಿರುಗೇಟು
Advertisement
ಲಕ್ಷ್ಮಿ ಹೆಬ್ಬಾಳ್ಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಧಾನಕಾರ್ಯದರ್ಶಿ ಜೆ.ಸಿ ಪ್ರಕಾಶ್ ಹಾಗೂ ನಿರ್ದೇಶಕರು ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಅಕ್ರಮವಾಗಿ ಟೆಂಡರ್ ನೀಡುವ ಮೂಲಕ ಕಂಪನಿಗಳಿಂದ ಲಕ್ಷ್ಮಿ ಹೆಬ್ಬಾಳ್ಕರ್ 10% ಕಮಿಷನ್ ಸಹ ಪಡೆದಿದ್ದಾರೆ ಎಂಬುದಾಗಿಯೂ ದೂರಿನಲ್ಲಿ ತಿಳಿಸಿದ್ದಾರೆ.
Advertisement
ಈ ಸಂಬಂಧ `ಪಬ್ಲಿಕ್ ಟಿವಿ’ ಜೊತೆಗೆ ಮಾತನಾಡಿರುವ ವಕೀಲರು, ಟೆಂಡರ್ ಪಡೆಯಲು ನೀಡಿರುವ ವಿಳಾಸದ ಕಂಪನಿಯೇ ಬೆಂಗಳೂರಿನಲ್ಲಿ ಇಲ್ಲ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ವಿಚಾರವಾಗಿ ಸ್ಥಳಿಯ ಸಂಸ್ಥೆಗಳಿಗೆ ಟೆಂಡರ್ ನೀಡಬೇಕು ಎಂದು ಕೋರ್ಟ್ ಹೇಳಿದೆ. ಈ ನಿಯಮ ಕೂಡ ಉಲ್ಲಂಘನೆಯಾಗಿದೆ. 2011ರಲ್ಲಿ ಕ್ರಿಸ್ಟಿಫ್ರೈಡ್ ಕಂಪನಿಯಿಂದ ಅಂಗನವಾಡಿಗಳಿಗೆ ಆಹಾರ ಪೂರೈಕೆ ಮಾಡಲಾಗುತ್ತಿತ್ತು. ಆದ್ರೆ ಗುಣಮಟ್ಟ ಕಡಿಮೆಯಿದ್ದ ಕಾರಣ ಈ ಕಂಪನಿಯನ್ನು ಬ್ಲಾಕ್ ಲಿಸ್ಸ್‌ಗೆ ಸೇರಿಸಲಾಯಿತು. ಆದರೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಕ್ರಿಸ್ಟಿ ಪ್ರೈಡ್ ಕಂಪನಿಗಳ ಅಂಡರ್ ನಲ್ಲಿ ಬರುವ ಮೂರು ಕಂಪನಿಗಳಿಗೆ ಟೆಂಡರ್ ನೀಡಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶಾಸಕಾಂಗ ಸಭೆಗೂ ಮುನ್ನ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ- ಸಭೆ ಬಹಿಷ್ಕರಿಸಿದ ಇಬ್ಬರು ಶಾಸಕರು
ಟೆಂಡರ್ ನೀಡಿರುವ ಮೂರು ಕಂಪನಿಗಳು BISಗಳನ್ನ ಹೊಂದಿದ್ದರೂ ಸರಿಯಾದ ತಾಂತ್ರಿಕ ವ್ಯವಸ್ಥೆ, ಲ್ಯಾಬ್ ಇಲ್ಲ. ಕಂಪನಿಗಳು ನೀಡಿರುವ ವಿಳಾಸ ಚೆಕ್ ಮಾಡಿದಾಗ ಅಲ್ಲಿ ಯಾವುದೇ ತಾಂತ್ರಿಕ ತಂಡ ಇಲ್ಲ. ಬೆಂಗಳೂರು ವಿಳಾಸದಲ್ಲಿ ಪರಿಶೀಲನೆ ಮಾಡಿದ್ರೆ ಆ ಹೆಸರಿನ ಕಂಪನಿಯೇ ಇಲ್ಲ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ 10% ಕಮಿಷನ್ ನೀಡಿ ಆರ್ಡರ್ ಪಡೆಯಲಾಗಿದೆ ಎಂಬ ಮಾಹಿತಿ ಇದೆ. ಕಂಪನಿಗಳ ಜೊತೆ ಡಿಸೆಂಬರ್ 12 , 2022 ರಲ್ಲಿ ಅಗ್ರಿಮೆಂಟ್ ಆಗಿದೆ. 2023ರ ಅಕ್ಟೋಬರ್ 21ರಂದು ಆಹಾರ ಪೂರೈಕೆಗೆ ಆರ್ಡರ್ ನೀಡಲಾಗಿದೆ. ಕಮಿಷನ್ ಪಡೆದು ತಿಂಗಳಿಗೆ 150-200 ಕೋಟಿ ಮೌಲ್ಯದ ಆರ್ಡರ್ ನೀಡಲಾಗಿದೆ ಎಂದು ಆರೋಪ ಮಾಡಿದ್ದಾರೆ.