ನವದೆಹಲಿ: ಸಾಧಾರಣವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ಆರಂಭವಾಗುವ ಮುನ್ನ ಆಯಾ ರಾಷ್ಟ್ರಗಳ ರಾಷ್ಟ್ರಗೀತೆ ಮೊಳಗುವುದು ಸಾಮಾನ್ಯ. ಆದರೆ ಶ್ರೀಲಂಕಾ ವಿರುದ್ಧ ಗುರುವಾರ ಪಲ್ಲೆಕೆಲೆಯಲ್ಲಿ ಆರಂಭವಾಗಲಿರುವ ಎರಡನೇ ಏಕದಿನ ಪಂದ್ಯದಲ್ಲಿ ರಾಷ್ಟ್ರಗೀತೆ ಮೊಳಗುವುದಿಲ್ಲ.
ಈ ವಿಚಾರವಾಗಿ ಪ್ರತಿಕ್ರಿಯಿಸಿದ ಶ್ರೀಲಂಕಾ ಕ್ರಿಕೆಟ್ ತಂಡದ ಮಾಧ್ಯಮ ಮ್ಯಾನೇಜರ್ ದಿನೇಶ್ ರತ್ನಸಿಂಗಮ್, ನಾವು ಶಿಷ್ಟಾಚಾರವನ್ನು ಆರಂಭಿಸಿದ್ದು, ಪಂದ್ಯದ ಮೊದಲ ದಿನ ಮಾತ್ರ ನಾವು ರಾಷ್ಟ್ರಗೀತೆ ನುಡಿಸಲಾಗುತ್ತದೆ ಎಂದು ಹೇಳಿದ್ದಾರೆ.
Advertisement
ಡಾಂಬುಲದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ರಾಷ್ಟ್ರಗೀತೆಯನ್ನು ಹಾಡಲಾಗಿತ್ತು, ಮುಂದೆ ಸೆಪ್ಟೆಂಬರ್ 6 ರಂದು ಕೊಲಂಬೋದ ಪ್ರೇಮದಾಸ ಸ್ಟೇಡಿಯಂನಲ್ಲಿರುವ ಮೊದಲ ಟಿ-20 ಪಂದ್ಯದಲ್ಲಿ ರಾಷ್ಟ್ರಗೀತೆ ಮೊಳಗಲಿದೆ ಎಂದು ಅವರು ತಿಳಿಸಿದರು.
Advertisement
ಗಾಲೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಎರಡೂ ರಾಷ್ಟ್ರಗಳ ರಾಷ್ಟ್ರಗೀತೆ ನುಡಿಸಲಾಗಿತ್ತು. ಕೊಲಂಬೋದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಶಿಷ್ಟಾಚಾರದ ಪ್ರಕಾರ ರಾಷ್ಟ್ರಗೀತೆ ಮೊಳಗಿರಲಿಲ್ಲ.
Advertisement
ಐದು ಏಕದಿನ ಪಂದ್ಯಗಳ ಮೊದಲ ಪಂದ್ಯವನ್ನು ಭಾರತ ಶಿಖರ್ ಧವನ್ ಮತ್ತು ನಾಯಕ ವಿರಾಟ್ ಕೊಹ್ಲಿ ಅವರ ಅತ್ಯುತ್ತಮ ಆಟದಿಂದಾಗಿ 9 ವಿಕೆಟ್ ಗಳಿಂದ ಜಯಗಳಿಸಿತ್ತು.
Advertisement
ಇದನ್ನೂ ಓದಿ: ಲಂಕಾ ವಿರುದ್ಧ ಶತಕ ಸಿಡಿಸಿ ದಾಖಲೆ ಬರೆದ ಧವನ್