ನವದೆಹಲಿ: ಸಿನಿಮಾ ಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶ ಪ್ರಕಟಿಸಿದೆ.
ಚಿತ್ರ ಮಂದಿರದಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸುವುದು ಬೇಡ ಎಂದು ಕೇಂದ್ರ ಸರ್ಕಾರ ಸೋಮವಾರ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿತ್ತು. ಇಂದು ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ತಾನು ಈ ಹಿಂದೆ ನೀಡಿದ್ದ ಆದೇಶವನ್ನು ಪರಿಷ್ಕರಿಸಿದೆ. ಇದನ್ನೂ ಓದಿ: ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ವಿರೋಧ ವ್ಯಕ್ತಪಡಿಸಿದ ಬಾಲಿವುಡ್ ಕಲಾವಿದರು!
Advertisement
ಈ ಹಿಂದಿನ ವಿಚಾರಣೆ ವೇಳೆ ರಾಷ್ಟ್ರಗೀತೆ ವಿಚಾರದಲ್ಲಿ ಜನರ ದೇಶ ಭಕ್ತಿಯನ್ನು ಪರಿಶೀಲಿಸುವುದು ಎಷ್ಟ ಸರಿ? ತಮ್ಮ ಭುಜದ ಮೇಲೆ ದೇಶಭಕ್ತಿಯ ಸಂಕೇತವನ್ನು ಹೊಂದಿರಬೇಕು ಎಂದು ಯಾಕೆ ನೀವು ಬಯಸುತ್ತೀರಿ ಎಂದು ಪ್ರಶ್ನಿಸುವ ಮೂಲಕ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಅಷ್ಟೇ ಅಲ್ಲದೇ ದೇಶಪ್ರೇಮದ ಹೆಸರಿನಲ್ಲಿ ನಡೆಯುತ್ತಿರುವ ಅನೈತಿಕ ಪೊಲೀಸ್‍ಗಿರಿಗೆ ಕಡಿವಾಣ ಹಾಕಲು ರಾಷ್ಟ್ರಗೀತೆ ಕಡ್ಡಾಯ ಆದೇಶ ರದ್ದು ಮಾಡುವ ಬಗ್ಗೆ ಕೋರ್ಟ್ ಸುಳಿವು ನೀಡಿತ್ತು. ಇದನ್ನೂ ಓದಿ: ವಧುವಿನ ಕೈ ಹಿಡಿಯುವಾಗ ಚಿಕ್ಕಮಗಳೂರಿನ ಕಲ್ಯಾಣ ಮಂಟಪದಲ್ಲಿ ಮೊಳಗಿತು ರಾಷ್ಟ್ರಗೀತೆ
Advertisement
ಸೋಮವಾರದ ವಿಚಾರಣೆಯಲ್ಲಿ ಅಟರ್ನಿ ಜನರಲ್ ವೇಣುಗೋಪಾಲ್ ರಾವ್, ಸಾರ್ವಜನಿಕ ಸ್ಥಳಗಳಲ್ಲಿ ರಾಷ್ಟ್ರಗೀತೆ ನುಡಿಸುವ, ಹಾಡುವ ವಿಷಯಕ್ಕೆ ಸಂಬಂಧಿಸಿ ವಿಧಿ, ವಿಧಾನ ರೂಪಿಸಲು 12 ಸದಸ್ಯರನ್ನೊಳಗೊಂಡ ಅಂತರ ಸಚಿವಾಲಯ ಸಮಿತಿ ರಚಿಸಲಾಗಿದೆ. ಆರು ತಿಂಗಳ ಒಳಗಾಗಿ ಸಮಿತಿ ವರದಿ ನೀಡಲಿದ್ದು, ಅಲ್ಲಿಯವರೆಗೆ ರಾಷ್ಟ್ರಗೀತೆ ಕಡ್ಡಾಯ ಬೇಡ ಎಂದು ಮನವಿ ಮಾಡಿದ್ದರು. ಇದನ್ನೂ ಓದಿ: ಚೀನಾದಲ್ಲಿ ರಾಷ್ಟ್ರಗೀತೆಗೆ ಅಗೌರವ ತೋರಿದವರಿಗೆ 3 ವರ್ಷ ಜೈಲು ಶಿಕ್ಷೆ!
Advertisement
ರಾಷ್ಟ್ರಗೀತೆ ಕಡ್ಡಾಯ ಎಂದು ಸುಪ್ರೀಂಕೋರ್ಟ್ 2016ರ ನವೆಂಬರ್ ನಲ್ಲಿ ಆದೇಶ ಪ್ರಕಟಿಸಿತ್ತು. ಈ ಸಂದರ್ಭದಲ್ಲಿ ಕೇಂದ್ರ ಪರ ಹಾಜರಿದ್ದ ಅಟಾರ್ನಿ ಜನರಲ್, ಸಿನೆಮಾ ಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ ಮಾಡುವುದು ನಿರ್ಧಾರ ಸರಿಯಾಗಿದ್ದು, ಇದರಿಂದ ಏಕತೆ ಸಾರುತ್ತದೆ ಎಂದು ವಾದಿಸಿದ್ದರು.