ಬೆಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ನಾಥುರಾಮ್ ಗೋಡ್ಸೆಯ ದೇಶಭಕ್ತಿಗೆ ಸಂಬಂಧಿಸಿದಂತೆ ಮಾಡಿದ್ದ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ.
ಮಧು ಪೂರ್ಣಿಮಾ ಕಿಶ್ವರ್ ಎಂಬವರು, ಗೋಡ್ಸೆ ಗಾಂಧೀಜಿಯನ್ನು ಹತ್ಯೆ ಮಾಡಿದ್ದರೂ ಓಡಿ ಹೋಗಿರಲಿಲ್ಲ. ಶರಣಾಗಿ ವಿಚಾರಣೆ ಹಾಜರಾಗಿ ಧೈರ್ಯದಿಂದ ನಾನು ಗಾಂಧೀಜಿಯನ್ನು ಹತ್ಯೆ ಮಾಡಿದ್ದು ಯಾಕೆ ಎಂದು ಸಮರ್ಥಿಸಿಕೊಂಡಿದ್ದ. ಕೊಲೆ ಮಾಡಿದ್ದನ್ನು ನಾನು ಖಂಡಿಸುತ್ತೇನೆ. ಆದರೆ ಗೋಡ್ಸೆ ದೇಶಭಕ್ತಿಯನ್ನು ನಾನು ಮೆಚ್ಚುತ್ತೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು.
Advertisement
Advertisement
ಈ ಟ್ವೀಟ್ ಗೆ ಅನಂತ್ ಕುಮಾರ್ ಹೆಗ್ಡೆ, ಬದಲಾದ ಸನ್ನಿವೇಶದಲ್ಲಿ 7 ವರ್ಷದ ಬಳಿಕ ಇಂದಿನ ತಲೆಮಾರುಗಳು ಈ ವಿಚಾರದ ಬಗ್ಗೆ ಚರ್ಚೆ ನಡೆಸುತ್ತಿರುವುದು ಸಂತೋಷ ತಂದಿದೆ. ನಾಥುರಾಮ್ ಗೋಡ್ಸೆ ಈ ಚರ್ಚೆಯನ್ನು ನೋಡಿ ಸಂತೋಷ ಪಡಬಹುದು ಎಂದು ಅಭಿಪ್ರಾಯ ಬರೆದು ಟ್ವೀಟ್ ಮಾಡಿದ್ದರು.
Advertisement
ಈ ಟ್ವೀಟ್ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಹೆಗ್ಡೆ, ನನ್ನ ಟ್ವಿಟ್ಟರ್ ಖಾತೆ ನಿನ್ನೆಯಿಂದ ಹ್ಯಾಕ್ ಆಗಿದೆ. ಗಾಂಧೀಜಿಯನ್ನು ಹತ್ಯೆಗೈದ ವಿಚಾರವನ್ನು ನಾನು ಸಮರ್ಥಿಸಿಕೊಳ್ಳುವುದಿಲ್ಲ. ದೇಶಕ್ಕೆ ಗಾಂಧೀಜಿಯವರು ನೀಡಿದ ಕೊಡುಗೆಯ ಬಗ್ಗೆ ನನಗೆ ಗೌರವವಿದೆ ಎಂದಿದ್ದಾರೆ.
Advertisement
ಕಳೆದ ಒಂದು ವಾರದಲ್ಲಿ ಎರಡು ಬಾರಿ ನನ್ನ ಖಾತೆ ಹ್ಯಾಕ್ ಆಗಿದೆ. ನನ್ನ ಟೈಮ್ ಲೈನಿನಲ್ಲಿ ಪ್ರಕಟಗೊಂಡ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದೇನೆ ಎಂದು ಹೇಳಿದ್ದಾರೆ.
My account was hacked since yesterday. There is no question of justifying Gandhi ji's murder. There can be no sympathy or justification of Gandhi ji's murder. We all have full respect for Gandhi ji's contribution to the nation.
— Anantkumar Hegde (@AnantkumarH) May 17, 2019