ನವದೆಹಲಿ: ಮಿಜೋರಾಂ, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ಬಳಿಕ, ಲೋಕಸಭಾ ಚುನಾವಣೆಗೂ (Lok Sabha Elections) ಮುನ್ನವೇ ಕಾಂಗ್ರೆಸ್ 2ನೇ ಹಂತದ ಭಾರತ್ ಜೋಡೋ ಯಾತ್ರೆ (Bharat Jodo Yatra) ಹಮ್ಮಿಕೊಳ್ಳಲು ಚಿಂತನೆ ನಡೆಸಿದೆ. ಡಿಸೆಂಬರ್ ತಿಂಗಳಿಂದ ಫೆಬ್ರವರಿ ನಡುವೆ ಯಾವುದೇ ಸಮಯದಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
Advertisement
ಸಂಸದ ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲೇ 2ನೇ ಹಂತದ ಭಾರತ್ ಜೋಡೊ ಮುಂದುವರಿಯಲಿದ್ದು, ಹೈಬ್ರಿಡ್ ಮೋಡ್‌ನಲ್ಲಿ ನಡೆಯುವ ಸಾಧ್ಯತೆಯಿದೆ. ಕಾರ್ಯಕ್ರದಲ್ಲಿ ಭಾಗವಹಿಸುವವರು ಕಾಲ್ನಡಿಗೆಯಲ್ಲಿ ಮೆರವಣಿಗೆ ಅಥವಾ ವಾಹನಗಳನ್ನು ಬಳಸಬಹುದಾಗಿದೆ. ಆದ್ರೆ ರಾಹುಲ್ ಗಾಂಧಿ ಈ ಮೊದಲಿನಂತೆ ಕಾಲ್ನಡಿಗೆಯಲ್ಲೇ ಯಾತ್ರೆ ಮಾಡಲಿದ್ದಾರೆ. ಇದನ್ನೂ ಓದಿ: ಪಂಚರಾಜ್ಯಗಳ ಚುನಾವಣೆ ಘೋಷಣೆ – ರಾಜ್ಯ ಬಿಜೆಪಿ ಶಾಸಕರಿಗೆ ಹೈಕಮಾಂಡ್ ಜವಾಬ್ದಾರಿ ಹಂಚಿಕೆ
Advertisement
Advertisement
ಭಾರತ್ ಜೋಡೋ ಯಾತ್ರೆಯ ಮೊದಲ ಹಂತವು ಸೆಪ್ಟೆಂಬರ್ 7, 2022 ರಿಂದ ಜನವರಿ 2023ರವರೆಗೂ ನಡೆಯಿತು. ತಮಿಳುನಾಡಿನ (TamilNadu) ಕನ್ಯಾಕುಮಾರಿಯಿಂದ ಪ್ರಾರಂಭವಾಗಿ ಸರಿಸುಮಾರು 4,080 ಕಿಮೀ ಗಳಷ್ಟು ದೂರ ಕ್ರಮಿಸಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಯಾತ್ರೆಯನ್ನ ಮುಕ್ತಾಯಗೊಳಿಸಲಾಗಿತ್ತು. ಇದನ್ನೂ ಓದಿ: ದೆಹಲಿಯಲ್ಲಿ ವಾಯು ಮಾಲಿನ್ಯ – ಪಂಜಾಬ್, ಹರಿಯಾಣ, ಯುಪಿ ಸರ್ಕಾರಕ್ಕೂ ಸುಪ್ರೀಂ ಚಾಟಿ
Advertisement
ಯಾತ್ರೆಯು 12 ರಾಜ್ಯಗಳ 75 ಜಿಲ್ಲೆಗಳ ಮೂಲಕ 126 ದಿನಗಳಲ್ಲಿ ಸಾಗಿತು, ಇದು ಭಾರತದ ಸುದೀರ್ಘ ಪಾದಯಾತ್ರೆಯಾಗಿದೆ. ಕಾಂಗ್ರೆಸ್ ನಾಯಕರು ಮತ್ತು ಯಾತ್ರೆಯಲ್ಲಿ ಭಾಗವಹಿಸುವ ಇತರರು ಆಯಾ ರಾಜ್ಯಗಳಲ್ಲಿ ತಳಮಟ್ಟದ ಜನಸಂಖ್ಯೆಯೊಂದಿಗೆ ಸಂವಾದದಲ್ಲಿ ಭಾಗಿಯಾಗಿದ್ದರು. ಈ ಜನಾಂದೋಲನದ ಪ್ರಾಥಮಿಕ ಉದ್ದೇಶವು ಕಾಂಗ್ರೆಸ್‌ನಿಂದ ಪ್ರಚಾರ ಮಾಡಲ್ಪಟ್ಟಿದೆ. ಜನರ ಜೊತೆಗೆ ರಾಹುಲ್ ಗಾಂಧಿ ಅವರೂ ಸಹ ಸಂವಾದ ನಡೆಸಿ, ಸಮಸ್ಯೆಗಳನ್ನು ಆಲಿಸಿದ್ದರು. ಕೇಂದ್ರ ಸರ್ಕಾರದ ಆಡಳಿತ, ಬಿಜೆಪಿ ವಿಭಜಕ ರಾಜಕೀಯದ ವಿರುದ್ಧ ಭಾರತವನ್ನು ಒಂದುಗೂಡಿಸುವುದು. ನಿರುದ್ಯೋಗ ಮತ್ತು ಅಸಮಾನತೆಯಂತಹ ಇತರ ಸಾಮಾಜಿಕ-ಆರ್ಥಿಕ ಸಮಸ್ಯೆಗಳನ್ನು ಬಗ್ಗೆ ರಾಹುಲ್ ಗಾಂಧಿ ಚರ್ಚಿಸಿದ್ದರು.
ಕಳೆದ ಸೆಪ್ಟೆಂಬರ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಕಾಂಗ್ರೆಸ್ ನಾಯಕ ಮತ್ತು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಪಕ್ಷವು 2ನೇ ಹಂತದ ಭಾರತ್ ಜೋಡೋ ಯಾತ್ರೆ ಯೋಜಿಸುತ್ತಿದೆ. ಯೋಜನೆಯು ನಿರ್ಮಾಣ ಹಂತದಲ್ಲಿದೆ ಎಂದು ಹೇಳಿದ್ದರು. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರು ರಾಹುಲ್ ಗಾಂಧಿ ಅವರನ್ನು ಪೂರ್ವದಿಂದ ಪಶ್ಚಿಮಕ್ಕೆ ಮತ್ತೊಂದು ಭಾರತ್ ಜೋಡೋ ಯಾತ್ರೆ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಇದನ್ನೂ ಓದಿ: ಕೇಜ್ರಿವಾಲ್ ಜೈಲಿಗೆ ಹೋದರೂ ಅವರೇ ಸಿಎಂ ಆಗಿ ಮುಂದುವರಿಯಬೇಕು: ದೆಹಲಿ ಸಚಿವೆ