ಶ್ರೀನಗರ: ಜಮ್ಮು ಮತ್ತು ಕಾಶ್ಮೀರ (Jammu And Kashmir) ವ್ಯಾಪ್ತಿಯ ಎಲ್ಲಾ ಶಾಲೆಗಳಲ್ಲೂ ರಾಷ್ಟ್ರಗೀತೆ ಕಡ್ಡಾಯಗೊಳಿಸುವಂತೆ ಇಲ್ಲಿನ ಶಿಕ್ಷಣ ಇಲಾಖೆ (Education Department) ನಿರ್ದೇಶನ ನೀಡಿದೆ. ಕೇಂದ್ರಾಡಳಿತ ಪ್ರದೇಶದ ವ್ಯಾಪ್ತಿಯಲ್ಲಿರುವ ಎಲ್ಲಾ ಶಾಲೆಗಳನ್ನೂ ಬೆಳಗ್ಗೆ ರಾಷ್ಟ್ರಗೀತೆಯೊಂದಿಗೆ (National Anthem) ಪ್ರಾರಂಭಿಸುವಂತೆ ನಿರ್ದೇಶನ ನೀಡಿ ಸುತ್ತೋಲೆ ಹೊರಡಿಸಿದೆ.
ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ನಿಗದಿಪಡಿಸಬೇಕು. ಇದು ವಿದ್ಯಾರ್ಥಿಗಳಲ್ಲಿ ಏಕತೆ ಮತ್ತು ಶಿಸ್ತಿನ ಭಾವನೆ ಮೂಡಿಸುವಲ್ಲಿ ಪ್ರಮುಖ ಪಾತ್ರವಹಿಸಲಿದೆ. ಈ ಮೂಲಕ ಸಮಗ್ರತೆ ಹಾಗೂ ನೈತಿಕ ಮೌಲ್ಯಗಳನ್ನು ಬೆಳೆಸಲು ಶಾಲೆಯ ಬೆಳಗ್ಗಿನ ವೇದಿಕೆ ಸಹಕಾರಿಯಾಗಲಿದೆ ಎಂದು ಇಲಾಖೆ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಎತ್ತಿನಹೊಳೆ ಯೋಜನೆಗೆ ಇರುವ ಸಮಸ್ಯೆ ನಿವಾರಿಸಲು ಜಂಟಿ ಸರ್ವೇಗೆ ನಿರ್ಧಾರ: ಡಿಕೆಶಿ
ಕೆಲವು ಶಾಲೆಗಳಲ್ಲಿ ಈಗಾಗಲೇ ಈ ನಿಯಮ ಪಾಲನೆಯಾಗುತ್ತಿದೆ. ಇನ್ನೂ ಕೆಲವು ಶಾಲೆಗಳಲ್ಲಿ ಅಂತಹ ಮಹತ್ವದ ಆಚರಣೆಯನ್ನು ಏಕರೂಪವಾಗಿ ಪಾಲಿಸುತ್ತಿಲ್ಲ ಎಂಬುದು ಗಮನಕ್ಕೆ ಬಂದಿದೆ. ಇನ್ನುಮುಂದೆ ಎಲ್ಲಾ ಶಾಲೆಗಳಲ್ಲೂ ರಾಷ್ಟ್ರಗೀತೆ ಕಡ್ಡಾಯಗೊಳಿಸಲಾಗಿದೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.
ಇದರೊಂದಿಗೆ ಅತಿಥಿ ಉಪನ್ಯಾಸಕರು ಹಾಗೂ ತಜ್ಞರನ್ನು ಆಹ್ವಾನಿಸಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಮಾದಕ ವಸ್ತುಗಳ ವಿರುದ್ಧ ಮಕ್ಕಳಲ್ಲಿ ಜಾಗೃತಿ ಮೂಡಿಸುವಂತೆ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಕುವೈತ್ ಅಗ್ನಿ ದುರಂತದಲ್ಲಿ ಕಲಬುರಗಿ ವ್ಯಕ್ತಿ ಸಾವು