ಗೋಡ್ಸೆ ದೇಶಭಕ್ತ, ದೇಶಭಕ್ತರಾಗಿಯೇ ಇರುತ್ತಾರೆ: ಪ್ರಜ್ಞಾಸಿಂಗ್

Public TV
2 Min Read
Godse Pragya Thakur

ಭೋಪಾಲ್: ನಾಥೂರಾಮ್ ಗೋಡ್ಸೆ ದೇಶಭಕ್ತರು. ಅವರು ದೇಶಭಕ್ತರಾಗಿಯೇ ಜನರ ಮನದಲ್ಲಿ ಇರುತ್ತಾರೆ ಎಂದು ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಭೋಪಾಲ್‍ನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿ ಅವರು, ನಾಥೂರಾಮ್ ಗೋಡ್ಸೆ ಬಗ್ಗೆ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಅವರನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಅಂತವರಿಗೆ ಈ ಚುನಾವಣೆ ಮೂಲಕ ಉತ್ತರ ನೀಡಲಾಗುತ್ತದೆ ಎಂದು ನಟ ಕಮಲ್ ಹಾಸನ್ ವಿರುದ್ಧ ಕಿಡಿಕಾರಿದ್ದಾರೆ.

ಸಾಧ್ವಿ ಪ್ರಜ್ಞಾಸಿಂಗ್ ಅವರು ಏಪ್ರಿಲ್‍ನಲ್ಲಿ ನಾಥೂರಾಮ್ ಗೋಡ್ಸೆ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ್ದ ಗೋಡ್ಸೆ ಬದುಕಿದ್ದರೆ ಅವರಿಗೂ ಬಿಜೆಪಿ ಟಿಕೆಟ್ ನೀಡುತಿತ್ತು ಎಂದು ಹೇಳಿದ್ದರು. ಈ ವಿಚಾರವಾಗಿ ಅನೇಕರು ಅಸಮಾಧಾನ ಹೊರ ಹಾಕಿದ್ದರು.

ಕಮಲ್ ಹಾಸನ್ ಹೇಳಿದ್ದೇನು?:
ಅಲ್ಪಸಂಖ್ಯಾತರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ನಟ, ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಅವರು, ಭಾರತದ ಮೊದಲ ಭಯೋತ್ಪಾದಕ ಹಿಂದೂ. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿರುದ್ಧ ದೇಶದಾದ್ಯಂತ ಪರ ವಿರೋಧ ಚರ್ಚೆ ಆರಂಭವಾಗಿದೆ.

Kamal hassan

ತಮಿಳುನಾಡಿನ ತಿರುಪ್ಪರಂಕುಂಡ್ರಂ ವಿಧಾನಸಭಾ ಕ್ಷೇತ್ರದಲ್ಲಿ ಬುಧವಾರ ಕಮಲ್ ಹಾಸನ್ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಕೆಲ ದುಷ್ಕರ್ಮಿಗಳು ಚಪ್ಪಲಿ ತೂರಿದ್ದಾರೆ. ಅದೃಷ್ಟವಶಾತ್ ಕಮಲ್ ಹಾಸನ್ ಇದ್ದ ವೇದಿಕೆಯವರೆಗೂ ಚಪ್ಪಲಿ ತೂರಿ ಬರದೇ ಅಲ್ಲೇ ಜನರ ಮೇಲೆ ಬಿದ್ದಿದೆ ಎಂದು ವರದಿಯಾಗಿತ್ತು.

ವಿವಾದಿತ ಹೇಳಿಕೆ ಸಂಬಂಧ ಕಮಲ್‍ಹಾಸನ್ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದೆ. ಆದರೆ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ನಾನು ಹೇಳಿದ್ದು ‘ಐತಿಹಾಸಿಕ ಸತ್ಯ’. ಸತ್ಯ ಯಾವಾಗಲೂ ಕಹಿಯಾಗಿರುತ್ತದೆ. ಈ ಕಹಿಯೇ ಔಷಧವಾಗಿ ಬದಲಾಗಿ ಜನರ ರೋಗವನ್ನು ಗುಣಪಡಿಸಬಹುದು ಎಂದು ಹೇಳಿದ್ದರು.

KAMAL HAASAN

ಬಿಜೆಪಿ ನಾಯಕ ಹಾಗೂ ಹಿರಿಯ ವಕೀಲ ಅಶ್ವಿನಿ ಉಪಾಧ್ಯಾಯ ಅವರು, ಕಮಲ್ ಹಾಸನ್ ಹೇಳಿಕೆ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು. ಧರ್ಮವನ್ನು ಚುನಾವಣಾ ಕಣದಲ್ಲಿ ಲಾಭಕ್ಕಾಗಿ ಬಳಸುವುದನ್ನು ತಡೆಯಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ ದೆಹಲಿ ಹೈಕೋರ್ಟ್ ಈ ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಿಲ್ಲ ಎಂದು ಹೇಳಿದೆ. ಕಮಲ್ ಹೇಳಿಕೆ ಕೋರ್ಟ್‍ನ ವ್ಯಾಪ್ತಿಗೆ ಬರುವುದಿಲ್ಲ. ಬೇಕಾದರೆ ಚುನಾವಣಾ ಆಯೋಗ ನಿರ್ಧಾರ ಕೈಗೊಳ್ಳಲಿ ಎಂದು ನ್ಯಾ. ಜಿ.ಎಸ್. ಸಿಸ್ತಾನಿ ಮತ್ತು ನ್ಯಾ. ಜ್ಯೋತಿ ಸಿಂಗ್ ಅವರಿದ್ದ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

Share This Article
Leave a Comment

Leave a Reply

Your email address will not be published. Required fields are marked *