ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶನ ಮಾಡುತ್ತಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾ ಎಲ್ಲಿಯವರೆಗೆ ಬಂತು ಎಂಬುದರ ಬಗ್ಗೆ ಇದೀಗ ಇಂಟರೆಸ್ಟಿಂಗ್ ಅಪ್‌ಡೇಟ್ ಸಿಕ್ಕಿದೆ. ಇದೇ ಆಗಸ್ಟ್ ಕೊನೆಯ ವಾರದಲ್ಲಿ ಮತ್ತೆ ‘ಕಾಂತಾರ 1’ (Kantara Chapter 1) ಶೂಟಿಂಗ್ ಶುರುವಾಗಲಿದೆ ಎಂಬ ಮಾಹಿತಿ ಸಿಕ್ಕಿದೆ.
ಹೊಂಬಾಳೆ ಸಂಸ್ಥೆ ನಿರ್ಮಾಣದ ಬಹುನಿರೀಕ್ಷಿತ ಚಿತ್ರವು 2025ರ ಆರಂಭದಲ್ಲಿ ಚಿತ್ರಮಂದಿರಗಳಿಗೆ ಬರುವ ನಿರೀಕ್ಷೆಯಿದೆ. ಆಗಸ್ಟ್ ಕೊನೆಯ ವಾರದಲ್ಲಿ 4ನೇ ಹಂತದ ಶೂಟಿಂಗ್ ಶುರುವಾಗಲಿದೆ. ಇದನ್ನೂ ಓದಿ:ಹಿಂದಿ ಸಿನಿಮಾಗಳಲ್ಲಿ ಭಾರತವನ್ನು ಕೆಟ್ಟದಾಗಿ ತೋರಿಸಲಾಗಿದೆ: ರಿಷಬ್ ಶೆಟ್ಟಿ
4ನೇ ಹಂತದ ಚಿತ್ರೀಕರಣದಲ್ಲಿ ಕಂಪ್ಲಿಟ್ ಹೈವೋಲ್ಟೇಜ್ ಆ್ಯಕ್ಷನ್ ದೃಶ್ಯಗಳು ಶೂಟ್ ಮಾಡಲಾಗುತ್ತದೆ. ಚಿತ್ರವು ಪೂರ್ಣಗೊಳ್ಳುವ ಹಂತದಲ್ಲಿದೆ. ಅದಕ್ಕಾಗಿ ತೆರೆಮರೆಯಲ್ಲಿ ಭಾರೀ ತಯಾರಿ ನಡೆಯುತ್ತಿವೆ.
‘ಕಾಂತಾರ ಚಾಪ್ಟರ್ 1’ ಸಿನಿಮಾ ಕಾಂತಾರದ ಹಿಂದಿನ ಕತೆಯಾಗಿದೆ. ಕದಂಬ ಯುಗದ ಪಂಜುರ್ಲಿ ದೇವತೆಯ ಕಥೆಯನ್ನು ಇದು ಹೊಂದಿದೆ. ಕಾಂತಾರ ಮೊದಲ ಭಾಗದ ಮೇಲೆ ಅಭಿಮಾನಿಗಳಿಗೆ ಬೆಟ್ಟದಷ್ಟು ನಿರೀಕ್ಷೆಯಿದೆ.